ADVERTISEMENT

ಉಪಾಧ್ಯಾಯ ಸಮ್ಮಾನ್‌ ಪ್ರಶಸ್ತಿ ಪ್ರದಾನ

​ಪ್ರಜಾವಾಣಿ ವಾರ್ತೆ
Published 28 ಜನವರಿ 2017, 5:12 IST
Last Updated 28 ಜನವರಿ 2017, 5:12 IST
ಉಪಾಧ್ಯಾಯ ಸಮ್ಮಾನ್‌ ಪ್ರಶಸ್ತಿ ಪ್ರದಾನ
ಉಪಾಧ್ಯಾಯ ಸಮ್ಮಾನ್‌ ಪ್ರಶಸ್ತಿ ಪ್ರದಾನ   

ಉಡುಪಿ: ಉಪಾಧ್ಯಾಯ ಮೂಡುಬೆಳ್ಳೆ ಕಲಾ ಪ್ರತಿಷ್ಠಾನದ 6ನೇ ರಾಜ್ಯಮಟ್ಟದ ‘ಉಪಾಧ್ಯಾಯ ಸಮ್ಮಾನ್‌’ ಪ್ರಶಸ್ತಿ ಪ್ರದಾನ ಸಮಾರಂಭವು ಇದೇ 29ರಂದು ಬೆಳಿಗ್ಗೆ 9.15ಕ್ಕೆ ಉಡುಪಿ ರಥ ಬೀದಿಯ ರಾಘವೇಂದ್ರ ಮಠದ ಮಂತ್ರಾಲಯ ಸಭಾಭವನದಲ್ಲಿ ನಡೆಯಲಿದೆ ಎಂದು ಪ್ರತಿಷ್ಠಾನದ ಅಧ್ಯಕ್ಷ ಉಪಾಧ್ಯಾಯ ಮೂಡುಬೆಳ್ಳೆ ಹೇಳಿದರು.

ಪ್ರತಿಷ್ಠಾನದ ವತಿಯಿಂದ ಚಿತ್ರ ಕಲೆ, ಸಂಗೀತ, ಕೃಷಿ ಮತ್ತು ಸಮಾಜ ಸೇವೆ ಸೇರಿದಂತೆ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕ ರಿಗೆ ಉಪಾಧ್ಯಾಯ ಸಮ್ಮಾನ್‌ ಪ್ರಶಸ್ತಿ ನೀಡಿ ಗೌರವಿಸಲಾಗುವುದು. ಕಾಣಿಯೂರು ಮಠದ ವಿದ್ಯಾ ವಲ್ಲಭ ಸ್ವಾಮೀಜಿ ಕಾರ್ಯಕ್ರಮ ವನ್ನು ಉದ್ಘಾಟಿಸುವರು. ಧರ್ಮ ದರ್ಶಿ ಹರಿಕೃಷ್ಣ ಪುನರೂರು ಅಧ್ಯಕ್ಷತೆ ವಹಿಸುವರು.

ಪರ್ಯಾಯ ಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮೀಜಿ, ಕರ್ನಾಟಕ ಲಲಿತಕಲಾ ಅಕಾಡೆಮಿ ಯ ಅಧ್ಯಕ್ಷ ಡಾ. ಎಂ.ಎಸ್‌. ಮೂರ್ತಿ, ದಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಪ್ರದೀಪ್‌ಕುಮಾರ್‌ ಕಲ್ಕೂರ ಮೊದ ಲಾದವರು ಉಪಸ್ಥಿತರಿರುವರು ಎಂದು ಶುಕ್ರವಾರ ಪತ್ರಿಕಾ ಗೋಷ್ಠಿಯಲ್ಲಿ ತಿಳಿಸಿದರು. 

ಪ್ರತಿಷ್ಠಾನದ ಜಂಟಿ ಕಾರ್ಯ ದರ್ಶಿ ಪ್ರಮೋದನ ಉಪಾಧ್ಯಾಯ, ಉಡುಪಿ ಜಿಲ್ಲಾ ಬ್ರಾಹ್ಮಣ ಮಹಾ ಸಭಾದ ಅಧ್ಯಕ್ಷ ಎಂ. ಮಂಜುನಾಥ ಉಪಾಧ್ಯ, ಕಡಿಯಾಳಿ ಮಹಿಷ ಮರ್ದಿನಿ ದೇವಸ್ಥಾನದ ಮಾಜಿ ಮೊಕ್ತೇಸರ ಕುಂಜಿತ್ತಾಯ ಶ್ರೀನಿವಾಸ ಉಪಾಧ್ಯಾಯ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.