ADVERTISEMENT

ಗ್ರಾಮ ಪಂಚಾಯಿತಿ ಉಪಾಧ್ಯಕ್ಷರ ಆಯ್ಕೆ

​ಪ್ರಜಾವಾಣಿ ವಾರ್ತೆ
Published 28 ಮಾರ್ಚ್ 2017, 8:33 IST
Last Updated 28 ಮಾರ್ಚ್ 2017, 8:33 IST
ಮಧುಗಿರಿ: ತಾಲ್ಲೂಕಿನ ಕಸಬಾ ಹೋಬಳಿಯ ಸಿದ್ದಾಪುರ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಕೆ.ಹೇಮಲತಾ ಸೋಮವಾರ ಆಯ್ಕೆಯಾದರು. 
ಈ ಹಿಂದೆ ಉಪಾಧ್ಯಕ್ಷರಾಗಿದ್ದ ಶ್ರೀರಂಗಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದ ಚುನಾವಣೆ ನಡೆಯಿತು.

ಗ್ರಾಮ ಪಂಚಾಯಿತಿಯಲ್ಲಿ ಒಟ್ಟು 18 ಸದಸ್ಯರಿದ್ದು, ಉಪಾಧ್ಯಕ್ಷ ಸ್ಥಾನಕ್ಕೆ ಜೆಡಿಎಸ್ ಬೆಂಬಲಿತ ಅಭ್ಯರ್ಥಿ ನರಸೇಗೌಡ ಹಾಗೂ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಹೇಮಲತಾ ನಾಮಪತ್ರ ಸಲ್ಲಿಸಿದ್ದರು. ಚುನಾವಣೆ ನಡೆದು ತಲಾ 9 ಮತಗಳನ್ನು ಸಮನಾಗಿ ಪಡೆದ ಕಾರಣ ಚುನಾವಣಾಧಿಕಾರಿ ಹಾಗೂ ತಹಶೀಲ್ದಾರ್ ಎಚ್.ಶ್ರೀನಿವಾಸ್ ಲಾಟರಿ ಮೂಲಕ ಉಪಾಧ್ಯಕ್ಷರನ್ನು ಆಯ್ಕೆ ಮಾಡಲಾಯಿತು. 
 
ಜಿ.ಪಂ ಸದಸ್ಯ ಜಿ.ಜೆ.ರಾಜಣ್ಣ, ತುಮುಲ್ ಅಧ್ಯಕ್ಷ ಕೊಂಡವಾಡಿ ಚಂದ್ರಶೇಖರ್, ಪುರಸಭೆ ಮಾಜಿ ಅಧ್ಯಕ್ಷ ಎನ್.ಗಂಗಣ್ಣ, ಸದಸ್ಯರಾ ಎಂ.ಎಸ್.ಚಂದ್ರಶೇಖರ್, ಬೆಂಕಿಪುರ ಮಂಜುನಾಥ್, ಗ್ರಾ.ಪಂ ಅಧ್ಯಕ್ಷೆ ಮಂಜಮ್ಮ, ಸದಸ್ಯರಾದ ತುಂಗೋಟಪ್ಪ, ಪ್ರೆಸ್ ಕಂಬಣ್ಣ, ನಾಗಮಣಿ, ಶ್ರೀರಂಗಯ್ಯ, ರತ್ನಮ್ಮ, ಪುಟ್ಟಮ್ಮ, ಎಸ್.ಟಿ.ಕಂಬಣ್ಣ, ರಾಘವೇಂದ್ರ, ಪವಿತ್ರ, ಮುಖಂಡರಾದ ಸಿ.ರಾಜು, ಕೃಷ್ಣಮೂರ್ತಿ, ವಿರೂಪಾಕ್ಷಯ್ಯ, ಎಸ್.ಬಿ.ಪ್ರಸನ್ನಕುಮಾರ್, ಆನಂದ್, ಲೋಕೇಶ್, ಅಶ್ವತ್ಥನಾರಾಯಣ ಉಪಸ್ಥಿತರಿದ್ದರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.