ADVERTISEMENT

ದೂರದೃಷ್ಟಿಯ ನಾಯಕ ರಾಜೀವ್ ಗಾಂಧಿ

​ಪ್ರಜಾವಾಣಿ ವಾರ್ತೆ
Published 24 ಮೇ 2017, 8:28 IST
Last Updated 24 ಮೇ 2017, 8:28 IST

ಉಡುಪಿ: ‘ತಂತ್ರಜ್ಞಾನ ಕ್ರಾಂತಿಯ ಮೂಲಕ ದೇಶವನ್ನು ಎತ್ತರಕ್ಕೇರಿಸಿದ ಕೀರ್ತಿ ಮಾಜಿ ಪ್ರಧಾನಿ ದಿ. ರಾಜೀವ್ ಗಾಂಧಿ ಅವರಿಗೆ ಸಲ್ಲುತ್ತದೆ’ ಎಂದು ಜಿಲ್ಲಾ ಮಹಿಳಾ ಕಾಂಗ್ರೆಸ್ ಉಪಾಧ್ಯಕ್ಷೆ ಜ್ಯೋತಿ ಹೆಬ್ಬಾರ್ ಹೇಳಿದರು.

ನಗರದ ಬ್ರಹ್ಮಗಿರಿಯಲ್ಲಿರುವ ಕಾಂಗ್ರೆಸ್‌ ಭವನದಲ್ಲಿ ಮಂಗಳವಾರ ನಡೆದ ರಾಜೀವ್ ಗಾಂಧಿ ಅವರ 26ನೇ ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ದೂರ ದೃಷ್ಟಿ ಹೊಂದಿದ್ದ ಅವರು ಯುವ ಜನರ ಬಗ್ಗೆ ಅಪಾರ ಕಾಳಜಿ ಹೊಂದಿದ್ದರು.

ಸಂವಿಧಾನಕ್ಕೆ 73ನೇ ತಿದ್ದುಪಡಿ ತರುವ ಮೂಲಕ ಪಂಚಾಯತ್ ರಾಜ್ ವ್ಯವಸ್ಥೆಯನ್ನು ದೇಶದಾದ್ಯಂತ ಜಾರಿಗೆ ತಂದರು. ನಗರ ಪಂಚಾಯಿತಿಗಳಲ್ಲಿ ಮಹಿಳೆಯರಿಗೆ ಶೇ50ರಷ್ಟು ಮೀಸಲಾತಿ ಸಿಗಲು ಸಹ ಅವರೇ ಕಾರಣ. ಅದರ ಪರಿಣಾಮ ಮಹಿಳೆಯರಿಗೆ ಹೆಚ್ಚಿನ ಅವಕಾಶ ಲಭಿಸಿ ಅವರು ನಾಯಕತ್ವ ಬೆಳೆಸಿಕೊಳ್ಳಲು ಇದರಿಂದ ಸಹಾಯವಾಯಿತು ಎಂದು ಅವರು ಹೇಳಿದರು.

ADVERTISEMENT

ಅಜ್ಜರಕಾಡಿನಲ್ಲಿರುವ ಜಿಲ್ಲಾ ಆಸ್ಪತ್ರೆಗೆ ತೆರಳಿದ ಪದಾಧಿಕಾರಿಗಳು ರೋಗಿಗಳಿಗೆ ಹಣ್ಣು ವಿತರಿಸಿದರು. ಜಿಲ್ಲಾ ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆ ವೆಕೋನಿಕ ಕರ್ನೇಲಿಯೊ, ಬ್ಲಾಕ್ ಅಧ್ಯಕ್ಷೆ ಚಂದ್ರಿಕಾ ಶೆಟ್ಟಿ, ಕಾರ್ಯದರ್ಶಿಗಳಾದ ರಮಾ ದೇವಿ, ಪದ್ಮಾವತಿ ಟೀಚರ್, ಅಮ್ಮಣ್ಣಿ , ರಾಜೀವ್ ಗಾಂಧಿ ಪಂಚಾಯತ್‌ರಾಜ್ ಸಂಘಟನೆಯ ಜಿಲ್ಲಾ ಸಂಚಾಲಕಿ ರೋಶನಿ ಒಲಿವೇರ, ಮೇರಿ ಡಿಸೋಜ, ಜ್ಯೋತಿ ಮೆನನ್, ಡಾ. ಸುನಿತಾ ಶೆಟ್ಟಿ, ಕುಂದಾಪುರ ಯುವ ಕಾಂಗ್ರೆಸ್ ಕಾರ್ಯದರ್ಶಿ ವೈ.ವಿ. ರಾಘವೇಂದ್ರ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.