ADVERTISEMENT

‘ನೋಟು ರದ್ದತಿಯಿಂದ ಕಾರ್ಮಿಕರು ಅತಂತ್ರ’

ಜಿಲ್ಲಾ ಕಟ್ಟಡ ನಿರ್ಮಾಣ ಕಾರ್ಮಿಕರ ಸಂಘದ ವಾರ್ಷಿಕ ಮಹಾಸಭೆ

​ಪ್ರಜಾವಾಣಿ ವಾರ್ತೆ
Published 27 ಮಾರ್ಚ್ 2017, 6:12 IST
Last Updated 27 ಮಾರ್ಚ್ 2017, 6:12 IST
ಉಡುಪಿ: ಕೇಂದ್ರ ಸರ್ಕಾರ ನೋಟು ರದ್ದು ಮಾಡಿದ ಪರಿಣಾಮ ದೇಶದಾ ದ್ಯಂತ ಒಟ್ಟು 35 ಲಕ್ಷ ಕಟ್ಟಡ ಕಾರ್ಮಿ ಕರು ಕೆಲಸವಿಲ್ಲದೆ ಅತಂತ್ರರಾಗಿದ್ದಾರೆ ಎಂದು ಸಿಐಟಿಯು ರಾಜ್ಯ ಸಮಿತಿ ಕಾರ್ಯದರ್ಶಿ ಕೆ. ಮಹಾಂತೇಶ್‌ ಹೇಳಿದರು. 
 
ಉಡುಪಿಯಲ್ಲಿ ಭಾನುವಾರ ನಡೆದ ಉಡುಪಿ ಜಿಲ್ಲಾ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರ ಸಂಘ (ಸಿಐಟಿಯು) ದ ವಾರ್ಷಿಕ ಮಹಾಸಭೆಯಲ್ಲಿ ಮಾತನಾಡಿದರು. 
2013ರಿಂದ ಈಚೆಗೆ ಸುಮಾರು 195 ಮಂದಿ ಕಟ್ಟಡ ಕಾರ್ಮಿಕರು ವಿವಿಧ ಅವಘಡಗಳಿಂದ ಸಾವನ್ನಪ್ಪಿದ್ದಾರೆ. ದೇಶದಲ್ಲಿ 3 ಕೋಟಿಗೂ ಹೆಚ್ಚಿನ ಕಟ್ಟಡ ಕಾರ್ಮಿಕರಿದ್ದು, ಅವರಿಗೆ ಯಾವುದೇ ರೀತಿಯ ಸೂಕ್ತ ಭದ್ರತೆ ಇಲ್ಲದಂತಾಗಿದೆ ಎಂದರು. 
 
ಸಿಐಟಿಯು ಕಾರ್ಮಿಕರ ಆರ್ಥಿಕ ಹಾಗೂ ಸಾಮಾಜಿಕ ಭದ್ರತೆಗಾಗಿ ನಿರಂತರ ಹೋರಾಟ ನಡೆಸುತ್ತಿದೆ. ಆದರೆ, ಸರ್ಕಾರ ಮಾತ್ರ ಹೋರಾಟಕ್ಕೆ ಯಾವುದೇ ಸ್ಪಂದನೆ ನೀಡುತ್ತಿಲ್ಲ. ಕಟ್ಟಡ ಕಾನೂನು ಸೆಸ್‌ ತೆರಿಗೆಯನ್ವಯ ಒಟ್ಟು ₹5,400 ಕೋಟಿ ಹಣ ಸಂಗ್ರಹವಾಗಿದ್ದು, ಅದರಲ್ಲಿ ಕಟ್ಟಡ ಕಾರ್ಮಿಕರ ಕಲ್ಯಾಣಾಭಿವೃದ್ಧಿಗಾಗಿ ಕೇವಲ ₹33 ಕೋಟಿ ಮಾತ್ರ ವಿನಿಯೋಗವಾಗಿದೆ. ಉಳಿದ ಹಣವನ್ನು ಸಮರ್ಪಕವಾಗಿ ಬಳಕೆ ಮಾಡಲಾಗುತ್ತಿಲ್ಲ ಎಂದು ದೂರಿದರು. 
 
ಈ ಸಂದರ್ಭದಲ್ಲಿ ಉಡುಪಿಯ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣ ಬಳಿಯ ಕೃಷ್ಣ ಕೃಪಾ ಕಟ್ಟಡದಲ್ಲಿ ಆರಂಭಿಸಲಾದ ಜಿಲ್ಲಾ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರ ಸಂಘ (ಸಿಐಟಿಯು)ದ ನೂತನ ಕಚೇರಿಯನ್ನು ತಾಲ್ಲೂಕು ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರ ಸಂಘದ ಸ್ಥಾಪಕಾಧ್ಯಕ್ಷ ರಾಮ ಪೂಜಾರಿ ಉದ್ಘಾಟಿಸಿದರು.  
 
ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯ ದರ್ಶಿ ಕೆ. ಶಂಕರ್‌, ಮುಖಂಡರಾದ ಸುರೇಶ್‌ ಕಲ್ಲಗಾರ್‌, ವೆಂಕಟೇಶ್‌ ಕೋಣಿ, ಉಮೇಶ್‌ ಕುಂದರ್‌, ಜಗ ದೀಶ್‌ ಆಚಾರ್ಯ ಉಪಸ್ಥಿತರಿದ್ದರು. ಸಿಐ ಟಿಯು ಉಪಾಧ್ಯಕ್ಷ ಬಾಲಕೃಷ್ಣ ಶೆಟ್ಟಿ ಸ್ವಾಗ ತಿಸಿದರು, ಶೇಖರ ಬಂಗೇರ ನಿರೂಪಿಸಿದರು.   

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.