ADVERTISEMENT

ಪ್ರಸ್ತಾವಕ್ಕೆ ಸರ್ಕಾರದ ಅನುಮೋದನೆ ಬಾಕಿ

​ಪ್ರಜಾವಾಣಿ ವಾರ್ತೆ
Published 20 ಜನವರಿ 2017, 7:34 IST
Last Updated 20 ಜನವರಿ 2017, 7:34 IST
ಪ್ರಸ್ತಾವಕ್ಕೆ ಸರ್ಕಾರದ ಅನುಮೋದನೆ ಬಾಕಿ
ಪ್ರಸ್ತಾವಕ್ಕೆ ಸರ್ಕಾರದ ಅನುಮೋದನೆ ಬಾಕಿ   

ತುಮಕೂರು: ‘ತುಮಕೂರಿನಲ್ಲಿ ತುಮಕೂರು ಸರ್ಕಾರಿ ವೈದ್ಯಕೀಯ ಕಾಲೇಜು (ಟಿಮ್ಸ್‌) ಸ್ಥಾಪನೆಯ ಪ್ರಸ್ತಾವವನ್ನು ಹಣಕಾಸು ಇಲಾಖೆ ಅನುಮೋದನೆಗೆ ಕಳುಹಿಸಲಾಗಿದೆ’ ಎಂದು ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ ಪಾಟೀಲ್‌ ತಿಳಿಸಿದರು.

ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ ಈ ಪ್ರಸ್ತಾವವನ್ನು ಬಜೆಟ್‌ನಲ್ಲಿ ಸೇರಿಸುವಂತೆ ಮುಖ್ಯಮಂತ್ರಿಗೆ ಮನವಿ ಮಾಡಿದ್ದೇನೆ. ಬಜೆಟ್‌ ಅನುಮೋದನೆ ದೊರೆತರೆ 2018–19 ರ ಶೈಕ್ಷಣಿಕ ವರ್ಷದಿಂದ ಕಾಲೇಜು ಕಾರ್ಯಾರಂಭ ಮಾಡಲಿದೆ’ ಎಂದು ಹೇಳಿದರು.

‘ಬೆಂಗಳೂರಿನ ಬೌರಿಂಗ್‌ ಆಸ್ಪತ್ರೆಗೆ ಹೊಂದಿಕೊಂಡಂತೆ ಮೆಡಿಕಲ್ ಕಾಲೇಜು ಆರಂಭಿಸಲು ಸಚಿವ ಸಂಪುಟ ಅನುಮೋದನೆ ನೀಡಿದೆ. ಈ ಕಾಲೇಜು ಮುಂದಿನ ವರ್ಷದಿಂದ ಆರಂಭವಾಗಲಿದೆ. ವೈದ್ಯಕೀಯ ಕಾಲೇಜು ಆರಂಭಕ್ಕೆ ಹೊಸ ಪ್ರಸ್ತಾವ ಸರ್ಕಾರದ ಮುಂದಿಲ್ಲ’ ಎಂದರು.

‘ಖಾಸಗಿ ಆಸ್ಪತ್ರೆಗಳಲ್ಲಿ ಬಾಕಿ ಹಣ ಪಾವತಿಸುವ ಸಂಬಂಧ ಆರೋಗ್ಯ ಸಚಿವರು ಮಾತುಕತೆ ನಡೆಸಿದ್ದಾರೆ. ಶೀಘ್ರವೇ ಖಾಸಗಿ ಆಸ್ಪತ್ರೆಗಳಿಗೆ ಬಾಕಿ ಹಣ ಪಾವತಿ ಮಾಡಲಾಗುವುದು’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT