ADVERTISEMENT

ಕಾಲೇಜುಗಳಲ್ಲಿ ಪೊಲೀಸ್ ದೂರು, ಸಲಹಾ ಪೆಟ್ಟಿಗೆ

​ಪ್ರಜಾವಾಣಿ ವಾರ್ತೆ
Published 24 ಜುಲೈ 2014, 4:39 IST
Last Updated 24 ಜುಲೈ 2014, 4:39 IST

ಕಾಪು (ಪಡುಬಿದ್ರಿ):  ದೌರ್ಜನ್ಯ, ಲೈಂಗಿಕ ಕಿರುಕುಳ ಸಹಿತ ಇತರ ವಿದ್ಯ ಮಾನಗಳನ್ನು ತಡೆಯುವಲ್ಲಿ ಮತ್ತು ಜನಸಾಮಾನ್ಯರಿಗೆ ಮುಕ್ತವಾಗಿ ತಮ್ಮ ಕಷ್ಟಗಳನ್ನು ಪೊಲೀಸರಿಗೆ ತಿಳಿಸಲು ಶಿಕ್ಷಣ ಸಂಸ್ಥೆಗಳಲ್ಲಿ ಅಳವಡಿಸುವ ಪೊಲೀಸ್ ದೂರು ಮತ್ತು ಸಲಹಾ ಪೆಟ್ಟಿಗೆಯು ಪ್ರಧಾನ ಪಾತ್ರ  ನಿರ್ವಹಿಸಲಿದೆ’ ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿ ಕಾರಿ ಡಾ.ಬೋರಲಿಂಗಯ್ಯ ಹೇಳಿದರು.

ಕಾಪು ದಂಡತೀರ್ಥ ಶಿಕ್ಷಣ ಸಂಸ್ಥೆ ಯಲ್ಲಿ ಉಡುಪಿ ಜಿಲ್ಲಾ ಪೊಲೀಸ್ ಇಲಾಖೆಯ ಸಹಯೋಗದೊಂದಿಗೆ ಬುಧವಾರ ಪ್ರಾರಂಭಿಸಲಾದ ಪೊಲೀಸ್ ದೂರು ಮತ್ತು ಸಲಹಾ ಪೆಟ್ಟಿಗೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ಕಾರ್ಕಳ ಉಪವಿಭಾಗದ ಎಎಸ್‍ಪಿ ಅಣ್ಣಾಮಲೈ ಅವರ ನೇತೃತ್ವದಲ್ಲಿ 9 ಸಂಸ್ಥೆಗಳಲ್ಲಿ ಪೊಲೀಸ್ ದೂರು ಮತ್ತು ಸಲಹಾ ಪೆಟ್ಟಿಗೆಯನ್ನು ಅಳವಡಿಸ ಲಾಗಿದೆ. ಸಮಾಜದಲ್ಲಿ ನಡೆಯುವ ಯಾವುದೇ ಅನಪೇಕ್ಷಿತ ಘಟನೆಗಳು ಮತ್ತು ನೆರೆಹೊರೆಯ ಜನರ ಸಮಸ್ಯೆಗಳ ಬಗ್ಗೆಯೂ ಪೊಲೀಸರಿಗೆ ಮಾಹಿತಿ ನೀಡಲು ಅವಕಾಶ ಕಲ್ಪಿಸಿಕೊಡ ಲಾಗುತ್ತಿದೆ’ ಎಂದರು. ಕಾಪು ದಂಡತೀರ್ಥ ವಿದ್ಯಾಸಂಸ್ಥೆಗಳ ಸಂಚಾಲಕ ಡಾ.ಕೆ. ಪ್ರಭಾಕರ ಶೆಟ್ಟಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಉಡುಪಿ ಜಿಲ್ಲಾ ಸಹಾಯಕ ಪೊಲೀಸ್ ಅಧೀಕ್ಷಕ ಅಣ್ಣಾಮಲೈ, ಉಡುಪಿ ಜಿಲ್ಲಾ ಗೃಹರಕ್ಷಕ ದಳದ ಕಮಾಂಡೆಂಟ್ ಡಾ.ಕೆ. ಪ್ರಶಾಂತ್ ಶೆಟ್ಟಿ, ದಂಡತೀರ್ಥ ವಿದ್ಯಾಸಂಸ್ಥೆಯ ಆಡಳಿ ತಾಧಿಕಾರಿ ಆಲ್ಭನ್ ರೋಡ್ರಿಗಸ್, ಕಾಪು ವೃತ್ತ ನಿರೀಕ್ಷಕ ಸುನೀಲ್ ವೈ. ನಾಯ್ಕ್, ಕಾಪು ಅಪರಾಧ ವಿಭಾಗದ ಎಎಸ್‌ಐ ಲಕ್ಷ್ಮಣ್, ಕಾಪು ದಂಡತೀರ್ಥ ವಿದ್ಯಾ ಸಂಸ್ಥೆಗಳ ಪ್ರಾಂಶುಪಾಲ ಎಂ. ನೀಲಾ ನಂದ ನಾಯ್ಕ್, ಉಪನ್ಯಾಸಕರಾದ ಶಿವಣ್ಣ ಬಾಯಾರ್, ಗೇಬ್ರಿಯಲ್ ಮಸ್ಕರೇನಸ್ ಉಪಸ್ಥಿತರಿದ್ದರು.

ಪರಿಯಾಳ ಸಮಾಜದ ಮಹಾಸಭೆ
ಶಿರ್ವ:  ಉಡುಪಿ ಜಿಲ್ಲಾ ಪರಿಯಾಳ ಸಮಾಜ ಸುಧಾರಕ ಸಂಘ  ಉಚ್ಚಿಲ ಇದರ 71ನೇ ವಾರ್ಷಿಕ  ಮಹಾ ಸಭೆ ಯು ಜು.29ರಂದು ಬೆಳಗ್ಗೆ 10ಕ್ಕೆ ಸರಿಯಾಗಿ ಉಚ್ಚಿಲದಲ್ಲಿರುವ ಸಂಘದ ಸಮಾಜ ಮಂದಿರದಲ್ಲಿ ಜರಗಲಿದೆ.

8ನೇ ತರಗತಿಯಿಂದ, ಪದವಿ, ಇಂಜಿನಿಯರಿಂಗ್, ನರ್ಸಿಂಗ್, ಸ್ನಾತ ಕೋತ್ತರ ಪದವಿ ಹಾಗೂ ಡಿಪ್ಲೋಮ ದಲ್ಲಿ ವ್ಯಾಸಂಗ ಮಾಡುತ್ತಿರುವ ಸಮಾ ಜದ ಬಡ ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾ ಪ್ರೋತ್ಸಾಹ ಧನ ಹಾಗೂ ಅತೀ ಹೆಚ್ಚು ಅಂಕ ಗಳಿಸಿರುವ ವಿದ್ಯಾರ್ಥಿ ಗಳಿಗೆ ವಿದ್ಯಾ ಪ್ರತಿಭಾ ಪುರಸ್ಕಾರ ಹಾಗೂ ಸಮಾಜಕ್ಕೆ ಸೇವೆ ಸಲ್ಲಿಸಿರುವ ಮಹನೀಯರನ್ನು ಮತ್ತು ಸಾಧಕರನ್ನು ಗುರುತಿಸಿ ಸನ್ಮಾನಿಸಲಾಗುವುದು ಎಂದು ಸಮಾಜದ ಅಧ್ಯಕ್ಷ ಯು.ಶಂಕರ್ ಸಾಲಿ ಯಾನ್ ಕಟಪಾಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.