ADVERTISEMENT

ಜಿಲ್ಲಾಧಿಕಾರಿಯ ಕ್ರಮ ಖಂಡಿಸಿ ಪ್ರತಿಭಟನೆ

ಸಾಂಪ್ರದಾಯಿಕ ಮರಳುಗಾರಿಕೆ ಹೆಸರಿನಲ್ಲಿ ಅವ್ಯವಹಾರ– ಕರ್ನಾಟಕ ದಲಿತ ಸಂಘರ್ಷ ಸಮಿತಿ ಆರೋಪ

​ಪ್ರಜಾವಾಣಿ ವಾರ್ತೆ
Published 28 ಮೇ 2016, 4:40 IST
Last Updated 28 ಮೇ 2016, 4:40 IST
ಜಿಲ್ಲೆಯ ಕರಾವಳಿ ನಿಯಂತ್ರಣ ವಲಯ ವ್ಯಾಪ್ತಿಯಲ್ಲಿ ಸಾಂಪ್ರದಾಯಿಕ ಮರಳು ಕಾರ್ಮಿಕರಲ್ಲದ ಖಾಸಗಿ ವ್ಯಕ್ತಿಗಳಿಗೆ ಮರಳುಗಾರಿಕೆ ನಡೆಸಲು ಅವಕಾಶ ಮಾಡಿಕೊಟ್ಟಿರುವ ಜಿಲ್ಲಾಧಿಕಾರಿಯ ಕ್ರಮವನ್ನು ಖಂಡಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿಗಳ ಮಹಾ ಒಕ್ಕೂಟದ ಸದಸ್ಯರು ನಗರದ ಸರ್ವಿಸ್‌ ಬಸ್‌ ನಿಲ್ದಾಣದ ಎದುರು ಶುಕ್ರವಾರ ಪ್ರತಿಭಟನೆ ನಡೆಸಿದರು.
ಜಿಲ್ಲೆಯ ಕರಾವಳಿ ನಿಯಂತ್ರಣ ವಲಯ ವ್ಯಾಪ್ತಿಯಲ್ಲಿ ಸಾಂಪ್ರದಾಯಿಕ ಮರಳು ಕಾರ್ಮಿಕರಲ್ಲದ ಖಾಸಗಿ ವ್ಯಕ್ತಿಗಳಿಗೆ ಮರಳುಗಾರಿಕೆ ನಡೆಸಲು ಅವಕಾಶ ಮಾಡಿಕೊಟ್ಟಿರುವ ಜಿಲ್ಲಾಧಿಕಾರಿಯ ಕ್ರಮವನ್ನು ಖಂಡಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿಗಳ ಮಹಾ ಒಕ್ಕೂಟದ ಸದಸ್ಯರು ನಗರದ ಸರ್ವಿಸ್‌ ಬಸ್‌ ನಿಲ್ದಾಣದ ಎದುರು ಶುಕ್ರವಾರ ಪ್ರತಿಭಟನೆ ನಡೆಸಿದರು.   

ಉಡುಪಿ: ಜಿಲ್ಲೆಯ ಕರಾವಳಿ ನಿಯಂತ್ರಣ ವಲಯ (ಸಿಆರ್‌ಝಡ್‌) ವ್ಯಾಪ್ತಿಯಲ್ಲಿ ಸಾಂಪ್ರದಾಯಿಕ ಮರಳು ಕಾರ್ಮಿಕ ರಲ್ಲದ ಖಾಸಗಿ ವ್ಯಕ್ತಿಗಳಿಗೆ ಮತ್ತು ದಲಿತರ ಹೆಸರಿನಲ್ಲಿ ಇನ್ನಿತರರಿಗೆ ಮರಳುಗಾರಿಕೆ ನಡೆಸಲು ಅವಕಾಶ ಮಾಡಿಕೊಟ್ಟಿರುವ ಉಡುಪಿ ಜಿಲ್ಲಾಧಿಕಾರಿಯ ಕ್ರಮವನ್ನು ಖಂಡಿಸಿ ಹಾಗೂ ಜಿಲ್ಲಾಧಿಕಾರಿಯನ್ನು ವರ್ಗಾವಣೆ ಮಾಡಬೇಕು ಎಂದು ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿಗಳ ಮಹಾ ಒಕ್ಕೂಟದ ಸದಸ್ಯರು ನಗರದ ಸರ್ವಿಸ್‌ ಬಸ್‌ ನಿಲ್ದಾಣದ ಎದುರು ಶುಕ್ರವಾರ ಪ್ರತಿಭಟನೆ ನಡೆಸಿದರು.

ಸಾಂಪ್ರದಾಯಿಕ ಮರಳುಗಾರಿಕೆ ಹೆಸರಿನಲ್ಲಿ ಸಾಕಷ್ಟು ಅವ್ಯವಹಾರ ನಡೆದಿದೆ. ಸಾಂಪ್ರದಾಯಿಕ ಮರಳು ದಿಣ್ಣೆ ತೆರವುಗೊಳಿಸುವ ಕಾರ್ಮಿಕರ ಹೆಸರಿ ನಲ್ಲಿ 186 ಪರವಾನಗಿ ನೀಡಲಾಗಿ ದ್ದರೂ, ಉತ್ತರ ಪ್ರದೇಶದ ಕೂಲಿ ಕಾರ್ಮಿಕರನ್ನು ನಿಯೋಜಿಸಿ ಮರಳನ್ನು ತೆಗೆದು ದುಬಾರಿ ಬೆಲೆಗೆ ಹೊರ ಜಿಲ್ಲೆ ಗಳಿಗೆ ಮಾರಾಟ ಮಾಡುತ್ತಿದ್ದಾರೆ. ಜಿಲ್ಲಾ ಧಿಕಾರಿಗಳ ಪಾತ್ರವಿಲ್ಲದೆ ಈ ಅಕ್ರಮ ನಡೆಯಲು ಸಾಧ್ಯವಿಲ್ಲ. ಹಾಗಾಗಿ ಇದರ ವಿರುದ್ಧ ಸೂಕ್ತ ತನಿಖೆ ನಡೆಸಿ ಸೂಕ್ತ ಕಾನೂನು ಕ್ರಮಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಜಿಲ್ಲಾ ಹೊಯಿಗೆ ದೋಣಿ ಕಾರ್ಮಿಕರ ಸಂಘಕ್ಕೆ ಕಾರ್ಮಿಕರನ್ನು ನೋಂದಣಿ ಮಾಡಿ ಪರವಾನಗಿ ನೀಡಲು ಜಿಲ್ಲಾಧಿಕಾರಿಗಳು ಶಿಫಾರಸು ಮಾಡುತ್ತಾರೆ. ಆದರೆ, ಸಂಘಕ್ಕೆ ಪರಿಶಿಷ್ಟ ಜಾತಿಯ ಕಾರ್ಮಿಕರನ್ನು ನೋಂದಣಿ ಮಾಡಿ ಪರವಾನಗಿ ನೀಡಲು ಪಟ್ಟಿ ನೀಡಿದಾಗ ಅದನ್ನು ನಿರಾಕರಿಸಿದ್ದಾರೆ. ಅಲ್ಲದೆ, ಸಾಂಪ್ರದಾಯಿಕ ಮರಳು ತೆಗೆಯುವ ಪರವಾನಗಿ ವಿತರಣೆ ಮಾಡುವಲ್ಲಿ ಬಹಳಷ್ಟು ಹಗರಣ ನಡೆದಿದೆ. ಸ್ವಂತಃ ಜಿಲ್ಲಾಧಿಕಾರಿಯವರೇ ಜಿಲ್ಲೆಯ ಮರಳುಗಾರಿಕೆ ಕಮಿಟಿಯ ಅಧ್ಯಕ್ಷರಾಗಿದ್ದರೂ ಕೂಡ ಯಾವುದೇ ಕ್ರಮ ಕೈಗೊಂಡಿಲ್ಲ. ಆದ್ದರಿಂದ ಅವರು ಈ ಹಗರಣದಲ್ಲಿ ಭಾಗಿಯಾಗಿರುವುದು ಮೇಲ್ನೋಟಕ್ಕೆ ಸಾಬೀತಾಗುತ್ತದೆ ಎಂದು ಆರೋಪಿಸಿದರು. ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮಾವಾದ)ಯ ರಾಜ್ಯ ಸಮಿತಿ ಸದಸ್ಯ ಉದಯಕುಮಾರ್‌ ತಲ್ಲೂರು, ವಿಶ್ವನಾಥ ಪೇತ್ರಿ, ರಮೇಶ್‌ ಕೆಳಾರ್ಕಳಬೆಟ್ಟು, ಶೇಖರ್‌ ಹೆಜಮಾಡಿ, ಪ್ರಶಾಂತ್‌ ತೊಟ್ಟಂ ಇದ್ದರು.

ಡಿ.ಸಿ.ಯ ವರ್ಗಾವಣೆ ಬೇಡ
ಉಡುಪಿ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಡಾ.ಆರ್‌. ವಿಶಾಲ್‌ ಅವರು ಪ್ರಾಮಾಣಿಕ ಅಧಿಕಾರಿಯಾಗಿದ್ದಾರೆ. ಅವರು ಜಿಲ್ಲೆಗೆ ಜಿಲ್ಲಾಧಿಕಾರಿಯಾಗಿ ಬಂದ ಮೇಲೆ ದಲಿತ ಸಮುದಾಯಗಳ ಅಭಿವೃದ್ಧಿ ಕೆಲಸಗಳನ್ನು ಅತ್ಯಂತ ಮುತುವರ್ಜಿಯಿಂದ ನಿರ್ವಹಿಸಿ, ಶೋಷಿತ ಸಮುದಾಯಗಳ ಶ್ರೇಯೊಭಿವೃದ್ಧಿಗೆ ಕಾರಣರಾಗಿದ್ದಾರೆ.

ಹಾಗಾಗಿ ಅವರನ್ನು ಯಾವುದೇ ಕಾರಣಕ್ಕೂ ವರ್ಗಾವಣೆ ಮಾಡಬಾರದು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಮಂಜುನಾಥ ಗಿಳಿಯಾರು ಒತ್ತಾಯಿಸಿದರು.

ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕರಾವಳಿ ನಿಯಂತ್ರಣ ವಲಯ (ಸಿಆರ್‌ಝಡ್‌) ವ್ಯಾಪ್ತಿಯ ಮರಳುಗಾರಿಕೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ಕಾನೂನು ಬದ್ಧ ಅವಕಾಶ ನೀಡಬೇಕು. ಜಿಲ್ಲೆಯಲ್ಲಿ ಈಗಾಗಲೇ 12 ಮಂದಿ ಪರಿಶಿಷ್ಟ ಜಾತಿ ಮತ್ತು ಪಂಗಡ ದವರಿಗೆ ಮರಳುಗಾರಿಕೆ ಪರವಾನಗಿ ನೀಡಲಾಗಿದೆ. ಅದರಲ್ಲಿ ಶೇ 50ರಷ್ಟು ಮಂದಿ ಸ್ವಂತ ಬಲದಲ್ಲಿ ಮರಳು ಗಾರಿಕೆ ಮಾಡಿದರೆ, ಉಳಿದ ಶೇ 50ರಷ್ಟು ಮಂದಿ ಇತರ ಸಹಕಾರ ದಿಂದ ಮರಳುಗಾರಿಕೆ ಮಾಡುತ್ತಿ ದ್ದಾರೆ ಎಂದು ಶುಕ್ರವಾರ ಪತ್ರಿಕಾ ಗೋಷ್ಠಿಯಲ್ಲಿ ತಿಳಿಸಿದರು. ರಾಜು ಬೆಟ್ಟಿನಮನೆ, ಉತ್ತೇಶ್‌ ಹೊಸಾಳ, ಚಂದ್ರ ಹಳಗೇರಿ, ವಾಸುದೇವ ಮುದ್ದೂರು ಇದ್ದರು.

 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT