ADVERTISEMENT

ಜಾಗೃತಿ ಕಾರ್ಯಕ್ರಮ ಆಯೋಜಿಸಲು ಸೂಚನೆಜಾಗೃತಿ ಕಾರ್ಯಕ್ರಮ ಆಯೋಜಿಸಲು ಸೂಚನೆ

​ಪ್ರಜಾವಾಣಿ ವಾರ್ತೆ
Published 21 ಏಪ್ರಿಲ್ 2017, 7:01 IST
Last Updated 21 ಏಪ್ರಿಲ್ 2017, 7:01 IST

ಉಡುಪಿ:‘ಜಿಲ್ಲೆಯಲ್ಲಿ ಬಾಲ್ಯ ವಿವಾಹ ಮತ್ತು ಬಾಲಕಾರ್ಮಿಕ ಪದ್ಧತಿ ತಡೆಗೆ ಸಂಬಂಧಿಸಿದಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಕಾರ್ಮಿಕ ಇಲಾಖೆ ಸಹಯೋಗದಲ್ಲಿ ಏಪ್ರಿಲ್‌ ಮತ್ತು ಮೇ ತಿಂಗಳಲ್ಲಿ ಜಾಗೃತಿ ಕಾರ್ಯಕ್ರಮ ಆಯೋಜಿಸಿ’ ಎಂದು ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್‌ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಬುಧವಾರ ನಡೆದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾಮಟ್ಟದ ಸಮನ್ವಯ ಸಮಿತಿಗಳ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.

‘ಏಪ್ರಿಲ್‌, ಮೇ ತಿಂಗಳಲ್ಲಿ ಸಾಮೂ ಹಿಕ ವಿವಾಹ ಹೆಚ್ಚಾಗಿ ನಡೆಯುತ್ತವೆ. ಈ ಸಮಯದಲ್ಲಿ ಮಕ್ಕಳಿಗೂ ರಜೆ ಇರುತ್ತದೆ. ಹಾಗಾಗಿ ಮಕ್ಕಳ ಮೇಲೆ ಹೆಚ್ಚಿನ ನಿಗಾ ವಹಿಸಬೇಕು. ಅವರ ಮೇಲಾಗುವ ದೌರ್ಜನ್ಯ ತಡೆಗೆ ದೃಶ್ಯ ಮಾಧ್ಯಮದ ಮೂಲಕ ಮಕ್ಕಳ ರಕ್ಷಣೆ ಬಗ್ಗೆ ಈಗಾಗಲೇ ಇಲಾಖೆ ನಿರ್ಮಿಸಿರುವ ಜಾಗೃತಿ ಕಾರ್ಯ ಕ್ರಮ, ಕಾನೂನು ಕ್ರಮಗಳ ಮಾಹಿತಿ ನೀಡಲು ಇಲಾಖೆ ಕ್ರಮಕೈಗೊಳ್ಳಬೇಕು’ ಎಂದು ಸೂಚನೆ ನೀಡಿದರು.

‘ಜಿಲ್ಲೆಯ ಪ್ರವಾಸಿ ತಾಣಗಳಲ್ಲಿ ಭಿಕ್ಷಾಟನೆ ಹೆಚ್ಚುತ್ತಿರುವ ಬಗ್ಗೆ ಎನ್‌ಜಿಒ ಒಬ್ಬರು ನೀಡಿದ ಮಾಹಿತಿಯನ್ನಾಧರಿಸಿ ಪೊಲೀಸರು ಕಠಿಣ ಕ್ರಮಗಳನ್ನು ಕೈಗೊಳ್ಳಿ, ಭಿಕ್ಷಾಟನೆ ನಡೆಸುವ ಮಕ್ಕಳ ಹೆತ್ತವರ ವಿರುದ್ಧ ಪ್ರಕರಣ ದಾಖಲಿಸಿ’ ಎಂದು ತಿಳಿಸಿದರು.‘ಮಹಿಳೆಯರ ಮತ್ತು ಮಕ್ಕಳ ರಕ್ಷಣೆಗಿರುವ ಸಾಂತ್ವನ ಮತ್ತು ಸ್ಟೇಟ್‌ ಹೋಂ ಕಾರ್ಯಕ್ರಮಗಳ ಪರಿಣಾಮ ಕಾರಿ ಅನುಷ್ಠಾನಕ್ಕೆ ಪೊಲೀಸ್‌ ಇಲಾಖೆ ಕೈಜೋಡಿಸಬೇಕು. ಸಾಂತ್ವನ ಪ್ರತಿನಿಧಿ ಗಳು ಪೊಲೀಸ್‌ ಠಾಣೆಗಳಲ್ಲಿ ಸೂಕ್ತ ಸ್ಪಂದನೆ ಸಿಗುತ್ತಿಲ್ಲ ಎಂಬುದನ್ನು ಜಿಲ್ಲಾಧಿಕಾರಿ ಗಮನಕ್ಕೆ ತಂದಾಗ, ಅಂತಹ ಘಟನೆಗಳ ಬಗ್ಗೆ ಪೊಲೀಸ್‌ ದೂರು ಪ್ರಾಧಿಕಾರಕ್ಕೆ ದೂರು ನೀಡಿ’ ಎಂದರು.

ADVERTISEMENT

‘ಡಿವೈಎಸ್‌ಪಿ ಕುಮಾರಸ್ವಾಮಿ ಕಾರ್ಕಳ ಠಾಣೆಯಲ್ಲಿ ಸ್ವತಃ ಹಾಜರಿದ್ದು, ಸಾಂತ್ವನ ಕೇಂದ್ರದ ಎಲ್ಲ ದೂರು ಪರಿಶೀಲಿಸುವ ಭರವಸೆ’ ನೀಡಿದರು. ಕೌಟುಂಬಿಕ ಹಿಂಸೆಯಿಂದ ಮಹಿಳೆ ಯರನ್ನು ರಕ್ಷಿಸುವ ಕಾಯಿದೆ ಬಗ್ಗೆ ಎಲ್ಲ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಪ್ರಚಾರಾಂದೋಲನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಗ್ರಾಮಮಟ್ಟದ ಕಾರ್ಯಕ್ರಮಗಳಲ್ಲಿ, ಆರೋಗ್ಯ ಇಲಾಖೆ ಕಾರ್ಯಾಗಾರಗಳಲ್ಲಿ, ಸ್ತ್ರಿ ಶಕ್ತಿ ಒಕ್ಕೂಟದ ಸಭೆಗಳಲ್ಲಿ, ಅಂಗನವಾಡಿ ಕಾರ್ಯ ಕರ್ತೆಯರ ಹಾಗೂ ಸ್ತ್ರೀ ಶಕ್ತಿ ಗುಂಪುಗಳ ಸಭೆಗಳಲ್ಲಿ ಕೌಟುಂಬಿಕ ಹಿಂಸೆಯಿಂದ ಮಹಿಳೆ ರಕ್ಷಣೆ ಬಗ್ಗೆ ಮಾಹಿತಿ ನೀಡಲಾ ಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಗ್ರೇಸಿ ಗೊನ್ಸಾಲಿಸ್‌ ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.