ADVERTISEMENT

ಕಾನೂನು ಚೌಕಟ್ಟಿನಲ್ಲಿ ಪ್ರಶ್ನೆ: ಆಸ್ಕರ್

ಹೈಕಮಾಂಡ್‌ಗೆ ಹಣ ಸಂದಾಯ ಆರೋಪ

​ಪ್ರಜಾವಾಣಿ ವಾರ್ತೆ
Published 3 ಮಾರ್ಚ್ 2017, 5:31 IST
Last Updated 3 ಮಾರ್ಚ್ 2017, 5:31 IST

ಉಡುಪಿ: ಹೈಕಮಾಂಡ್‌ಗೆ ಹಣ ನೀಡಿದ ಆರೋಪಕ್ಕೆ ಸಂಬಂಧಿಸಿದ ವಿಷಯವನ್ನು ಕಾನೂನು ಚೌಕಟ್ಟಿನಲ್ಲಿಯೇ ಪ್ರಶ್ನಿಸಬೇಕಾಗುತ್ತದೆ ಎಂದು ರಾಜ್ಯಸಭಾ ಸದಸ್ಯ ಆಸ್ಕರ್ ಫರ್ನಾಂಡಿಸ್ ಹೇಳಿದರು.

ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಬುಧವಾರ ಪ್ರತಿಕ್ರಿಯಿಸಿದ ಅವರು, ಆರೋಪ ಹಾಗೂ ಪ್ರತ್ಯಾರೋಪಗಳು ಸಹಜ. ಪ್ರತಿಯೊಂದಕ್ಕೂ ಕಾನೂನಿನ ಚೌಕಟ್ಟು ಇದೆ. ಅದರೊಳಗೆ ಏನು ಮಾಡಬಹುದೋ ಅದನ್ನೇ ಮಾಡಬೇ ಕಾಗುತ್ತದೆ. ಯಾರಿಗೆ ಇದರಿಂದ ಸಮಸ್ಯೆ ಆಗಿದೆ ಹಾಗೂ ಯಾರು ಇದರಲ್ಲಿ ತೊಡಗಿದ್ದಾರೆ ಎಲ್ಲವೂ ಕಾನೂನಿನ ಚೌಕಟ್ಟಿನಲ್ಲಿಯೇ ಬರುತ್ತದೆ.

ಪ್ರತಿ ಯೊಂದು ಸಮಾಜದಲ್ಲಿಯೂ ಪಾಪ ವನ್ನು ತೊಳೆದುಕೊಳ್ಳಲು ಒಂದೊಂದು ವಿಧಾನ ಇದೆ. ಸಾರ್ವಜನಿಕ ಜೀವನದಲ್ಲಿರುವ ವ್ಯಕ್ತಿಗಳು ತಪ್ಪು ಮಾಡಿದರೆ ಸಮಸ್ಯೆ ಆಗುತ್ತದೆ, ಏಕೆಂದರೆ ಅವರು ಜನರನ್ನು ಎದುರಿಸಬೇಕಾಗುತ್ತದೆ. ಯಾರೇ ತಪ್ಪು ಮಾಡಿದರೂ ಕಾನೂನಿನ ಚೌಕಟ್ಟಿನಲ್ಲಿ ಪ್ರಶ್ನೆ ಮಾಡಬೇಕಾಗುತ್ತದೆ ಎಂದರು.

ಈ ಬಗ್ಗೆ ಸಿಬಿಐ ತನಿಖೆ ಆಗಬೇಕೆ? ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯ ಸರ್ಕಾರವಾಗಲಿ ಅಥವಾ ಸಿಬಿಐ ಆಗಲಿ ನೇರವಾಗಿ ಈ ವಿಷಯದಲ್ಲಿ ತೀರ್ಮಾನ ತೆಗೆದುಕೊಳ್ಳಲು ಬರುವುದಿಲ್ಲ ಎಂದು ಹೇಳಿದರು.

ಪಕ್ಷದ ಹಿರಿಯ ಮುಖಂಡರು ನೇರವಾಗಿ ಮುಖ್ಯಮಂತ್ರಿ ಮತ್ತು ಸರ್ಕಾರವನ್ನು ಟೀಕಿಸುತ್ತಿರುವ ಬಗ್ಗೆ ಮಾತನಾಡಿದ ಅವರು, ಪಕ್ಷದ ಎಲ್ಲ ಮುಖಂಡರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹೋಗಿ ಎಂದು ಪಕ್ಷವು ಪ್ರದೇಶ ಕಾಂಗ್ರೆಸ್‌ ಸಮಿತಿಗೆ ಸಲಹೆ ನೀಡಿದೆ. ಅದೇ ರೀತಿ ಮುಂದುವರೆಯಬೇಕಾಗುತ್ತದೆ. ನಾವೆಲ್ಲ ರೂ ಹೇಗೆ ಮಾತನಾಡಬೇಕು ಮತ್ತು ನಡೆದುಕೊಳ್ಳಬೇಕು ಎಂಬ ಮಾರ್ಗದ ರ್ಶನ ಸಲಹೆಯಲ್ಲಿಯೇ ಇದೆ ಎಂದರು.

ಬಿಜೆಪಿ ತಾನು ಬೆಳೆಯಲು ಏನು ಮಾಡಬೇಕೋ ಅದನ್ನು ಮಾಡುತ್ತದೆ. ಅದು ಆ ಪಕ್ಷಕ್ಕೆ ಬಿಟ್ಟ ವಿಚಾರ. ನಮ್ಮ ಪಕ್ಷದ ಬಲವರ್ಧನೆಗಾಗಿ ನಾವು ಕೆಲಸ ಮಾಡುತ್ತೇವೆ ಎಂದು ಮಾಜಿ ಸಂಸದ ಕೆ. ಜಯಪ್ರಕಾಶ್ ಹೆಗ್ಡೆ ಅವರ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.