ADVERTISEMENT

ಕೊರಗ ಯುವಕರನ್ನು ಕ್ರೀಡಾ ಕ್ಷೇತ್ರಕ್ಕೆ ಸಜ್ಜುಗೊಳಿಸಲು ಯೋಜನೆ: ಸಚಿವ

​ಪ್ರಜಾವಾಣಿ ವಾರ್ತೆ
Published 27 ಮೇ 2017, 6:45 IST
Last Updated 27 ಮೇ 2017, 6:45 IST

ಉಡುಪಿ: ಕೊರಗ ಸಮುದಾಯದ ಯುವಕ– ಯುವತಿಯರನ್ನು ಕ್ರೀಡಾ ಕ್ಷೇತ್ರಕ್ಕೆ ಸಜ್ಜುಗೊಳಿಸುವುದು ಹೇಗೆ ಎಂದು ವರದಿ ನೀಡಿದರೆ, ಅವರಿಗಾಗಿ ವಿಶೇಷ ಯೋಜನೆ ಜಾರಿಗೊಳಿಸಲಾ ಗುವುದು ಎಂದು ಕ್ರೀಡಾ ಮತ್ತು ಯುವ ಸಬಲೀಕರಣ ಸಚಿವ ಪ್ರಮೋದ್ ಮಧ್ವರಾಜ್ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕ್ರೀಡಾ ಮತ್ತು ಯುವ ಸಬಲೀ ಕರಣ ಇಲಾಖೆ ಕೊರಗ ಸಮುದಾಯದ ಯುವಕ, ಯುವತಿಯರಿಗೆ ಶುಕ್ರವಾರ ಏರ್ಪಡಿಸಿದ್ದ  ಜಿಲ್ಲಾ ಮಟ್ಟದ ಕ್ರೀಡಾ ಕೂಟ ಉದ್ಘಾಟಿಸಿ ಮಾತನಾಡಿದರು. ಉತ್ತರ ಕನ್ನಡ ಜಿಲ್ಲೆಯಲ್ಲಿರುವ ಸಿದ್ಧಿ ಜನಾಂಗದ ಮಕ್ಕಳಿಗಾಗಿ ವಿಶೇಷ ಕ್ರೀಡಾ ತರಬೇತಿ ಶಾಲೆ ಆರಂಭಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್‌ನಲ್ಲಿ ಘೋಷಿಸಿದ್ದಾರೆ.

ಅದೇ ರೀತಿ ಕೊರಗರಿಗೂ ತರಬೇತಿ ನೀಡಿ ಕ್ರೀಡಾ ಕ್ಷೇತ್ರದಲ್ಲಿ ಅವರ ಅಸ್ಮಿತೆ ತೋರಿಸಲು ಎಲ್ಲ ರೀತಿಯ ಸೌಲಭ್ಯ ಒದಗಿಸಿ ಕೊಡ ಲಾಗುವುದು. ಅವರು ಇತರ ಸಮುದಾ ಯದವರ ಜೊತೆಗೆ ಸ್ಪರ್ಧಿಸಬೇಕು ಹಾಗೂ ಎಲ್ಲ ಕ್ಷೇತ್ರಗಳಲ್ಲಿಯೂ ಮುಂದೆ ಬರಬೇಕು ಎಂದು ಅವರು ಹೇಳಿದರು.

ADVERTISEMENT

ಜಿಲ್ಲೆಯಲ್ಲಿ ಕ್ರೀಡಾ ಮೂಲ ಸೌಕರ್ಯ ವನ್ನು ಹೆಚ್ಚಿಸಲು ಈಗಾಗಲೇ ದೊಡ್ಡ ಮೊತ್ತದ ಅನುದಾನ ನೀಡಲಾಗಿದ್ದು, ಹಲವಾರು ಕಾಮಗಾರಿಗಳು ಪ್ರಗತಿಯಲ್ಲಿವೆ. ಜಿಲ್ಲಾ ಒಳಾಂಗಣ ಕ್ರೀಡಾಂಗಣಕ್ಕೆ ₹1 ಕೋಟಿ ವೆಚ್ಚದಲ್ಲಿ ಹವಾ ನಿಯಂತ್ರಣ ವ್ಯವಸ್ಥೆ ಅಳವಡಿಸಲಾಗುವುದು.

ನೇಜಾ ರಿನಲ್ಲಿ ಅಂತರರಾಷ್ಟ್ರೀಯ ಗುಣಮಟ್ಟದ ಈಜುಕೊಳ ನಿರ್ಮಾಣ ಮಾಡಲು ₹8 ಕೋಟಿಯ ಪ್ರಸ್ತಾವನೆಯನ್ನು ಕೇಂದ್ರಕ್ಕೆ ಕಳುಹಿಸಿಕೊಡಲಾಗಿದೆ. ಅಥ್ಲೆಟಿಕ್ ಅಕಾ ಡೆಮಿ ಆರಂಭಿಸಲು ₹1.50 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ. ₹3.50 ಕೋಟಿ ವೆಚ್ಚದಲ್ಲಿ ಒಳಾಂಗಣ ಟೆನ್ನಿಸ್ ಕೋರ್ಟ್‌ ನಿರ್ಮಾಣ ಮಾಡಲಾ ಗುತ್ತಿದೆ ಎಂದರು.

ಜಿಲ್ಲಾ ಪಂಚಾಯಿತಿ ಅಧ್ಯಕ್ಷ ದಿನಕರ ಬಾಬು, ನಗರಸಭೆ ಅಧ್ಯಕ್ಷೆ ಮೀನಾಕ್ಷಿ ಮಾಧವ, ಉಪಾಧ್ಯಕ್ಷೆ ಸಂಧ್ಯಾ ತಿಲಕ್‌ ರಾಜ್, ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ನಳಿನಿ ಪ್ರದೀಪ್, ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್‌, ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ರೋಶನ್ ಕುಮಾರ್ ಶೆಟ್ಟಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.