ADVERTISEMENT

3 ಟಿಪ್ಪರ್, 8 ಟ್ರ್ಯಾಕ್ಟರ್ ಸಹಿತ ಅಕ್ರಮ ಮರಳು ವಶ

​ಪ್ರಜಾವಾಣಿ ವಾರ್ತೆ
Published 29 ನವೆಂಬರ್ 2017, 5:29 IST
Last Updated 29 ನವೆಂಬರ್ 2017, 5:29 IST

ಸೊರಬ: ತಾಲ್ಲೂಕಿನ ಚಂದ್ರಗುತ್ತಿ ವರದಾ ನದಿಯಿಂದ ಪಟ್ಟಣಕ್ಕೆ ಸೋಮವಾರ ತಡರಾತ್ರಿ ಅಕ್ರಮ ಮರಳು ಸಾಗಾಟ ಮಾಡುತ್ತಿದ್ದ ಗುಂಪಿನ ಮೇಲೆ ಡಿಸಿಬಿ ಪೊಲೀಸರು ಕರಡಿಗೇರಿ ಕ್ರಾಸ್ ಸಮೀಪ ದಾಳಿ ನಡೆಸಿದರು. ಮರಳು ಸಹಿತ  ಮೂರು ಟಿಪ್ಪರ್, ಎಂಟು ಟ್ರ್ಯಾಕ್ಟರ್ ವಶಪಡಿಸಿಕೊಂಡರು.

ಯಾವುದೇ ಭಯವಿಲ್ಲದೇ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಆರೋಪಿಗಳನ್ನು ಖಚಿತ ಮಾಹಿತಿ ಮೇರೆಗೆ ಬಂಧಿಸುವಲ್ಲಿ ಡಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ. ವಾಸು, ಚಂದ್ರು, ಪರಮೇಶ್ವರ, ಮಹೇಂದ್ರ, ಲಕ್ಷ್ಮಣ್, ಅಶೋಕ, ರಾಘು, ಅಶೋಕ, ಕನ್ನಪ್ಪ, ಪ್ರವೀಣ, ಪ್ರಶಾಂತ್ ಅವರನ್ನು ಬಂಧಿಸಿ, ಸೊರಬ ಪೊಲೀಸರ ವಶಕ್ಕೆ ಒಪ್ಪಿಸಲಾಗಿದೆ. ಸೊರಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಿಲ್ಲಾ ವರಿಷ್ಠಾಧಿಕಾರಿ ಅಭಿನವ್ ಖರೆ ಅವರಿಗೆ ದೊರೆತ ಖಚಿತ ಮಾಹಿತಿ ಮೇರೆಗೆ ಅವರ ಹಾಗೂ ಹೆಚ್ಚುವರಿ ಜಿಲ್ಲಾ ರಕ್ಷಣಾಧಿಕಾರಿ ಮುತ್ತುರಾಜ್ ಅವರ ಮಾರ್ಗದರ್ಶನದಲ್ಲಿ ಜಿಲ್ಲಾ ಅಪರಾಧ ದಳ(ಡಿಸಿಬಿ)ದ ಪೊಲೀಸ್ ಇನ್ಸ್‌ಪೆಕ್ಟರ್ ಕುಮಾರ್ ಕೆ. ಹಾಗೂ ಸಿಬ್ಬಂದಿ ಸೇರಿ 12 ಜನರ ತಂಡ ರೈತರಂತೆ ಅಂಗಿ, ಪಂಚೆ, ಟವಲ್ ಧರಿಸಿ ದಾಳಿ ನಡೆಸಿದರು.

ADVERTISEMENT

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.