ADVERTISEMENT

ಲಿಂಗನಮಕ್ಕಿ ಹಿನ್ನೀರಿನಲ್ಲಿ ಮೀನುಗಾರಿಕೆಗೆ ಚಾಲನೆ

​ಪ್ರಜಾವಾಣಿ ವಾರ್ತೆ
Published 1 ಡಿಸೆಂಬರ್ 2017, 5:10 IST
Last Updated 1 ಡಿಸೆಂಬರ್ 2017, 5:10 IST

ಸಾಗರ: ತಾಲ್ಲೂಕಿನ ಲಿಂಗನಮಕ್ಕಿ ಜಲಾಶಯದ ಕೆಳಗಿನ 15 ಎಕರೆ ಪ್ರದೇಶ ಮೀನುಗಾರಿಕೆ ನಡೆಸಲು ಯೋಗ್ಯವಾಗಿದೆ. ಈ ಪ್ರದೇಶದಲ್ಲಿ ಮೀನುಮರಿ ಬಿತ್ತನೆಗೆ ಅವಕಾಶ ನೀಡುವಂತೆ ಅನುಮತಿ ಕೋರಿ ಕರ್ನಾಟಕ ವಿದ್ಯುತ್‌ ನಿಗಮಕ್ಕೆ ಪತ್ರ ಬರೆಯಲಾಗಿದೆ ಎಂದು ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಹೇಳಿದರು.

ತಾಲ್ಲೂಕಿನ ಹಸಿರುಮಕ್ಕಿಯ ಶರಾವತಿ ಹಿನ್ನೀರಿನ ಪ್ರದೇಶದಲ್ಲಿ ಮೀನುಗಾರಿಕೆ ಇಲಾಖೆ ಬುಧವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮೀನುಮರಿ ಬಿತ್ತನೆಗೆ ಚಾಲನೆ ನೀಡಿ ಅವರು ಮಾತನಾಡಿದರು.

ಲಿಂಗನಮಕ್ಕಿ ಜಲಾಶಯ ಪ್ರದೇಶದಲ್ಲಿ ಮೀನುಗಾರಿಕೆಗೆ ಅವಕಾಶ ನೀಡಿದರೆ ಪ್ರತಿ ವರ್ಷ 60ರಿಂದ 70 ಲಕ್ಷ ಮೀನುಮರಿಗಳನ್ನು ದಾಸ್ತಾನು ಮಾಡಬಹುದು. ಇದಕ್ಕೆ ಅಗತ್ಯವಿರುವ ಹಣವನ್ನು ಭರಿಸಲು ಸರ್ಕಾರ ಸಿದ್ಧವಿದೆ ಎಂದರು.

ADVERTISEMENT

‘ನಾರಗೋಡು ಕಾನು ಪರಿಶೀಲಿಸಿ ಕ್ರಮ’:‘ಈ ಹಿಂದೆ ಹಲವು ಖಾತೆ ಕಾನು ಪ್ರದೇಶವನ್ನು ಸರ್ಕಾರದ ವಶಕ್ಕೆ ತೆಗೆದುಕೊಂಡಿದೆ. ಇದರ ನಡುವೆ ಕೆಲವು ಜಮೀನುಗಳು ಸಂಬಂಧಪಟ್ಟ ಖಾತೆದಾರರ ಹೆಸರಿನಲ್ಲೇ ಮುಂದುವರಿದಿದೆ.

ನಾರಗೋಡು ಗ್ರಾಮದ ಸ.ನಂ.43ರ ಜಮೀನಿನ ಖಾತೆ ಹೊಂದಿರುವವರ ಪರ ಹೈಕೋರ್ಟ್‌ ತೀರ್ಪು ನೀಡಿದೆ ಎಂದೂ ಹೇಳಲಾಗುತ್ತಿದೆ. ಈ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು’ ಎಂದು ಪ್ರತಿಕ್ರಿಯಿಸಿದರು. ತಾಲ್ಲೂಕು ಪಂಚಾಯ್ತಿ ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷ ಅಶೋಕ ಬರದವಳ್ಳಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.