ADVERTISEMENT

ಬಿಜೆಪಿ ಗೋಡೆ ಬರಹ ಅಭಿಯಾನಕ್ಕೆ ಚಾಲನೆ

​ಪ್ರಜಾವಾಣಿ ವಾರ್ತೆ
Published 9 ಫೆಬ್ರುವರಿ 2018, 6:58 IST
Last Updated 9 ಫೆಬ್ರುವರಿ 2018, 6:58 IST

ರಿಪ್ಪನ್‌ಪೇಟೆ: ರಾಜ್ಯದಲ್ಲಿ ಕಾಂಗ್ರೆಸ್ ಮುಕ್ತ ಸರ್ಕಾರ ರಚನೆಗೆ ಬಿಜೆಪಿ ಸನ್ನದ್ಧವಾಗಿದ್ದು, ಬೂತ್ ಮಟ್ಟದಲ್ಲಿ ಜನಜಾಗೃತಿ ಮೂಡಿಸುವ ಮೂಲಕ ಪಕ್ಷ ಸಂಘಟನೆಗೆ ಒತ್ತು ನೀಡಲಾಗುವುದು ಎಂದು ಮಾಜಿ ಸಚಿವ ಹರತಾಳು ಹಾಲಪ್ಪ ಹೇಳಿದರು.

ಪಟ್ಟಣದಲ್ಲಿ ಈ ಬಾರಿ ಬಿಜೆಪಿ ಸರ್ಕಾರ ಎಂಬ ಗೋಡೆ ಬರಹಕ್ಕೆ ಚಾಲನೆ ನೀಡಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಗ್ರಾಮೀಣ ಭಾಗದಲ್ಲಿ ಹಲವು ಕಾರ್ಯಕ್ರಮಗಳನ್ನು ರೂಪಿಸಿ, ಮತದಾರರ ಮನ ಮುಟ್ಟುವ ಕಾರ್ಯವನ್ನು ಮಾಡುವುದಾಗಿ ಅವರು ತಿಳಿಸಿದರು.

ಸಾಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 262 ಬೂತ್‌ಗಳಿದ್ದು ಸರ್ಕಾರಿ, ಅರೆ ಸರ್ಕಾರಿ ಮತ್ತು ವಿರೋಧ ಇರುವಲ್ಲಿ ಈ ನಾಮಫಲಕ ಹಾಕದೆ ತಲಾ ಒಂದು ಬೂತ್‌ನಲ್ಲಿ 5 ರಂತೆ ಅಪೇಕ್ಷಿತರ ಮತ್ತು ಅಭಿಮಾನಿಗಳ ಮನೆಯ ಮುಂಭಾಗದಲ್ಲಿ ಮಾತ್ರ ಗೋಡೆ ಬರಹಕ್ಕೆ ಸೂಚನೆ ನೀಡಲಾಗಿದೆ ಎಂದರು.

ADVERTISEMENT

ಕೇಂದ್ರ ಸಚಿವರ ಭೇಟಿ: ಫೆ. 19 ರಂದು ತುಮರಿ ಸೇತುವೆ ನಿರ್ಮಾಣ ಕಾಮಗಾರಿಗೆ ಕೇಂದ್ರ ಸಚಿವ ಗಡ್ಕರಿ ಚಾಲನೆ ನೀಡುವುದಾಗಿ ತಿಳಿಸಿದ ಅವರು ಶರಾವತಿ ಮುಳುಗಡೆ ಸಂತ್ರಸ್ತರ ಬದುಕಿಗೆ ಹೊಸ ಬೆಳಕು ಚೆಲ್ಲಿದಂತಾಗಿದೆ ಎಂದರು.

ಶಕ್ತಿ ಕೇಂದ್ರದ ಅಧ್ಯಕ್ಷ ನೆವಟೂರು ದೇವೇಂದ್ರಪ್ಪ ಗೌಡ , ಮುಖಂಡರಾದ ಆರ್.ಟಿ.ಗೋಪಾಲ್, ಎಂ.ಬಿ.ಮಂಜುನಾಥ, ಎಂ.ಸುರೇಶ್ ಸಿಂಗ್, ಮಾ.ಜಿ.ಪಂ.ಸ. ಎ.ಟಿ.ನಾಗರತ್ನ, ಎಂ.ಆನಂದ ಮೆಣಸೆ, ರಾಜೇಶ್ ಕೀಳಂಬಿ, ಮಂಜುನಾಥ ಕಾಮತ್, ಜಿ.ಡಿ.ಮಲ್ಲಿಕಾರ್ಜುನ, ಲೀಲಾಶಂಕರ್, ತ.ಮ.ನರಸಿಂಹ, ಕಗ್ಗಲಿ ಲಿಂಗಪ್ಪ, ಕೆ.ಬಿ.ಹೂವಪ್ಪ, ಹೆಡ್ತ್ರಿ ಷಣ್ಮುಖಪ್ಪ ಮತ್ತು ಅವರೂ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.