ADVERTISEMENT

ಕೆರೆಗಳ ಅಭಿವೃದ್ಧಿಗೆ ಆದ್ಯತೆ ನೀಡಿ

​ಪ್ರಜಾವಾಣಿ ವಾರ್ತೆ
Published 5 ಜುಲೈ 2017, 9:46 IST
Last Updated 5 ಜುಲೈ 2017, 9:46 IST

ಉಡುಪಿ: ಕೆರೆಗಳ ಅಭಿವೃದ್ಧಿ ಮತ್ತು ನಿರ್ಮಾಣಕ್ಕೆ ಅಧಿಕಾರಿಗಳು ಹೆಚ್ಚಿನ ಆದ್ಯತೆ ನೀಡಬೇಕು ಎಂದು ಶಾಸಕ ವಿನಯ ಕುಮಾರ್ ಸೊರಕೆ ಹೇಳಿದರು. ಉಡುಪಿ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ನಡೆದ ಉಡುಪಿ ತಾಲ್ಲೂಕು ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಮಾತನಾಡಿದರು.

ತಾಲ್ಲೂಕಿನಲ್ಲಿ ಈಗಾಗಲೇ 20 ಕೆರೆಗಳ ಅಭಿವೃದ್ಧಿಗೆ ಚಾಲನೆ ನೀಡ ಲಾಗಿದೆ. ಕೆರೆಗಳು ಈಗಾಗಲೇ ಅಭಿವೃದ್ಧಿ ಗೊಂಡಿರುವ ಕಡೆ ಅಂತರ್ಜಲದ ಪ್ರಮಾಣ ಹೆಚ್ಚಾಗಿದೆ. ಅಭಿವೃದ್ಧಿಯಾಗ ಬೇಕಿರುವ ಕೆರೆಗಳ ಬಗ್ಗೆ ಮಾಹಿತಿ ಸಂಗ್ರಹಿಸಿ ಸಣ್ಣ ನೀರಾವರಿ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಿ. ಕಿಂಡಿ ಅಣೆಕಟ್ಟೆಗಳನ್ನು ನಿರ್ಮಿಸುವ ಪಶ್ಚಿಮ ವಾಹಿನಿ ಯೋಜನೆ ಅನುಷ್ಠಾನಕ್ಕೆ ಸರ್ಕಾರ ಈಗಾಗಲೇ ₹100 ಕೋಟಿ ಮೀಸಲಿಟ್ಟಿದೆ ಎಂದರು.

ತಾಲ್ಲೂಕಿನಲ್ಲಿ ಕೃಷಿ ಚಟುವಟಿಕೆಗೆ ಉತ್ತೇಜನ ನೀಡಲು ಹಲವಾರು ಕಾರ್ಯ ಕ್ರಮ ಹಮ್ಮಿಕೊಳ್ಳಲಾಗಿದೆ. ಕಾಪು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಹಡಿಲು ಬಿಟ್ಟಿದ್ದ 250 ಎಕರೆ ಜಮೀನಿನಲ್ಲಿ ಮತ್ತೆ ಕೃಷಿ ಚಟುವಟಿಕೆ ಆರಂಭಿಸಲಾಗಿದೆ.

ADVERTISEMENT

ವಿದ್ಯಾರ್ಥಿ ನಿಲಯಗಳು ಸೋರುತ್ತಿರುವುದರಿಂದ ವಿದ್ಯಾರ್ಥಿಗಳಿಗೆ ತೊಂದರೆ ಆಗುತ್ತಿದೆ ಎಂಬ ದೂರುಗಳು ಬಂದಿವೆ. ಅಂತಹ ವಿದ್ಯಾರ್ಥಿ ನಿಲಯಗಳನ್ನು ಕೂಡಲೇ ದುರಸ್ತಿಗೊಳಿಸಿ. ವಿದ್ಯಾರ್ಥಿ ನಿಲಯಗಳ ಉಸ್ತುವಾರಿಗೆ ನೇಮಿಸಿರುವ ನೋಡಲ್ ಅಧಿಕಾರಿಗಳ ವಿವರ ನೀಡಿ ಎಂದು ಸೂಚಿಸಿದರು.

ಮಲೇರಿಯಾ ಹಾಗೂ ಡೆಂಗಿ ನಿಯಂತ್ರಣಕ್ಕೆ ಅಗತ್ಯ ಕ್ರಮಗಳನ್ನು ಕೈ ಗೊಳ್ಳುವಂತೆ ಹಾಗೂ ಜನಸಂಖ್ಯೆಗನುಗುಣವಾಗಿ ಮೇಲ್ದರ್ಜೆಗೆ ಏರಿಸಬೇಕಾದ ಆರೋಗ್ಯ ಕೇಂದ್ರಗಳ ಮಾಹಿತಿಯನ್ನು ಪ್ರಸ್ತಾವನೆಯೊಂದಿಗೆ ಸಲ್ಲಿಸಿ, ಕಾಪುನಲ್ಲಿ ₹5 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಪ್ರವಾಸಿ ಮಂದಿರ ನಿರ್ಮಾಣ ಮಾಡಲು ಪ್ರಸ್ತಾ ವನೆ ಸಿದ್ಧಪಡಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದರು. ಸಾಲ ಮನ್ನಾ ಘೋಷಣೆ ಯ ಪ್ರಯೋಜನ ಪಡೆಯುವ ಕೃಷಿಕರ ಬಗ್ಗೆ ಮಾಹಿತಿ ನೀಡಿ ಎಂದು ಸಹಕಾರ ಇಲಾಖೆಯ ಅಧಿಕಾರಿಗಳಿಗೆ ತಾಕೀತು ಮಾಡಿದರು.

ತಾಲ್ಲೂಕಿನಲ್ಲಿ ಕೃಷಿ ಅಭಿಯಾನ  ನಡೆಯುತ್ತಿದ್ದು, ಯಾಂತ್ರೀಕೃತ ನಾಟಿಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ. ಬೆಳೆ ವಿಮೆ ಯೋಜನೆಗೆ ಜುಲೈ 31 ಕೊನೆಯ ದಿನಾಂಕವಾಗಿದೆ. ಜಿಲ್ಲೆಗೆ ಈ ವರ್ಷ ದಿಂದ ಕೃಷಿ ಭಾಗ್ಯ ಯೋಜನೆ ಮಂಜೂ ರಾಗಿದ್ದು, ಕೃಷಿ ಹೊಂಡ ರಚನೆಗೆ ಸಹಾಯಧನ ಲಭ್ಯವಿದ್ದು ರೈತರು ಈ ಯೋಜನೆಯ ಪ್ರಯೋಜನ ಪಡೆದು ಕೊಳ್ಳಬಹುದು. ಮಣ್ಣು ಆರೋಗ್ಯ ಕಾರ್ಡ್‌ ವಿತರಣೆಗೆ ಕ್ರಮ ಕೈಗೊಳ್ಳ ಲಾಗಿದೆ ಎಂದು ಕೃಷಿ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದರು.

ಉಡುಪಿ ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ನಳಿನಿ ಪ್ರದೀಪ್ ರಾವ್, ಉಪಾಧ್ಯಕ್ಷ ರಾಜೇಂದ್ರ ಪಂದಬೆಟ್ಟು, ತಾಲ್ಲೂಕು ಪಂಚಾಯಿತಿ  ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷೆ ನೀತಾ ಗುರುರಾಜ ಪೂಜಾರಿ, ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾ ಧಿಕಾರಿ ಶೇಷಪ್ಪ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.