ADVERTISEMENT

ಗ್ರಾಮಗಳಿಗೆ ಇನ್ನಷ್ಟು ನರ್ಮ್ ಬಸ್

​ಪ್ರಜಾವಾಣಿ ವಾರ್ತೆ
Published 21 ಏಪ್ರಿಲ್ 2017, 7:00 IST
Last Updated 21 ಏಪ್ರಿಲ್ 2017, 7:00 IST

ಚಾಂತಾರು(ಬ್ರಹ್ಮಾವರ): ‘ಉಡುಪಿ ಜಿಲ್ಲೆಯಲ್ಲಿ ಖಾಸಗಿ ಬಸ್‌ ಮಾಲೀಕರ ವಿರೋಧ, ಲಾಬಿ ಮೆಟ್ಟಿ ನಿಂತು  ಜೆ–ನರ್ಮ್ ಅಡಿ ಸರ್ಕಾರಿ ಬಸ್‌ ಸೌಲಭ್ಯ ನೀಡಲಾಗಿದೆ. ಗ್ರಾಮಾಂತರ ಪ್ರದೇಶಗಳಿಗೂ ಮುಂದಿನ ದಿನಗಳಲ್ಲಿ ಈ  ಸೌಲಭ್ಯ ವಿಸ್ತರಣೆ ಮಾಡಲಾಗು ವುದು’ ಎಂದು ಸಚಿವ ಪ್ರಮೋದ್ ಮಧ್ವರಾಜ್ ಹೇಳಿದರು. ಚಾಂತಾರು ಗರೋಡಿ ವಠಾರದಲ್ಲಿ ಈಚೆಗೆ ಚಾಂತಾರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜನಸಂಪರ್ಕ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಉಡುಪಿ ವಿಧಾನಸಭಾ ಕ್ಷೇತ್ರದ ನಗರಸಭೆ 15ವಾರ್ಡ್‌ಗಳಲ್ಲಿ ಮತ್ತು ಎಲ್ಲ 30 ಗ್ರಾಮಗಳಲ್ಲಿ ಜನರ ಸಮಸ್ಯೆಗಳಿಗೆ ಸ್ಪಂದಿಸಿ ಅದಕ್ಕೆ ಪರಿಹಾರ ಒದಗಿಸುವ ಸಲುವಾಗಿ ಜನ ಸಂಪರ್ಕ ಸಭೆ ನಡೆಯುತ್ತಿದೆ ಎಂದು ಅವರು ತಿಳಿಸಿದರು.ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಶೀಲಾ ಕೆ ಶೆಟ್ಟಿ, ಸದಸ್ಯ ಮೈರ್ಮಾಡಿ ಸುಧಾಕರ ಶೆಟ್ಟಿ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ನಳಿನಿ ಪ್ರದೀಪ್ ರಾವ್‌, ಸದಸ್ಯ ಸುಧೀರ್ ಕುಮಾರ್‌ ಶೆಟ್ಟಿ, ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಿತ್ಯಾನಂದ ಶೆಟ್ಟಿ ಹಾರಾಡಿ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ಮಲ್ಲಿಕಾ ಬಾಲಕೃಷ್ಣ ಪೂಜಾರಿ, ವಿಶೇಷ ತಹಶೀಲ್ದಾರ್ ಪ್ರದೀಪ್ ಕುರ್ಡೇಕರ್, ತಾಲ್ಲೂಕು ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶೇಷಪ್ಪ ಇದ್ದರು. ಸಮಾರಂಭದಲ್ಲಿ ವಿವಿಧ ಫಲಾನು ಭವಿಗಳಿಗೆ ಸವಲತ್ತುಗಳನ್ನು ವಿತರಿಸಲಾ ಯಿತು. ತಾಲ್ಲೂಕು ಪಂಚಾಯಿತಿ ಸದಸ್ಯ ದಿನಕರ ಹೇರೂರು ಸ್ವಾಗತಿಸಿದರು.
ಉಮೇಶ್ ಪೂಜಾರಿ ಕಾರ್ಯಕ್ರಮ ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT