ADVERTISEMENT

ಯಡಿಯೂರಪ್ಪ ವಿರುದ್ಧ ಸೇಡಿನ ರಾಜಕಾರಣ: ಈಶ್ವರಪ್ಪ ಖಂಡನೆ

​ಪ್ರಜಾವಾಣಿ ವಾರ್ತೆ
Published 20 ಆಗಸ್ಟ್ 2017, 8:20 IST
Last Updated 20 ಆಗಸ್ಟ್ 2017, 8:20 IST

ಶಿವಮೊಗ್ಗ: ಸಚಿವ ಡಿ.ಕೆ.ಶಿವಕುಮಾರ್ ಮನೆಯ ಮೇಲೆ ಆದಾಯ ತೆರಿಗೆ ದಾಳಿ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇಡಿನ ರಾಜಕೀಯ ಮಾಡುತ್ತಿದ್ದಾರೆ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೆ.ಎಸ್. ಈಶ್ವರಪ್ಪ ಆರೋಪಿಸಿದರು.

ಮುಖ್ಯಮಂತ್ರಿ ಎಸಿಬಿ ದುರ್ಬಳಕೆ ಮಾಡಕೊಂಡು ಹೈಕೋರ್ಟ್‌ನಲ್ಲಿ ಖುಲಾಸೆಯಾಗಿದ್ದ ಪ್ರಕರಣ ಮತ್ತೆ ಆರಂಭಿಸಲು ಮುಂದಾಗಿದ್ದಾರೆ. ಎಸಿಬಿ ದುರ್ಬಳಕೆ ಖಂಡಿಸಿ ಹಾಗೂ ಮುಖ್ಯಮಂತ್ರಿ ರಾಜೀನಾಮೆಗೆ ಆಗ್ರಹಿಸಿ ಭಾನುವಾರ ರಾಜ್ಯದ ಎಲ್ಲೆಡೆ ಬಿಜೆಪಿ ಪ್ರತಿಭಟನೆ ನಡೆಸಲಿದೆ ಎಂದು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಹಿರಿಯ ಶ್ರೇಣಿಯ ಕೆಎಎಸ್ ಅಧಿಕಾರಿ ಬಸವರಾಜೇಂದ್ರ ಮೇಲೆ ಎಸಿಬಿ ಡಿವೈಎಸ್‌ಪಿ ಬಾಲರಾಜ್ ಹಾಗೂ ಆಂಥೋಣಿ ಮೂಲಕ ಒತ್ತಡ ತಂದು ಯಡಿಯೂರಪ್ಪ ವಿರುದ್ಧ ಹೇಳಿಕೆ ನೀಡುವಂತೆ ಆ. 6 ಮತ್ತು 19 ರಂದು ಎರಡು ಬಾರಿ ಬಲವಂತ ಮಾಡಿದ್ದಾರೆ. ಈ ಕುರಿತು ಬಸವರಾಜೇಂದ್ರ ಅವರು ಸರ್ಕಾರದ ಮುಖ್ಯಕಾರ್ಯದರ್ಶಿಗೆ ಹಾಗೂ ರಾಜ್ಯಪಾಲರಿಗೆ ಪತ್ಯೇಕ ಪತ್ರ ಬರೆದಿದ್ತಿದಾರೆ. ಈ ಪತ್ರದ ಪತ್ರಿ ಲಭ್ಯವಾಗಿದೆ ಎಂದರು.

ADVERTISEMENT

ಸುಳ್ಳು ಹೇಳಿಕೆ ನೀಡುವಂತೆ ಅಧಿಕಾರಿಯ ಮೇಲೆ ಒತ್ತಡ ತಂದಿರುವುದು ಕ್ರಿಮಿನಲ್ ಅಪರಾಧ. ಸಂವಿಧಾನದ ಆಶಯ ಎತ್ತಿ ಹಿಡಿಯಬೇಕಾದ ಮುಖ್ಯಮಂತ್ರಿ ಈ ರೀತಿ ಅಧಿಕಾರ ದುರ್ಬಳಕೆ ಮಾಡಿಕೊಳ್ಳುವುದು ಖಂಡನೀಯ. ಹೀಗಾಗಿ ಮುಖ್ಯಮಂತ್ರಿ ತಕ್ಷಣ ರಾಜೀನಾಮೆ ನೀಡಬೇಕು. ಇಲ್ಲದಿದ್ದರೆ ರಾಜ್ಯಪಾಲರು ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿದರು.

ಪತ್ರಿಕಾಗೋಷ್ಠಿಯಲ್ಲಿ ರಾಜ್ಯಸಭಾ ಮಾಜಿ ಸದಸ್ಯ ಆಯನೂರು ಮಂಜುನಾಥ್‌, ಮುಖಂಡರಾದ ಎಸ್.ದತ್ತಾತ್ರಿ, ಡಿ.ಎಸ್. ಅರುಣ್, ಜ್ನಾನೇಶ್ವರ್, ಅಶೋಕ್ ನಾಯ್ಕ, ಎನ್.ಜೆ. ರಾಜಶೇಖರ್, ಕೆ.ಜಿ.ಕುಮಾರಸ್ವಾಮಿ, ಹಿರಣ್ಣಯ್ಯ, ರತ್ನಾಕರ ಶೆಣೈ ಉಪಸ್ಥಿತರಿದ್ದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.