ADVERTISEMENT

ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 18 ಮಾರ್ಚ್ 2017, 7:41 IST
Last Updated 18 ಮಾರ್ಚ್ 2017, 7:41 IST

ಬಂಟ್ವಾಳ: ದೇಶದಲ್ಲಿ ದಿನೇ ದಿನೇ ಅಡುಗೆ ಅನಿಲ ಸಹಿತ ಇಂಧನ ಬೆಲೆ ಏರಿಕೆಯಿಂದಾಗಿ ಜನ ಸಾಮಾನ್ಯರಿಗೆ ಜೀವನ ನಡೆಸುವುದೇ ದುಸ್ತರವಾಗಿದೆ ಎಂದು ಕಾಂಗ್ರೆಸ್ ಮುಖಂಡರು ಆರೋ ಪಿಸಿದ್ದಾರೆ.

ಬಂಟ್ವಾಳ ಮತ್ತು ಪಾಣೆಮಂಗ ಳೂರು ಬ್ಲಾಕ್ ಕಾಂಗ್ರೆಸ್ ಸಮಿತಿ ವತಿ ಯಿಂದ ಬಿ.ಸಿ.ರೋಡ್ ರಾಷ್ಟ್ರೀಯ ಹೆದ್ದಾರಿ ಮೇಲ್ಸೇತುವೆ ಬಳಿ ಗುರುವಾರ ನಡೆದ ಪ್ರತಿಭಟನೆಯಲ್ಲಿ ಜಿಲ್ಲಾ ಪಂಚಾ ಯಿತಿ ಸದಸ್ಯ ಎಂ.ಎಸ್.ಮಹಮ್ಮದ್ ಮಾತನಾಡಿದರು.

‘ಅಂತರರಾಷ್ಟ್ರೀಯ ಮಾರುಕಟ್ಟೆ ಯಲ್ಲಿ ಕಚ್ಚಾತೈಲ ಬೆಲೆ ಗಣನೀಯವಾಗಿ ಕುಸಿದಿದ್ದರೂ ದೇಶದಲ್ಲಿ ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲ ಬೆಲೆ ಏರುತ್ತಲೇ ಇದೆ. ಇದರಿಂದಾಗಿ ಜೀವ ನಾವಶ್ಯಕ ವಸ್ತುಗಳ ಬೆಲೆಯೂ ಗಗನಕ್ಕೇರಿ ಜನಸಾಮಾನ್ಯರು ತೊಂದರೆ ಅನುಭವಿಸುವಂತಾಗಿದೆ’ ಎಂದರು.

ADVERTISEMENT

‘ಇತ್ತೀಚೆಗೆ ಪ್ರಕಟಗೊಂಡ ಪಂಚ ರಾಜ್ಯ ಚುನಾವಣೆ ಫಲಿತಾಂಶದ ಪ್ರಕಾರ ಮೂರು ರಾಜ್ಯಗಳಲ್ಲಿ ಕಾಂಗ್ರೆಸ್ ಬಹು ಮತ ಹೊಂದಿದ್ದರೂ ಬಿಜೆಪಿ ಮಾತ್ರ ಹಿಂಬಾಗಿಲಿನ ಮೂಲಕ ಅಧಿಕಾರ ಹಿಡಿದಿದೆ’ ಎಂದು ಆರೋಪಿಸಿದರು.

ಜಿಲ್ಲಾ ಪಂಚಾಯಿತಿ ಸದಸ್ಯರಾದ ಮಮತಾ ಎಸ್. ಗಟ್ಟಿ, ಮಂಜುಳಾ ಮಾಧವ ಮಾವೆ, ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಘಟಕ ಅಧ್ಯಕ್ಷ ಪದ್ಮನಾಭ ನರಿಂ ಗಾನ, ಎಪಿಎಂಸಿ ಅಧ್ಯಕ್ಷ ಕೆ.ಪದ್ಮನಾಭ ರೈ ಮತ್ತಿತರರು ಮಾತನಾಡಿದರು.

ಬಂಟ್ವಾಳ ಮತ್ತು ಪಾಣೆಮಂಗ ಳೂರು ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕೆ.ಮಾಯಿಲಪ್ಪ ಸಾಲ್ಯಾನ್ ಮತ್ತು ಅಬ್ಬಾಸ್ ಆಲಿ, ಬೂಡ ಮಾಜಿ ಅಧ್ಯಕ್ಷ ಪಿಯೂಸ್ ಎಲ್. ರೋಡ್ರಿಗಸ್, ಪುರ ಸಭಾ ಉಪಾಧ್ಯಕ್ಷ ಮುಹಮ್ಮದ್ ನಂದ ರಬೆಟ್ಟು, ತಾಲ್ಲೂಕು ಪಂಚಾಯಿತಿ ಸದಸ್ಯ ಉಸ್ಮಾನ್ ಕರೋಪಾಡಿ, ಎಪಿಎಂಸಿ ಉಪಾಧ್ಯಕ್ಷ ಚಂದ್ರಶೇಖರ ಪೂಜಾರಿ, ಜಿಲ್ಲಾ ಸೇವಾ ದಳದ ಸದಸ್ಯ ವೆಂಕಪ್ಪ ಪೂಜಾರಿ, ಯುವ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷ ಲುಕ್ಮಾನ್ ಇದ್ದರು.

*

ಪಂಚರಾಜ್ಯ ಚುನಾವಣೆ ಫಲಿತಾಂಶದ ಪ್ರಕಾರ 3 ರಾಜ್ಯಗ ಳಲ್ಲಿ ಕಾಂಗ್ರೆಸ್ ಬಹುಮತ ಹೊಂದಿ ದ್ದರೂ ಬಿಜೆಪಿ ಮಾತ್ರ ಹಿಂಬಾಗಿಲಿನ ಮೂಲಕ ಅಧಿಕಾರ ಹಿಡಿದಿದೆ.
-ಎಂ.ಎಸ್.ಮಹಮ್ಮದ್,
ಜಿಲ್ಲಾ ಪಂಚಾಯಿತಿ ಸದಸ್ಯ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.