ADVERTISEMENT

‘ಪಾಳು ಕಲ್ಲುಕ್ವಾರಿಗಳಿಗೆ ತಡೆಬೇಲಿ ಹಾಕಿ’

ಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿ.ಪಂ. ಅಧ್ಯಕ್ಷರ ಸೂಚನೆ

​ಪ್ರಜಾವಾಣಿ ವಾರ್ತೆ
Published 12 ಜನವರಿ 2017, 9:52 IST
Last Updated 12 ಜನವರಿ 2017, 9:52 IST
ಮಂಗಳೂರು: ಜಿಲ್ಲೆಯಲ್ಲಿ ಪಾಳು ಬಿದ್ದಿರುವ ಕಲ್ಲು ಕ್ವಾರಿಗಳು ಅಪಾಯ ಕಾರಿಯಾಗಿ ಪರಿಣಮಿಸುತ್ತಿದ್ದು, ಕೂಡಲೇ ಇವುಗಳಿಗೆ ತಡೆಗೋಡೆ ಅಥವಾ ಬೇಲಿ ಹಾಕಲು ಕ್ರಮ ಕೈಗೊಳ್ಳು ವಂತೆ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಸೂಚಿಸಿದರು. 
 
ಬುಧವಾರ ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಮಾಸಿಕ ಪ್ರಗತಿ ಪರಿಶೀಲನಾ ಸಭೆ(ಕೆಡಿಪಿ) ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. 
 
ಪಾಳು ಬಿದ್ದಿರುವ ಕಲ್ಲು ಕ್ವಾರಿಗಳಿಗೆ ಬಿದ್ದು ಸಾವನ್ನಪ್ಪಿರುವ ಹಲವಾರು ಪ್ರಕರಣಗಳು ನಡೆಯುತ್ತಿವೆ. ಕೋರೆ ಕೆಲಸ ಮುಗಿದ ನಂತರ ಯಾವುದೇ ರಕ್ಷಣಾ ತಡೆಗಳನ್ನು ನಿರ್ಮಿಸದೆ ಹಾಗೆಯೇ ಬಿಡುತ್ತಿರುವುದರಿಂದ ಸಾರ್ವ ಜನಿಕರಿಗೆ ಅಪಾಯಕಾರಿ ಯಾಗಿದೆ. ಈ ನಿಟ್ಟಿನಲ್ಲಿ ಗಣಿ ಮತ್ತು ಭೂವಿಜ್ಞಾನ ಇಲಾಖೆಯು ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದರು. 
 
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಎಂ.ಆರ್. ರವಿ ಮಾತನಾಡಿ, ಜಿಲ್ಲೆಯ ಲ್ಲಿರುವ ಕ್ವಾರಿಗಳು ಹಾಗೂ ಪಾಳು ಬಿದ್ದಿರುವ ಕ್ವಾರಿಗಳ ಸಂಪೂರ್ಣ ವಿವರ ಗಳನ್ನು ಮುಂದಿನ ಸಭೆಗೆ ನೀಡುವಂತೆ ಸೂಚಿಸಿದರು. 
 
ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಕೊಳವೆಬಾವಿಗೆ ಪಂಪ್ ಇಳಿಸಲು ವಿಳಂಬ ಮಾಡುತ್ತಿರುವ ಬಗ್ಗೆ ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷ ಸರ್ವೋತ್ತಮ ಗೌಡ ಸಭೆಯಲ್ಲಿ ಪ್ರಸ್ತಾಪಿಸಿದರು. 
 
ಈಗಾಗಲೇ ಕೊರೆದಿರುವ  ಕೊಳವೆ ಬಾವಿಗಳಿಗೆ ಮುಂದಿನ ಕೆಡಿಪಿ ಸಭೆ ಯೊಳಗೆ ಪಂಪ್‌ಸೆಟ್‌ ಅಳವಡಿಸಿ, ಅವು ಕಾರ್ಯ ಆರಂಭಿಸುವಂತೆ ನೋಡಿಕೊಳ್ಳ ಬೇಕು ಎಂದು ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ತಾಕೀತು ಮಾಡಿದರು. 
 
ಜಿಲ್ಲೆಯ ಕೆಲವು ಶಾಲೆಗಳಲ್ಲಿ ಕುಡಿ ಯುವ ನೀರಿನ ಸಮಸ್ಯೆ ತಲೆದೋರಿದ್ದು, ಶಾಲೆಗಳ ಕುಡಿಯುವ ನೀರಿನ ಕಾಮ ಗಾರಿಗಳನ್ನು ಆದ್ಯತೆಯಲ್ಲಿ ಪೂರ್ತಿಗೊಳಿ ಸಬೇಕು ಎಂದು ಹೇಳಿದರು. 
 
ಉಪಾಧ್ಯಕ್ಷೆ ಕಸ್ತೂರಿ ಪಂಜ ಮಾತನಾಡಿ, ವಸತಿ ಯೋಜನೆಗಳಲ್ಲಿ ಫಲಾನುಭವಿಗಳಿಗೆ ನಿವೇಶನ ಒದಗಿಸಲು ಜಿಲ್ಲೆಯ ಹಲವೆಡೆ ಭೂ ದಾಖಲೆಗಳ ಮತ್ತು ಸಮರ್ಪಕ ಸರ್ವೇ ನಡೆಸದೆ ವಿಳಂಬವಾಗುತ್ತಿದ್ದು, ಈ ನಿಟ್ಟಿನಲ್ಲಿ ವಸತಿ ಯೋಜನೆಗಳ ನಿವೇಶನಗಳಿಗೆ ಆದ್ಯತೆಯಲ್ಲಿ ಸರ್ವೇ ಕಾರ್ಯ ನಡೆಸುವಂತೆ ತಿಳಿಸಿದರು.
 
ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಶಾಹುಲ್ ಹಮೀದ್ ಮಾತನಾಡಿ, ಜಿಲ್ಲೆಯ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಕಡ್ಡಾಯವಾಗಿ ವಾರ್ಷಿ ಕೋತ್ಸವ ನಡೆಸುವಂತೆ ಕ್ರಮ ಕೈಗೊಳ್ಳ ಬೇಕು ಎಂದು ತಿಳಿಸಿದರು. ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷೆ ಆಶಾ ತಿಮ್ಮಪ್ಪಗೌಡ, ವಿವಿಧ ಇಲಾಖೆ ಅಧಿಕಾರಿಗಳು ಭಾಗವಹಿಸಿದ್ದರು.
 
***
ಪಾಳು ಬಿದ್ದಿರುವ ಕ್ವಾರಿಗಳ ಮಾಲೀಕರನ್ನು ಹುಡುಕಿ, ಅವರಿಂದಲೇ ಕ್ವಾರಿಗೆ ತಡೆಗೋಡೆ ಅಥವಾ ಬೇಲಿ ಹಾಕಿಸಲು ಗಣಿ ಇಲಾಖೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. 
-ಡಾ. ಎಂ.ಆರ್‌. ರವಿ,
ಜಿ.ಪಂ. ಸಿಇಒ

 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.