ADVERTISEMENT

‘ಜನನಾಯಕ ಅಂಬೇಡ್ಕರ್‌’

​ಪ್ರಜಾವಾಣಿ ವಾರ್ತೆ
Published 15 ಏಪ್ರಿಲ್ 2017, 6:29 IST
Last Updated 15 ಏಪ್ರಿಲ್ 2017, 6:29 IST
ಆದಿಉಡುಪಿಯ ಅಂಬೇಡ್ಕರ್‌ ಭವನದಲ್ಲಿ ಶುಕ್ರವಾರ ಆಯೋಜಿಸಿದ್ದ ಡಾ. ಬಿ.ಆರ್‌. ಅಂಬೇಡ್ಕರ್‌ ಅವರ 126ನೇ ಜನ್ಮದಿನಾಚರಣೆ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್‌ ಮಧ್ವರಾಜ್‌ ಮಾತನಾಡಿದರು.
ಆದಿಉಡುಪಿಯ ಅಂಬೇಡ್ಕರ್‌ ಭವನದಲ್ಲಿ ಶುಕ್ರವಾರ ಆಯೋಜಿಸಿದ್ದ ಡಾ. ಬಿ.ಆರ್‌. ಅಂಬೇಡ್ಕರ್‌ ಅವರ 126ನೇ ಜನ್ಮದಿನಾಚರಣೆ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್‌ ಮಧ್ವರಾಜ್‌ ಮಾತನಾಡಿದರು.   

ಉಡುಪಿ:  ಡಾ. ಬಿ.ಆರ್‌. ಅಂಬೇಡ್ಕರ್‌ ದಲಿತರಿಗೆ ಮಾತ್ರ ಸೀಮಿತರಾದ ನಾಯ ಕರಲ್ಲ, ಅವರು ದೇಶದ ಎಲ್ಲ ವರ್ಗಗಳ ನಾಯಕರು ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್‌ ಮಧ್ವರಾಜ್‌ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ನಗರಸಭೆ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಆದಿಉಡುಪಿಯ ಅಂಬೇಡ್ಕರ್‌ ಭವನದಲ್ಲಿ ಶುಕ್ರವಾರ ಆಯೋಜಿಸಿದ್ದ ಡಾ. ಬಿ.ಆರ್‌. ಅಂಬೇಡ್ಕರ್‌ ಅವರ 126ನೇ ಜನ್ಮದಿನಾಚರಣೆ ಸಮಾರಂಭದಲ್ಲಿ ಮಾತನಾಡಿದರು.

ದೇಶದ ಎಲ್ಲಾ ವರ್ಗದಲ್ಲಿನ ದುರ್ಬ ಲರ ಮತ್ತು ಶೋಷಿತರ ಏಳಿಗೆಗಾಗಿ ಅಂಬೇಡ್ಕರ್‌ ಶ್ರಮಿಸಿದ್ದಾರೆ. ಹಾಗಾಗಿ ಅವರನ್ನು ಒಂದು ವರ್ಗಕ್ಕೆ ಸೀಮಿತ ಮಾಡುವುದು ಸರಿಯಲ್ಲ. ಅವರು ರೂಪಿಸಿದ ಕಾರ್ಯಕ್ರಮಗಳು, ಯೋಜ ನೆಗಳು ಕೆಲವರಿಗೆ ಮಾತ್ರ ತಲುಪುತ್ತಿದ್ದು, ಅದನ್ನು ಅರ್ಹರೆಲ್ಲರಿಗೂ ತಲುಪಿಸಲು ಸಂಘಟನೆಗಳು ಹಾಗೂ ಜನಪ್ರತಿ ನಿಧಿಗಳು ಪ್ರಯತ್ನಿಸಬೇಕಾಗಿದೆ ಎಂದರು.

ADVERTISEMENT

ಪರಿಶಿಷ್ಟ ಜಾತಿ ಮತ್ತು ಪಂಗಡ ದವರ ಅಭಿವೃದ್ಧಿಗೆ ಕಳೆದ ಸಾಲಿನ ಬಜೆಟ್‌ನಲ್ಲಿ ರಾಜ್ಯ ಸರ್ಕಾರ ₹18 ಸಾವಿರ ಕೋಟಿ ಅನುದಾನ ಮೀಸಲಿಟ್ಟಿತ್ತು, ಈ ಬಾರಿಯ ಬಜೆಟ್‌ನಲ್ಲಿ ₹27 ಸಾವಿರ ಕೋಟಿ ಅನುದಾನವನ್ನು ಮೀಸಲಿಡಲಾಗಿದೆ. ಎಲ್ಲಾ ಇಲಾಖೆಗಳ ಮೂಲಕ ಈ ಸಮುದಾಯದ ಅಭಿವೃದ್ಧಿಗಾಗಿ ವಿವಿಧ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ ಎಂದು ಹೇಳಿದರು.

ಕಾರ್ಯಕ್ರಮ ಉದ್ಘಾಟಿಸಿ ಮಾತ ನಾಡಿದ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ದಿನಕರ ಬಾಬು, ಡಾ. ಬಿ.ಆರ್‌. ಅಂಬೇಡ್ಕರ್‌ ಅವರ ವಿಚಾರಧಾರೆಗಳು ವಿಶ್ವವ್ಯಾಪಿಯಾದದ್ದು. ಅವರ ತತ್ವ ಚಿಂತನೆಗಳನ್ನು ಜೀವನದಲ್ಲಿ ಅಳವಡಿಸಿ ಕೊಂಡು, ಈ ದೇಶವನ್ನು ಇನ್ನಷ್ಟು ಬಲಿಷ್ಠವಾಗಿ ಕಟ್ಟುವ ಕೆಲಸ ಮಾಡಬೇಕು ಎಂದರು.

ಉಪನ್ಯಾಸಕ ಡಾ. ವಾಸುದೇವ ಬೆಳ್ಳೆ ಮಾತನಾಡಿದರು.ಉಡುಪಿ ನಗರಸಭೆಯ ಅಧ್ಯಕ್ಷೆ ಮೀನಾಕ್ಷಿ ಮಾಧವ ಬನ್ನಂಜೆ, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ನರಸಿಂಹ ಮೂರ್ತಿ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ನಳಿನಿ ಪ್ರದೀಪ್‌ ರಾವ್‌, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿ, ಜಿಲ್ಲಾ ಪಂಚಾಯಿತಿಯ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಕೆ. ಬಾಬು ಶೆಟ್ಟಿ, ನಗರಸಭೆಯ ಉಪಾಧ್ಯಕ್ಷೆ ಸಂಧ್ಯಾ ತಿಲಕ್‌ರಾಜ್‌, ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷ ರಾಜೇಂದ್ರ ಪಂದುಬೆಟ್ಟು, ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್‌, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕೆ.ಟಿ. ಬಾಲಕೃಷ್ಣ, ಹೆಚ್ಚುವರಿ ಜಿಲ್ಲಾಧಿಕಾರಿ ಜಿ. ಅನುರಾಧಾ, ತಹಶೀಲ್ದಾರ್‌ ಮಹೇಶ್ಚಂದ್ರ ಉಪಸ್ಥಿತರಿದ್ದರು. ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಎಸ್‌.ಎನ್‌. ರಮೇಶ್‌ ಸ್ವಾಗತಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.