ADVERTISEMENT

ಲೋಕಕಲ್ಯಾಣಾರ್ಥ ಲಕ್ಷ ಹೂವಿನ ಅರ್ಚನೆ

​ಪ್ರಜಾವಾಣಿ ವಾರ್ತೆ
Published 23 ಸೆಪ್ಟೆಂಬರ್ 2017, 9:42 IST
Last Updated 23 ಸೆಪ್ಟೆಂಬರ್ 2017, 9:42 IST

ರಿಪ್ಪನ್‌ಪೇಟೆ: ಅತಿಶಯ ಮಹಾ ಕ್ಷೇತ್ರ ಹೊಂಬುಜದಲ್ಲಿ ಶರನ್ನವರಾತ್ರಿಯ ಅಂಗವಾಗಿ ಮಹಾಮಾತೆ ಪದ್ಮಾವತಿ ಅಮ್ಮನವರಿಗೆ ವಿಶೇಷ ಲಕ್ಷ ಹೂವಿನ ಅರ್ಚನೆಯು ಮಠದ ಪೀಠಾಧಿಕಾರಿ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ವರ್ಯ ಸ್ವಾಮೀಜಿ ಮಾರ್ಗದರ್ಶನದಲ್ಲಿ ಶುಕ್ರವಾರ ವಿಜೃಂಭಣೆಯಿಂದ ಜರುಗಿತು.

ನಂತರ ನಡೆದ ಧರ್ಮ ಸಭೆಯಲ್ಲಿ ಮಾತನಾಡಿದ ಅವರು, ದೇಶದಲ್ಲಿ ಸುಖ-ಶಾಂತಿ- ಸಮೃದ್ಧಿ ನೆಲೆಸಲಿ ಎಂದು ಆಶಿಸಿದರು. ರಾಜ್ಯ ಹಾಗೂ ಹೊರ ರಾಜ್ಯದ ವಿವಿಧೆಡೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಬಂದಿದ್ದ ಶ್ರಾವಕ, ಶ್ರಾವಕಿಯರು ಲಕ್ಷ ಹೂವಿನ ಪೂಜೆಯಲ್ಲಿ ಪಾಲ್ಗೊಂಡಿದ್ದರು.

ಪದ್ಮಾವತಿ ಅಮ್ಮನವರಿಗೆ ಧಾರ್ಮಿಕ ವಿಧಿ ವಿಧಾನದಂತೆ ವಿಶೇಷ ಹೂವಿನ ಅಲಂಕಾರ ಮಾಡಿ ಪೂಜೆ ಮಾಡಲಾಯಿತು. ಸೆ. 27ರಂದು ಸರಸ್ವತಿ ಪೂಜೆ, 28ರಂದು ಜೀವದಯಾಷ್ಟಮಿ, 29ರಂದು ಆಯುಧ ಪೂಜೆ ಹಾಗೂ 30ರಂದು ವಿಜಯದಶಮಿ ಉತ್ಸವ, ಶ್ರೀದೇವಿ ಪಲ್ಲಕ್ಕಿ ಉತ್ಸವ, ಡಾ. ದೇವೇಂದ್ರ ಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ವರ್ಯ ಸ್ವಾಮೀಜಿ ಅವರ ಸಿಂಹಾಸನಾರೋಹಣ ಹಾಗೂ ಶ್ರೀಗಳವರ ಪಾದಪೂಜೆ ನಡೆಯಲಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.