ADVERTISEMENT

ಇಂದಿನಿಂದ ಸಪ್ತ ಶತಮಾನೋತ್ಸವ ಸಂಭ್ರಮ

ಉಡುಪಿ ಶ್ರೀಕೃಷ್ಣಮಠ: ₹4 ಕೋಟಿ ವೆಚ್ಚದಲ್ಲಿ ‘ಮಧ್ವಾಂಗಣ’ ನಿರ್ಮಾಣ

​ಪ್ರಜಾವಾಣಿ ವಾರ್ತೆ
Published 30 ಜನವರಿ 2017, 7:15 IST
Last Updated 30 ಜನವರಿ 2017, 7:15 IST
ವಿಶ್ವೇಶತೀರ್ಥ ಸ್ವಾಮೀಜಿ
ವಿಶ್ವೇಶತೀರ್ಥ ಸ್ವಾಮೀಜಿ   

ಉಡುಪಿ: ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಪೇಜಾವರ ಮಠದ ಆಶ್ರ ಯದಲ್ಲಿ ಇದೇ 30ರಿಂದ ಫೆಬ್ರುವರಿ 6ರವರೆಗೆ ಶ್ರೀಕೃಷ್ಣಮಠದಲ್ಲಿ ಮಧ್ವಾಚಾ ರ್ಯರ ಸಪ್ತ ಶತಮಾನೋತ್ಸವ, 38ನೇ ಅಖಿಲ ಭಾರತ ಮಾಧ್ವ ತತ್ವಜ್ಞಾನ ಸಮ್ಮೇ ಳನ ಹಾಗೂ ಶ್ರೀಮನ್ನ್ಯಾಯಸುಧಾಮಂ ಗಲ ಮಹೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಪರ್ಯಾಯ ಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮೀಜಿ ಹೇಳಿದರು.

ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು, ಜೆಡಿ ಎಸ್‌ ರಾಷ್ಟ್ರೀಯ ಅಧ್ಯಕ್ಷ ಎಚ್‌.ಡಿ. ದೇವೇಗೌಡ ಸೋಮವಾರ ಮಧ್ಯಾಹ್ನ 3ಗಂಟೆಗೆ ಮಧ್ವಾಚಾರ್ಯರ ಸಪ್ತ ಶತ ಮಾನೋತ್ಸವವನ್ನು ಉದ್ಘಾಟಿಸುವರು. ವಿಧಾನ ಪರಿಷತ್‌ ವಿಪಕ್ಷ ನಾಯಕ ಕೆ.ಎಸ್‌. ಈಶ್ವರಪ್ಪ ಅತಿಥಿಗಳಾಗಿ ಭಾಗವ ಹಿಸುವರು.  ಸಂಜೆ 5.30ಕ್ಕೆ ನಡೆ ಯುವ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ಯನ್ನು ಅದಮಾರು ಮಠದ ವಿಶ್ವಪ್ರಿಯ ಸ್ವಾಮೀಜಿ ವಹಿಸುವರು ಎಂದರು.

31ರಂದು ಸಂಜೆ 4ಗಂಟೆಗೆ ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ನೂತನ ‘ವಿಶ್ವಮಾನ್ಯ ಮಂದಿರ ಅತಿಥಿಗೃಹ’ವನ್ನು ಉದ್ಘಾಟಿಸು ವರು. ಅಷ್ಟಮಠಾಧೀಶರು ಉಪಸ್ಥಿತರಿ ರುವರು. ಸೋದೆ ಮಠದ ವಿಶ್ವವಲ್ಲಭ ಸ್ವಾಮೀಜಿ ಸಂಜೆ 5.30ಕ್ಕೆ ನಡೆಯುವ ಸಭಾಕಾರ್ಯಕ್ರಮದ ಅಧ್ಯಕ್ಷತೆ ವಹಿಸು ವರು. ಫೆ. 1ರಂದು ನಡೆಯುವ ಸಭಾ ಕಾರ್ಯಕ್ರಮದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್‌ ಗುಂಡೂರಾವ್‌, ಸಚಿವರಾದ ಪ್ರಮೋದ್‌ ಮಧ್ವರಾಜ್‌, ರುದ್ರಪ್ಪ ಲಮಾಣಿ ಭಾಗವಹಿಸುವರು ಎಂದು ತಿಳಿಸಿದರು.

ಮಾಧ್ವ ತತ್ವಜ್ಞಾನ ಸಮ್ಮೇಳನದ ಅಂಗವಾಗಿ ಫೆ. 2ರಂದು ಬೆಳಿಗ್ಗೆ 9.30ಕ್ಕೆ ಯುವಗೋಷ್ಠಿ ನಡೆಯಲಿದೆ. ಪೇಜಾವರ ಮಠದ ಕಿರಿಯ ವಿಶ್ವಪ್ರಸನ್ನ ಸ್ವಾಮೀಜಿ ಅಧ್ಯಕ್ಷತೆ ವಹಿಸುವರು. ಶೀರೂರು ಮಠದ ಲಕ್ಷ್ಮೀವರತೀರ್ಥ ಸ್ವಾಮೀಜಿ ಉಪಸ್ಥಿತರಿರುವರು. ಸಂಜೆ 5.30ಕ್ಕೆ ಕೃಷ್ಣಾಪುರ ಮಠದ ವಿದ್ಯಾಸಾಗರ ಸ್ವಾಮೀಜಿ ಅಧ್ಯಕ್ಷತೆಯಲ್ಲಿ ಸಭಾಕಾರ್ಯ ಕ್ರಮ ಜರುಗಲಿದ್ದು, ವಸತಿ ಸಚಿವ ಎಂ. ಕೃಷ್ಣಪ್ಪ ಅತಿಥಿಗಳಾಗಿ ಪಾಲ್ಗೊಳ್ಳುವರು. ವಿದ್ವಾನ್‌ ಬನ್ನಂಜೆ ಗೋವಿಂದಾಚಾರ್ಯ ವಿಶೇಷ ಉಪನ್ಯಾಸ ನೀಡುವರು.

ಫೆ. 3ರಂದು ಸಂಜೆ 5ಗಂಟೆಗೆ ಉತ್ತ ರಾದಿಮಠದ ಸತ್ಯಾತ್ಮತೀರ್ಥ ಸ್ವಾಮೀಜಿ ಮಾಧ್ವ ತತ್ವಜ್ಞಾನ ಸಮ್ಮೇಳನವನ್ನು ಉದ್ಘಾಟಿಸುವರು. ಸುಬ್ರಹ್ಮಣ್ಯ ಮಠದ ವಿದ್ಯಾಪ್ರಸನ್ನ ಸ್ವಾಮೀಜಿ ಹಾಗೂ ಅಷ್ಟ ಮಠಾಧೀಶರು ಭಾಗವಹಿಸುವರು. ಫೆ. 4ರಂದು ಬೆಳಿಗ್ಗೆ 10ಗಂಟೆಗೆ ಮಹಿಳಾ ಗೋಷ್ಠಿ ಹಾಗೂ ಮಧ್ಯಾಹ್ನ 3ಗಂಟೆಗೆ ಮಾಧ್ವ ತತ್ವಜ್ಞಾನ ಸಮ್ಮೇಳನದ ಸಮಾ ರೋಪ ಸಮಾರಂಭ ನಡೆಯಲಿದೆ ಎಂದರು.

ಫೆ. 5ರಂದು ಸಂಜೆ 4ಗಂಟೆಗೆ ಜೋಡುಕಟ್ಟೆಯಿಂದ ಶ್ರೀಕೃಷ್ಣಮಠದ ವರೆಗೆ ಮಧ್ವಾಚಾರ್ಯರ ಬೃಹತ್‌ ಮೆರ ವಣಿಗೆ ನಡೆಯಲಿದೆ. ಅಂದು ಸಂಜೆ 5.30ಕ್ಕೆ ನಡೆಯುವ ಸಭಾಕಾರ್ಯಕ್ರಮ ದಲ್ಲಿ ಮಂತ್ರಾಲಯ ರಾಘವೇಂದ್ರ ಮಠದ ಸುಬುಧೇಂದ್ರ ಸ್ವಾಮೀಜಿ, ಕೇಂದ್ರ ಸಚಿವ ರಮೇಶ್‌ ಜಿಗಜಿಣಗಿ, ಬಸ ವನಗುಡಿ ಕ್ಷೇತ್ರದ ಶಾಸಕ ರವಿಸುಬ್ರ ಹ್ಮಣ್ಯ ಭಾಗವಹಿಸುವರು. ಫೆ. 6ರಂದು ಬೆಳಿಗ್ಗೆ 8.30ಕ್ಕೆ ಶ್ರೀಮನ್ನ್ಯಾಯಸುಧಾ ಮಂಗಲ ಮಹೋತ್ಸವ ಜರುಗಲಿದೆ. ಅಂದು ಸಂಜೆ 5.30ಕ್ಕೆ ನಡೆಯುವ ಸಭಾಕಾರ್ಯಕ್ರಮದಲ್ಲಿ ಪಂಚಾಯತ್‌ ರಾಜ್‌ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಎಚ್‌.ಕೆ. ಪಾಟೀಲ್‌ ಉಪಸ್ಥಿತರಿರುವರು ಎಂದು ಹೇಳಿದರು.

ತೆರೆದ ಸಭಾಂಗಣ ನಿರ್ಮಾಣ
ವಿಶೇಷ ಕಾರ್ಯಕ್ರಮಗಳನ್ನು ಏರ್ಪಡಿಸಲು ಅನುಕೂಲ ಆಗುವಂತೆ ಶ್ರೀಕೃಷ್ಣಮಠದ ರಾಜಾಂಗಣ ಪಾರ್ಕಿಂಗ್‌ ಪ್ರದೇಶದಲ್ಲಿ ಸುಮಾರು ₹4 ಕೋಟಿ ವೆಚ್ಚದಲ್ಲಿ ತೆರೆದ ಸಭಾಂಗಣ ‘ಮಧ್ವಾಂಗಣ’ವನ್ನು ನಿರ್ಮಿಸಲಾಗವುದು. ಅದರ ಮೇಲ್ಭಾಗದಲ್ಲಿ ಪ್ರವಾಸಿಗರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಿಂದ 16 ಕೊಠಡಿಗಳನ್ನು ನಿರ್ಮಿಸಲಾಗುತ್ತದೆ. ಅಲ್ಲದೆ, ವಾಹನ ನಿಲುಗಡೆಗೂ ಈ ಸಭಾಂಗಣ ಪೂರಕವಾಗಲಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT