ADVERTISEMENT

ಕೆಎಸ್ಆರ್‌ಟಿಸಿ ಬಸ್‌ಗೆ ಬೈಕ್ ಡಿಕ್ಕಿ: ಓರ್ವ ಸಾವು, ಇಬ್ಬರ ಸ್ಥಿತಿ ಗಂಭೀರ

​ಪ್ರಜಾವಾಣಿ ವಾರ್ತೆ
Published 5 ಮೇ 2024, 4:59 IST
Last Updated 5 ಮೇ 2024, 4:59 IST
<div class="paragraphs"><p>ಕೆಎಸ್ಆರ್‌ಟಿಸಿ ಬಸ್‌ಗೆ ದ್ವಿಚಕ್ರ ವಾಹನ ಡಿಕ್ಕಿ</p></div>

ಕೆಎಸ್ಆರ್‌ಟಿಸಿ ಬಸ್‌ಗೆ ದ್ವಿಚಕ್ರ ವಾಹನ ಡಿಕ್ಕಿ

   

ಕೊಡಗೇನಹಳ್ಳಿ (ಮಧುಗಿರಿ): ಹೋಬಳಿಯ ದಂಡಿಪುರದ ವಿಜಯನಂದಿ ಕ್ರಾಸ್ ಬಳಿ ಭಾನುವಾರ ಕೆಎಸ್ಆರ್‌ಟಿಸಿ ಬಸ್‌ಗೆ ದ್ವಿಚಕ್ರ ವಾಹನ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಗೌರಿಬಿದನೂರು ತಾಲ್ಲೂಕಿನ ವಾಟದಹೊಸಹಳ್ಳಿ ಅನಿಲ್ (24) ಮೃತರು. ಗಂಭೀರವಾಗಿ ಗಾಯಗೊಂಡಿದ್ದ ಚರಣ್ (22) ಮತ್ತು ಮಹೇಂದ್ರ (25) ಎಂಬ ಯುವಕರನ್ನು ಮಧುಗಿರಿ ಆಸ್ಪತ್ರೆಗೆ ರವಾನಿಸಲಾಗಿದೆ.

ADVERTISEMENT

ಕೊಡಿಗೇನಹಳ್ಳಿ ಕಡೆಯಿಂದ ಬರುತ್ತಿದ್ದ ಕೆಎಸ್ಆರ್‌ಟಿಸಿ ಬಸ್‌ಗೆ ಗೌರಿಬಿದನೂರು ಕಡೆಯಿಂದ ಬರುತ್ತಿದ್ದ ದ್ವಿಚಕ್ರ ವಾಹನ ಡಿಕ್ಕಿಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.