ADVERTISEMENT

ನಂಚಾರು: ನ್ಯಾಯಬೆಲೆ ಅಂಗಡಿ ಉದ್ಘಾಟನೆ

​ಪ್ರಜಾವಾಣಿ ವಾರ್ತೆ
Published 21 ಮೇ 2017, 8:55 IST
Last Updated 21 ಮೇ 2017, 8:55 IST

ಕೊಕ್ಕರ್ಣೆ(ಬ್ರಹ್ಮಾವರ) : ಗ್ರಾಮೀಣ ಪ್ರದೇಶಗಳಾದ ನಾಲ್ಕೂರು, ಕಳ್ತೂರು, ಮುದ್ದೂರು ಗ್ರಾಮಗಳಲ್ಲಿರುವ ಕುಡಿಯುವ ನೀರಿನ ಸಮಸ್ಯೆಯನ್ನು ಪರಿಹರಿಸಲು ಶೀಘ್ರವೇ ಬಹುಗ್ರಾಮ ಯೋಜನೆಗೆ ಚಾಲನೆ ನೀಡಲಾಗುವುದು ಎಂದು ಸಚಿವ ಪ್ರಮೋದ ಮಧ್ವರಾಜ್ ಹೇಳಿದರು.

ನಂಚಾರು ಗ್ರಾಮ ಪಂಚಾಯಿತಿ ಸಭಾಭವನದಲ್ಲಿ ಶನಿವಾರ ಕೊಕ್ಕರ್ಣೆ ಸಿಂಡಿಕೇಟ್‌ ರೈತರ ಸೇವಾ ಸಹಕಾರಿ ಸಂಘದ 10ನೇ ನ್ಯಾಯಬೆಲೆ ಅಂಗಡಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ನಂಚಾರು ಮುದ್ದೂರು ರಸ್ತೆ ಸಂಪೂರ್ಣವಾಗಿ ಹದಗೆಟ್ಟಿದ್ದು ಅದನ್ನು ಕೂಡಲೇ ದುರಸ್ತಿ ಮಾಡಲು ಕ್ರಮ ತೆಗೆದುಕೊಳ್ಳಲಾಗುವುದು. ಜಿಲ್ಲೆಯಲ್ಲಿ 25 ಸಾವಿರ ಬಡ ಕುಟುಂಬಗಳಿಗೆ ಬಿಪಿಎಲ್ ಕಾರ್ಡ್‌ ಗಳನ್ನು ನೀಡಲಾಗಿದೆ. ₹800ಕ್ಕಿಂತ ಕಡಿಮೆ ವಿದ್ಯುತ್‌ ಬಿಲ್‌ ಪಾವತಿಸುವವರು ಇನ್ನು ಮುಂದೆ ಬಿಪಿಎಲ್ ಕಾರ್ಡ್‌ಗೆ ಅರ್ಜಿ ಸಲ್ಲಿಸಬಹುದು ಎಂದು ಅವರು ಹೇಳಿದರು. ಸಂಘದ ಅಧ್ಯಕ್ಷ ಬಿ.ಅಶೋಕ್ ಕುಮಾರ್ ಶೆಟ್ಟಿ ಮೈರ್ಮಾಡಿ ಅಧ್ಯಕ್ಷತೆ ವಹಿಸಿದ್ದರು.

ADVERTISEMENT

ವಿಧಾನಪರಿಷತ್ ಸದಸ್ಯ ಪ್ರತಾಪ್‌ಚಂದ್ರ ಶೆಟ್ಟಿ, ಜಿಲ್ಲಾ ಪಂಚಾಯಿತಿ ಸದಸ್ಯ ಪ್ರತಾಪ್ ಹೆಗ್ಡೆ, ತಾಲ್ಲೂಕು ಪಂಚಾಯಿತಿ ಸದಸ್ಯೆ ಡಾ.ಸುನೀತಾ ಶೆಟ್ಟಿ, ಆಡಳಿತ ಮಂಡಳಿಯ ಸದಸ್ಯರಾದ ಮನೋಜ್ ಶೆಟ್ಟಿ, ಹೇಮಾವತಿ ಶೆಟ್ಟಿ, ಸಂಘದ ಆಡಳಿತ ನಿರ್ದೇಶಕ ಕೆ.ಆನಂದ ನಾಯ್ಕ, ಉಪಾಧ್ಯಕ್ಷ ಪಿ.ಕೃಷ್ಣಮೂರ್ತಿ ಅಡಿಗ ಉಪಸ್ಥಿತರಿದ್ದರು.ಮನೋಜ್ ಶೆಟ್ಟಿ ಸ್ವಾಗತಿಸಿದರು. ಅಧ್ಯಾಪಕ ಪ್ರಶಾಂತ್ ಶೆಟ್ಟಿ ಹಾವಂಜೆ ಕಾರ್ಯಕ್ರಮ ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.