ADVERTISEMENT

ಶಾಸಕಿ ಶಾರದಾ ವಿರುದ್ಧ ಬಿಜೆಪಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 22 ಸೆಪ್ಟೆಂಬರ್ 2017, 9:07 IST
Last Updated 22 ಸೆಪ್ಟೆಂಬರ್ 2017, 9:07 IST

ಶಿವಮೊಗ್ಗ: ಗ್ರಾಮಾಂತರ ಶಾಸಕಿ ಶಾರದಾ ಪೂರ‍್ಯಾನಾಯ್ಕ ಅವರ ಆಡಳಿತ ವೈಫಲ್ಯ ಖಂಡಿಸಿ ಗುರುವಾರ ಬಿಜೆಪಿ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಲ್ಲೂ ಭ್ರಷ್ಟಾಚಾರವಾಗಿದೆ. ಕುಡಿಯುವ ನೀರಿನ ಯೋಜನೆಯಡಿ 111 ಹಳ್ಳಿಗಳಿಗೆ ₹ 158.71 ಕೋಟಿ ಮಂಜೂರಾಗಿದೆ. ಆದರೆ, ಇದುವರೆಗೂ ಯಾವುದೇ ಕಾಮಗಾರಿ ಪೂರ್ಣವಾಗಿಲ್ಲ. ತುಂಗಾ ಏತ ನೀರಾವರಿ ಯೋಜನೆ ಮಂಜೂರಾಗಿ 26 ಕೆರೆ ತುಂಬಿಸಲು 1.48 ಕೋಟಿ ಹಣಕ್ಕೆ ಟೆಂಡರ್ ಕರೆಯಲಾಗಿತ್ತು. ಇಲ್ಲೂ ಕೂಡ ಯಾವ ಕಾಮಗಾರಿಗಳು ನಡೆದಿಲ್ಲ ಎಂದು ಆರೋಪಿಸಿದರು.

ಬೂದಿಗೆರೆ ಏತ ನೀರಾವರಿ ಕಾಮಗಾರಿ ಸಂಪೂರ್ಣ ಕಳಪೆಯಾಗಿದೆ. ಪೂರ್ಣಪ್ರಮಾಣದ ಬಿಲ್ ಪಾವತಿಯಾಗಿದ್ದರೂ, ಕೆರೆಗಳಿಗೆ ನೀರು ಕೊಡಲು ಸಾಧ್ಯವಾಗಿಲ್ಲ. ಈ ಎಲ್ಲ ಅವ್ಯವಹಾರಗಳ ತನಿಖೆಯಾಗಬೇಕು ಎಂದು ಒತ್ತಾಯಿಸಿದರು.

ADVERTISEMENT

ಬಿಜೆಪಿ ಜಿಲ್ಲಾ ಘಕಟದ ಅಧ್ಯಕ್ಷ ಎಸ್. ರುದ್ರೇಗೌಡ, ಮುಖಂಡರಾದ ಆಯನೂರು ಮಂಜುನಾಥ್, ಎಚ್.ಸಿ. ಬಸವರಾಜಪ್ಪ, ಕೆ.ಇ. ಕಾಂತೇಶ್, ಕೆ.ಜಿ. ಕುಮಾರಸ್ವಾಮಿ, ಆರ್.ಕೆ. ಸಿದ್ದರಾಮಣ್ಣ, ಪದ್ಮಿನಿ ಹುಚ್ಚೂರಾವ್, ಬಿಳಿಕಿ ಕೃಷ್ಣಮೂರ್ತಿ ಪ್ರತಿಭಟನೆಯ ನೇತೃತ್ವ ವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.