ADVERTISEMENT

ಬೇಡಿಕೆ ಈಡೇರಿಕೆಗೆ ಪ್ರಾಮಾಣಿಕ ಪ್ರಯತ್ನ

ವಿಧಾನ ಪರಿಷತ್‌ನ ಸದಸ್ಯ ರಮೇಶ್‌ಬಾಬುಗೆ ಸನ್ಮಾನ

​ಪ್ರಜಾವಾಣಿ ವಾರ್ತೆ
Published 13 ಮಾರ್ಚ್ 2017, 6:54 IST
Last Updated 13 ಮಾರ್ಚ್ 2017, 6:54 IST

ಚಿಕ್ಕನಾಯಕನಹಳ್ಳಿ: ಶಿಕ್ಷಕರ ಪ್ರತಿನಿಧಿಯಾಗಿರುವ ನಾನು, ಶಿಕ್ಷಕರ ಬೇಡಿಕೆಗಳನ್ನು ಈಡೇರಿಸುವ ಕೆಲಸವನ್ನು ಪ್ರಾಮಾಣಿಕವಾಗಿ ಮಾಡುತ್ತೇನೆ ಎಂದು ನೂತನವಾಗಿ ಆಯ್ಕೆಯಾಗಿರುವ  ವಿಧಾನ ಪರಿಷತ್‌ನ ಸದಸ್ಯ ರಮೇಶ್‌ಬಾಬು ಹೇಳಿದರು.

ಪಟ್ಟಣದ ಕನ್ನಡ ಸಂಘದ ವೇದಿಕೆಯಲ್ಲಿ ಕುಂಚಾಂಕರ ಕಲಾ ಮತ್ತು ಸಾಂಸ್ಕೃತಿಕ ಸಂಘ, ಸರ್ಕಾರಿ ನೌಕರರ ಸಂಘ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ, ಪ್ರೌಢಶಾಲಾ ಶಿಕ್ಷಕರ ಸಂಘದ ಆಶ್ರಯದಲ್ಲಿ ನಡೆದ ಸರ್ಕಾರಿ ನೌಕರರಿಗೆ ಜ್ಯೋತಿ ಸಂಜೀವಿನಿ ಕಾರ್ಡ್ ವಿತರಣೆ ಹಾಗೂ ಅಭಿನಂದನ ಕಾರ್ಯಕ್ರಮದಲ್ಲಿ ಸನ್ಮಾನ ಸ್ವಿಕರಿಸಿ ಮಾತನಾಡಿದರು.

ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಜಿ.ಎಂ.ಸಣ್ಣಮುದ್ದಯ್ಯ ಮಾತನಾಡಿ, ಸರ್ಕಾರ ನೌಕರರು ಹಾಗೂ ಶಿಕ್ಷಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ನಿರ್ವಹಿಸಬೇಕು. ನೌಕರರು ಜ್ಯೋತಿ ಸಂಜೀವಿನಿ ಯೋಜನೆಯನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದರು.

ಶಾಸಕ ಸಿ.ಬಿ.ಸುರೇಶ್‌ಬಾಬು ಅಧ್ಯಕ್ಷತೆ ವಹಿಸಿದ್ದರು. ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಆರ್.ಪರಶಿವಮೂರ್ತಿ ಮಾತನಾಡಿದರು. ತಾಲ್ಲೂಕಿನ ಎಲ್ಲ ಸರ್ಕಾರಿ ನೌಕರರಿಗೆ ಜ್ಯೋತಿ ಸಂಜೀವಿನಿ ಕಾರ್ಡ್ ವಿತರಿಸಲಾಯಿತು.

ಜಿಲ್ಲಾ ಪಂಚಾಯಿತಿ ಸದಸ್ಯರಾದ ಕಲ್ಲೇಶ್, ರಾಮಚಂದ್ರಯ್ಯ, ಪುರಸಭಾ ಅಧ್ಯಕ್ಷ ಎಚ್.ಬಿ.ಪ್ರಕಾಶ್, ಸ್ಥಾಯಿ ಸಮಿತಿ ಅಧ್ಯಕ್ಷ ಮಲ್ಲಿಕಾರ್ಜುನಯ್ಯ, ಸದಸ್ಯರುಗಳಾದ ಸಿ.ಎಸ್.ರಮೇಶ್, ಸಿ.ಡಿ.ಚಂದ್ರಶೇಖರ್, ಮುಖ್ಯೋಪಾಧ್ಯಾಯರ ಸಂಘದ ಅಧ್ಯಕ್ಷ ಸಿದ್ದರಾಜ ನಾಯ್ಕ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ರಮೇಶ್‌ ಕೆಂಬಾಳ್, ರೋಟರಿ ಅಧ್ಯಕ್ಷ ದೇವರಾಜು, ಗವಿರಂಗಯ್ಯ, ಸತೀಶ್, ಶಿವಕುಮಾರ್, ಕುಂಚಾಂಕುರ ಕಲಾ ಸಂಘದ ಅಧ್ಯಕ್ಷ ಗಂಗಾಧರ್, ಎಂ.ಎಸ್.ರವಿಕುಮಾರ್ ಇದ್ದರು.

ಸಿ.ರವಿಕುಮಾರ್ ಕಾರ್ಯಕ್ರಮ ನಿರೂಪಿಸಿದರು. ಪಲ್ಲಕ್ಕಿ ಬಸವರಾಜು ಸ್ವಾಗತಿಸಿದರು. ಅನುಸೂಯಮ್ಮ ಪ್ರಾರ್ಥನೆ ಹಾಡಿದರು. ನಿರೂಪ್‌ ರಾವತ್ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.