ADVERTISEMENT

ಕಾರ್ಮಿಕರಿಗೆ ವಿಮಾ ಕಾರ್ಡ್‌ ವಿತರಣೆ

​ಪ್ರಜಾವಾಣಿ ವಾರ್ತೆ
Published 29 ಜುಲೈ 2016, 5:54 IST
Last Updated 29 ಜುಲೈ 2016, 5:54 IST

ಉಡುಪಿ: ಕಾರ್ಮಿಕರ ಸಮಸ್ಯೆಗಳಿಗೆ ಸ್ಪಂದಿಸುವುದರ ಜತೆಗೆ ಅವರ ಪರವಾಗಿ ಹೋರಾಟ ನಡೆಸಲು ಕಾರ್ಮಿಕ ವೇದಿಕೆ ಸದಾ ಸಿದ್ಧವಿದೆ ಎಂದು ಕರ್ನಾಟಕ ಕಾರ್ಮಿಕರ ವೇದಿಕೆಯ ರಾಜ್ಯಾಧ್ಯಕ್ಷ ಎಚ್‌.ಬಿ. ನಾಗೇಶ್‌ ಹೇಳಿದರು.

ಕರ್ನಾಟಕ ಕಾರ್ಮಿಕರ ವೇದಿಕೆಯ ಆಶ್ರಯದಲ್ಲಿ ಮಲ್ಪೆ ಬೀಚ್‌ನಲ್ಲಿ ಇತ್ತೀಚೆಗೆ ನಡೆದ ಬೃಹತ್‌ ಆರೋಗ್ಯ ಶಿಬಿರ ಮತ್ತು ಉಚಿತ ಔಷಧಿ ವಿತರಣೆ ಕಾರ್ಯಕ್ರಮ ದಲ್ಲಿ ಮಾತನಾಡಿದರು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಉಡುಪಿ ನಗರಸಭೆ ಅಧ್ಯಕ್ಷೆ ಮೀನಾಕ್ಷಿ ಮಾಧವ ಬನ್ನಂಜೆ, ವೇದಿಕೆಯ ಸಾಮಾಜಿಕ ಕಳಕಳಿಯನ್ನು ಶ್ಲಾಘಿಸಿದರು.
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಮೀನು ಮಾರಾಟ ಫೆಡರೇಶನ್‌ನ ಅಧ್ಯಕ್ಷ ಯಶ್‌ಪಾಲ್‌ ಸುವರ್ಣ ಕಾರ್ಮಿಕ ರಿಗೆ ವಿಮಾ ಕಾರ್ಡ್‌ ವಿತರಿಸಿದರು. ಉಡುಪಿ ಆದರ್ಶ ಆಸ್ಪತ್ರೆಯ ನಿರ್ದೇಶಕ ಡಾ. ಜಿ.ಎಸ್‌. ಚಂದ್ರಶೇಖರ್‌ ಆರೋ ಗ್ಯದ ಬಗ್ಗೆ ಮಾಹಿತಿ ನೀಡಿದರು.

ಕರ್ನಾಟಕ ಕಾರ್ಮಿಕರ ವೇದಿಕೆಯ ಜಿಲ್ಲಾಧ್ಯಕ್ಷ ರವಿ ಶೆಟ್ಟಿ ಅಧ್ಯಕ್ಷತೆ ವಹಿಸಿ ದ್ದರು. ವೇದಿಕೆಯ ಮಹಿಳಾ ಅಧ್ಯಕ್ಷೆ ಚಂದ್ರಿಕಾ ಎಸ್‌. ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ಪ್ರಖ್ಯಾತ್‌ ಶೆಟ್ಟಿ, ಶೇಖರ್‌ ಜಿ. ಕೋಟ್ಯಾನ್‌, ವೇದಿಕೆಯ ಮಲ್ಪೆ ಬೀಚ್‌ ಘಟಕದ ಅಧ್ಯಕ್ಷ ಮೋಹನ್‌ ರಾಜ್‌, ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮೀ, ವೇದಿ ಕೆಯ ಪದಾಧಿಕಾರಿಗಳಾದ ಸುರೇಶ್‌ ಸೇರಿಗಾರ್‌, ರವಿಶಾಸ್ತ್ರೀ ಬನ್ನಂಜೆ, ಚಂದ್ರ ಪೂಜಾರಿ, ರಾಘವೇಂದ್ರ ಕುಂದರ್‌, ಸಂದೀಪ್‌ ಕೊಡಂಕೂರು, ಸಂದೀಪ್‌ ಕುಮಾರ್‌, ಮಲ್ಲಿಕಾರ್ಜುನ ಮತ್ತಿತರರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.