ADVERTISEMENT

ನಿವೇಶನ ಹಂಚಿಕೆಯಲ್ಲಿ ಆಕ್ರಮ: ಆರೋಪ

​ಪ್ರಜಾವಾಣಿ ವಾರ್ತೆ
Published 6 ಸೆಪ್ಟೆಂಬರ್ 2017, 7:02 IST
Last Updated 6 ಸೆಪ್ಟೆಂಬರ್ 2017, 7:02 IST

ಮಧುಗಿರಿ: ತಾಲ್ಲೂಕು ಐ.ಡಿ.ಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಕನ್ನಡ ಜಾಗೃತಿ ವೇದಿಕೆ ಹಾಗೂ ದಲಿತಪರ ಸಂಘಟನೆ ಪದಾಧಿಕಾರಿಗಳು ಗ್ರಾಮ ಪಂಚಾಯಿತಿ ಕಚೇರಿ ಮುಂಭಾಗ ಸೋಮವಾರ ಪ್ರತಿಭಟನೆ ನಡೆಸಿದರು.

ಐ.ಡಿ.ಹಳ್ಳಿ ಗ್ರಾಮದ ಸರ್ವೆ ನಂಬರ್ 2–3 ರಲ್ಲಿ 3.5 ಗುಂಟೆ ಜಮೀನಿನಲ್ಲಿ ಬಡವರಿಗೆ ನಿವೇಶನ ನೀಡುವುದಾಗಿ ಹೇಳಲಾಗಿತ್ತು. ಅದರಂತೆ ನಿವೇಶನ ವಿಂಗಡಣೆ ಮಾಡಲಾಗಿದೆ. ಆದರೆ ಬಡ ವರ್ಗದ ಜನರ ಗಮನಕ್ಕೆ ತರದೆ ಹಾಗೂ ಗ್ರಾಮ ಸಭೆ ಕರೆಯದೆ ಪಂಚಾಯಿತಿ ಸದಸ್ಯರು ಹಾಗೂ ಪ್ರಬಲರಿಗೆ ನಿವೇಶನ ಹಂಚಿಕೆ ಮಾಡಲಾಗಿದೆ ಎಂದು ಪ್ರತಿಭಟನಾಕಾರರು ದೂರಿದರು.

ಕೂಡಲೇ ಆಯ್ಕೆ ಮಾಡಿರುವ ಪಟ್ಟಿಯನ್ನು ಕೈ ಬಿಡಬೇಕು. ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಬೇಕು ಎಂದು ಆಗ್ರಹಿಸಿದರು. ಕನ್ನಡ ಜಾಗೃತಿ ವೇದಿಕೆ ಅಧ್ಯಕ್ಷ ರಾಘವೇಂದ್ರ, ಕರ್ನಾಟಕ ದಲಿತ ಸಂಘರ್ಷ ಸಮಿತಿ ಕಾರ್ಯದರ್ಶಿ ನರಸಿಂಹಮೂರ್ತಿ, ಮುಖಂಡರಾದ ಬಾಲಕೃಷ್ಣ, ಸಂಜೀವಯ್ಯ, ದಾಸಪ್ಪ, ವಿರೇಶ, ಸುಬ್ರಮಣ್ಯ, ಶಿವಕುಮಾರ್, ಮರಿಯಪ್ಪ, ನಂದೀಶ್, ಶಿವಕುಮಾರ್, ಮಲ್ಲೇರಂಗಯ್ಯ, ಮಂಜುನಾಥ ಇದ್ದರು

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.