ADVERTISEMENT

ಪ್ರತಿ ಮನೆಗೆ ಅಭಿವೃದ್ಧಿ ಕಾಮಗಾರಿ ಮಾಹಿತಿ

ಜನಸಂಪರ್ಕ ಸಭೆ: ಸಚಿವ ಪ್ರಮೋದ್ ಮಧ್ವರಾಜ್‌

​ಪ್ರಜಾವಾಣಿ ವಾರ್ತೆ
Published 22 ಮೇ 2017, 5:45 IST
Last Updated 22 ಮೇ 2017, 5:45 IST

ಬ್ರಹ್ಮಾವರ: ‘ ಆಯಾ ಗ್ರಾಮದ ಪ್ರತಿ ಮನೆಗೂ 4 ವರ್ಷಗಳಲ್ಲಿ ಅಲ್ಲಿ ನಡೆದ ಅಭಿವೃದ್ಧಿ ಕಾಮಗಾರಿಗಳ ಪಟ್ಟಿಯನ್ನು ನೀಡಲಾಗುತ್ತದೆ. ಇದರಿಂದ  ಭ್ರಷ್ಟಾಚಾರಕ್ಕೆ ಕಡಿವಾಣ ಬೀಳಲಿದೆ’ ಎಂದು ಸಚಿವ ಪ್ರಮೋದ್ ಮಧ್ವರಾಜ್ ಹೇಳಿದರು. ಬ್ರಹ್ಮಾವರದಲ್ಲಿ ಈಚೆಗೆ ನಡೆದ ವಾರಂಬಳ್ಳಿ ಗ್ರಾಮ ಮಟ್ಟದ ಜನಸಂಪರ್ಕ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ರಾಜ್ಯದಲ್ಲೇ ವಿನೂತನವಾದ ಗ್ರಾಮಮಟ್ಟದ ಜನಸಂಪರ್ಕ ಸಭೆ ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ ನಡೆಯುತ್ತಿದೆ. ನಗರ ಸಭೆಯ 35 ವಾರ್ಡ್ ಹಾಗೂ ಗ್ರಾಮಾಂತರದ 30 ಗ್ರಾಮಗಳಲ್ಲಿ ಜನಸಂಪರ್ಕ ಸಭೆ ಪೂರ್ಣಗೊಂಡಿದೆ’ ಎಂದರು.

ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿ, ಸದಸ್ಯ ಮೈರ್ಮಾಡಿ ಸುಧಾಕರ ಶೆಟ್ಟಿ, ತಾಲ್ಲೂಕು ಪಂಚಾಯಿತಿ ಸದಸ್ಯ ಸುಧೀರ್ ಕುಮಾರ್ ಶೆಟ್ಟಿ, ಮಾಜಿ ಅಧ್ಯಕ್ಷ ನಿತ್ಯಾನಂದ ಶೆಟ್ಟಿ ಹಾರಾಡಿ, ವಿಶೇಷ ತಹಶೀಲ್ದಾರ್ ಪ್ರದೀಪ್ ಕುರ್ಡೇಕರ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಶೇಷಪ್ಪ, ಸತೀಶ್ ಅಮೀನ್ ಪಡುಕರೆ, ಕೆಡಿಪಿ ಸದಸ್ಯ ಉಮೇಶ್ ನಾಯ್ಕ, ವಾರಂಬಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ನವೀನ್‌ಚಂದ್ರ ನಾಯಕ್‌ ಇದ್ದರು.

ಪಂಚಾಯಿತಿ ಮಾಜಿ ಅಧ್ಯಕ್ಷ ಬಿರ್ತಿ ರಾಜೇಶ್ ಶೆಟ್ಟಿ ಸ್ವಾಗತಿಸಿದರು. ನಿತ್ಯಾನಂದ ಬಿ.ಆರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಅಧ್ಯಾಪಕ ಸತೀಶ್ಚಂದ್ರ ಶೆಟ್ಟಿ ಚಿತ್ರಪಾಡಿ ಕಾರ್ಯಕ್ರಮ ನಿರೂಪಿಸಿದರು.

*
ಸರ್ಕಾರ ಆಡಳಿತಕ್ಕೆ ಬಂದ ನಂತರ ಬಿಪಿಎಲ್ ಕಾರ್ಡ್ ಹಂಚಿಕೆ, ಹೈನುಗಾರರಿಗೆ ಪ್ರೋತ್ಸಾಹ, ಉಚಿತ ವಿದ್ಯುತ್ ಸಂಪರ್ಕಎಲ್ಲಾ ವರ್ಗದ ಜನರಿಗೂ ಯೋಜನೆಗಳನ್ನು ಕಲ್ಪಿಸಲಾಗಿದೆ.
–ಪ್ರಮೋದ್ ಮಧ್ವರಾಜ್, ಸಚಿವ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT