ADVERTISEMENT

ಕ್ರೀಡೆಯಲ್ಲಿ ಸಾಧನೆ ಮಾಡಲು ಸಲಹೆ

​ಪ್ರಜಾವಾಣಿ ವಾರ್ತೆ
Published 19 ಜುಲೈ 2017, 9:46 IST
Last Updated 19 ಜುಲೈ 2017, 9:46 IST

ಪಡುಬಿದ್ರಿ: ‘ಯುವಕರು ಮೂಲಪದ್ಧತಿಗಳ ಅರಿವಿನೊಂದಿಗೆ ಕ್ರೀಡಾಕ್ಷೇತ್ರದಲ್ಲಿಯೂ ಸಾಧನೆ ಮಾಡಬೇಕು’ ಎಂದು ಅದಾನಿ-ಯುಪಿಸಿಎಲ್ ಜಂಟಿ ಅಧ್ಯಕ್ಷ ಕಿಶೋರ್ ಆಳ್ವ ಸಲಹೆ ಮಾಡಿದರು. ಪಡುಬಿದ್ರಿ ರೋಟರಿ ಕ್ಲಬ್ ವತಿಯಿಂದ ಅದಾನಿ ಪ್ರಾಯೋಜಕತ್ವದಲ್ಲಿ ಭಾನುವಾರ ನಡೆದ ತುಳುನಾಡ ಜನಪದೋತ್ಸವ ಕೆಸರ್ಡೊಂಜಿ ದಿನ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದರು.

‘ಹಿರಿಯರು ಅನುಸರಿಸುತ್ತಿದ್ದ ಕೃಷಿ ಪದ್ಧತಿಯೆಡೆಗೆ ಮರಳುವ ಪ್ರಯತ್ನ ನಡೆಯಬೇಕು. ಅದಾನಿ-ಯುಪಿಸಿಎಲ್ ಗ್ರಾಮೀಣ ಭಾಗದ ಜನರ ಆರೋಗ್ಯ ಹಾಗೂ ಶೈಕ್ಷಣಿಕ ಕ್ಷೇತ್ರಕ್ಕೆ ಪ್ರಾಶಸ್ತ್ಯ ನೀಡುತ್ತಿದ್ದು, ಅವಿಭಜಿತ ಜಿಲ್ಲೆಯ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವ ಯೋಜನೆಯನ್ನೂ ಆರಂಭಿಸಿದೆ’ ಎಂದರು.

ಚಿತ್ರನಟಿಯರಾದ ರಾಧಿಕಾ ರಾವ್, ಸ್ವಾತಿ ಬಂಗೇರ ಅವರನ್ನು ಸನ್ಮಾನಿಸಲಾಯಿತು. ರೋಟರಿ ಕ್ಲಬ್ ಅಧ್ಯಕ್ಷ ರಮೀಝ್ ಹುಸೈನ್ ಅಧ್ಯಕ್ಷತೆ ವಹಿಸಿದ್ದರು.  ರೋಟರಿ ವಲಯ 5ರ ಸಹಾಯಕ ಗವರ್ನರ್ ಹರಿಪ್ರಕಾಶ್ ಶೆಟ್ಟಿ, ವಲಯ ಸೇನಾನಿ ಪಿ.ಕೃಷ್ಣ ಬಂಗೇರ, ಎಪಿಎಂಸಿ ಸದಸ್ಯ ನವೀನ್ಚಂದ್ರ ಸುವರ್ಣ ಅಡ್ವೆ, ಪಡುಬಿದ್ರಿ ಸಿಎ ಬ್ಯಾಂಕ್ ಅಧ್ಯಕ್ಷ ವೈ. ಸುಧೀರ್ ಕುಮಾರ್, ಕಾಪು ವಲಯ ವಿಶ್ವಕರ್ಮ ಒಕ್ಕೂಟ ಉಪಾಧ್ಯಕ್ಷ ಗಣೇಶ್ ಆಚಾರ್ಯ ಉಚ್ಚಿಲ, ಮೀನುಗಾರಿಕಾ ನಿಗಮ ನಿದರ್ೇಶಕ ದೀಪಕ್ ಕುಮಾರ್ ಎಮರ್ಾಳ್, ಉಡುಪಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಸುರೇಶ್ ಶೆಟ್ಟಿ ಗುರ್ಮೆ ಇದ್ದರು.

ADVERTISEMENT

ಹಗ್ಗಜಗ್ಗಾಟ ಪುರುಷ ಮತ್ತು ಮಹಿಳಾ ವಿಭಾಗ, ಕೆಸರುಗದ್ದೆ ಓಟ, ಉಪ್ಪು ಮೂಟೆ ಓಟ, ಮೂರು ಕಾಲು ಓಟ, ಸಂಗೀತ ಕುಚರ್ಿ, ನಿಧಿ ಶೋಧನೆ ಸ್ಪರ್ಧೆಗಳು ನಡೆಯಿತು. ಹಗ್ಗ ಜಗ್ಗಾಟ ಸ್ಪರ್ಧೆಯ ಮಹಿಳಾ ವಿಭಾಗದಲ್ಲಿ ಪೇಜಾವರ ಫ್ರೆಂಡ್ಸ್ ಪ್ರಥಮ ಹಾಗೂ ಅಮ್ಮ ಪಡುಬಿದ್ರಿ ತಂಡ ದ್ವಿತೀಯ ಸ್ಥಾನ ಪಡೆಯಿತು. ಪುರುಷರ ವಿಭಾಗದಲ್ಲಿ ಜೇಸಿಐ ಬಿ ಮತ್ತು ಎ ತಂಡ ಕ್ರಮವಾಗ ಪ್ರಥಮ ಹಾಗೂ ದ್ವಿತೀಯ ಬಹುಮಾನ ಗಳಿಸಿತು.

ಸಮಾರೋಪ ಸಮಾರಂಭದಲ್ಲಿ ಅದಾನಿ-ಯುಪಿಸಿಎಲ್ ಜಂಟಿ ಅಧ್ಯಕ್ಷ ಕಿಶೋರ್ ಆಳ್ವ, ದಕ ಮತ್ತು ಉಡುಪಿ ಜಿಲ್ಲಾ ಮೀನು ಮಾರಾಟ ಫೆಡರೇಶನ್ ಅಧ್ಯಕ್ಷ ಯಶ್ಪಾಲ್ ಸುವರ್ಣ, ಕಾಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನವೀನ್ಚಂದ್ರ ಜೆ.ಶೆಟ್ಟಿ, ಜಿಪಂ ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷ ಶಶಿಕಾಂತ್ ಪಡುಬಿದ್ರಿ, ಗ್ರಾಪಂ ಉಪಾಧ್ಯಕ್ಷ ವೈ. ಸುಕುಮಾರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.