ADVERTISEMENT

ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ರಾಜಸ್ತಾನ ಮುಖ್ಯಮಂತ್ರಿ

​ಪ್ರಜಾವಾಣಿ ವಾರ್ತೆ
Published 21 ನವೆಂಬರ್ 2017, 10:00 IST
Last Updated 21 ನವೆಂಬರ್ 2017, 10:00 IST
ಕುಂದಾಪುರ ತಾಲ್ಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಸೋಮವಾರ ಭೇಟಿ ನೀಡಿದ ರಾಜಸ್ತಾನ ಮುಖ್ಯಮಂತ್ರಿ ವಸುಂಧರಾ ರಾಜೇ ಅವರು ಶ್ರೀ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.
ಕುಂದಾಪುರ ತಾಲ್ಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಸೋಮವಾರ ಭೇಟಿ ನೀಡಿದ ರಾಜಸ್ತಾನ ಮುಖ್ಯಮಂತ್ರಿ ವಸುಂಧರಾ ರಾಜೇ ಅವರು ಶ್ರೀ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.   

ಕುಂದಾಪುರ: ಸೋಮವಾರ ಬೆಳಿಗ್ಗೆ ಕೊಲ್ಲೂರಿನ ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿದ ರಾಜಸ್ತಾನ ಮುಖ್ಯಮಂತ್ರಿ ವಸುಂದರಾ ರಾಜೆ ಅವರು ಶ್ರೀ ದೇವಿಯ ದರ್ಶನ ಪಡೆದು, ಕ್ಷೇತ್ರದ ಋತ್ವೀಜರ ಮೂಲಕ ವಿಶೇಷ ಪೂಜೆ ಸಲ್ಲಿಸಿದರು.

ಬೆಂಗಳೂರಿನಿಂದ ಪುತ್ರನೊಂದಿಗೆ ಮಂಗಳೂರಿಗೆ ವಿಶೇಷ ವಿಮಾನದಲ್ಲಿ ಬಂದಿದ್ದ ಅವರು ಭಾರಿ ಭದ್ರತೆಯೊಂದಿಗೆ ದೇವಸ್ಥಾನಕ್ಕೆ ಆಗಮಿಸಿದರು. ಅವರನ್ನು ಪೂರ್ಣಕುಂಭ ಸ್ವಾಗತದೊಂದಿಗೆ ಬರ ಮಾಡಿಕೊಳ್ಳಲಾಯಿತು.

ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಹರೀಶ್‌ ಕುಮಾರ ಶೆಟ್ಟಿ, ಪ್ರಭಾರ ಕಾರ್ಯನಿರ್ವಹ ಣಾಧಿಕಾರಿ ಜನಾರ್ದನ್‌, ಸಹಾಯಕ ಕಾರ್ಯನಿರ್ವಹಣಾಧಿಕಾರಿ ಕೃಷ್ಣ ಮೂರ್ತಿ, ಜಿಲ್ಲಾ ಬಿಜೆಪಿ ಅಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ, ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಸುಕುಮಾರ ಶೆಟ್ಟಿ , ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ವಂಡಬಳ್ಳಿ ಜಯರಾಮ ಶೆಟ್ಟಿ, ರಮೇಶ್‌ ಗಾಣಿಗ, ಮಂಜುನಾಥ ಅಡಿಗ, ಅಂಬಿಕಾ ರಾಜು ದೇವಾಡಿಗ ಇದ್ದರು.

ADVERTISEMENT

ಭಕ್ತರಿಗೆ ನಿರ್ಬಂಧ: ರಾಜಸ್ತಾನ ಮುಖ್ಯಮಂತ್ರಿಯ ಆಗಮನದ ಹಿನ್ನೆಲೆ ಯಲ್ಲಿ ದೇವಸ್ಥಾನದ ಪರಿಸರದಲ್ಲಿ ಭಾರಿ ಪೊಲೀಸ್‌ ಬಂದೋಬಸ್ತ್‌ ಮಾಡಲಾಗಿತ್ತು. ಬೆಳಿಗ್ಗೆ 10 ಗಂಟೆಯಿಂದಲೇ ಭಕ್ತರಿಗೆ ದೇಗುಲ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿತ್ತು. ಈ ಕಾರ್ಯಕ್ರಮದ ಪೂರ್ವ ಮಾಹಿತಿ ಇಲ್ಲದೆ ದೇವರ ದರ್ಶನಕ್ಕೆಂದು ಬಂದಿದ್ದ ಯಾತ್ರಾರ್ಥಿಗಳು ಹಾಗೂ ಭಕ್ತರು ದೇವರ ದರ್ಶನವಾಗದೆ ಬೇಸರದಿಂದ ಹಿಂತಿರುಗುವ ಪರಿಸ್ಥಿತಿ ಉಂಟಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.