ADVERTISEMENT

‘ಬೆಂಕಿ ಪ್ರಕರಣ: ನಷ್ಟಕ್ಕೂ ಪರಿಹಾರ ನೀಡಿ’

​ಪ್ರಜಾವಾಣಿ ವಾರ್ತೆ
Published 2 ಮಾರ್ಚ್ 2017, 6:14 IST
Last Updated 2 ಮಾರ್ಚ್ 2017, 6:14 IST

ಉಡುಪಿ: ನಂದಿಕೂರಿನಲ್ಲಿ ಹೈಟೆನ್ಷನ್‌ ವಯರ್‌ನಲ್ಲಿ ಶಾರ್ಟ್‌ ಸರ್ಕಿಟ್‌ ಸಂಭವಿಸಿ ಬೆಂಕಿ ಬಿದ್ದು ಬೆಳೆ ನಾಶವಾಗಿರುವ ಬಗ್ಗೆ ಮಾಹಿತಿ ಬಂದಿದೆ, ನಷ್ಟ ಆಗಿರುವವರಿಗೆ ಪರಿಹಾರ ನೀಡುವ ಬಗ್ಗೆ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಚರ್ಚಿಲಾಗುವುದು. ಈ ಪ್ರಕರಣದಲ್ಲಿ ಅಧಿಕಾರಿಗಳ ನಿರ್ಲಕ್ಷ್ಯ ಕಂಡು ಬಂದರೆ ಕ್ರಮ ಕೈಗೊಳ್ಳಲಾಗುವುದು ಎಂದು ಕ್ರೀಡಾ ಮತ್ತು ಯುವ ಸಬಲೀಕರಣ ಸಚಿವ ಪ್ರಮೋದ್ ಮಧ್ವರಾಜ್ ಹೇಳಿದರು.

ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಅವರು ಪ್ರತಿಕ್ರಿಯೆ ನೀಡಿದರು. ಇದೇ ವಿಷಯ ಕುರಿತು ಉಡುಪಿ ತಾಲ್ಲೂಕು ಪಂಚಾಯಿತಿ ಕೆಡಿಪಿ ಸಭೆಯಲ್ಲಿ ಶಾಸಕ ವಿನಯ್ ಕುಮಾರ್ ಸೊರಕೆ ಮಾತನಾ ಡಿದರು.

ತುಕ್ಕು ಹಿಡಿದ ವಯರ್ ತುಂಡರಿಸಿ ಬಿದ್ದ ಪರಿಣಾಮ ಬೆಂಕಿ ಹೊತ್ತಿಕೊಂಡಿದೆ ಎಂದು ಮಾಧ್ಯಮಗಳಲ್ಲಿ ವರದಿಯಾ ಗಿದೆ. ಈ ಬಗ್ಗೆ ಸರಿಯಾದ ಕ್ರಮ ಕೈಗೊಳ್ಳಿ, ವಯರ್‌ನಲ್ಲಿ ಹಾಗೂ ಜೋಡ ಣೆಯಲ್ಲಿ ಲೋಪ ಇದ್ದರೆ ಸರಿಪಡಿಸಿ. ಸುಮಾರು 50 ಎಕರೆ ಭೂಮಿಯಲ್ಲಿ ಬೆಳೆ ದಿದ್ದ ಬೆಳೆ ಸುಟ್ಟು ಹೋಗಿದ್ದು ಅವರಿಗೆ ಪರಿಹಾರ ನೀಡಲು ಕ್ರಮ ಕೈಗೊಳ್ಳಿ. ತೆಂಗಿನ ಮತ್ತು ಅಡಿಕೆ ಮರಗಳು ಸುಟ್ಟಿರುವುದರಿಂದ ಅದಕ್ಕೂ ಪರಿಹಾರ ನೀಡಿ ಎಂದು ಸೂಚಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಮೆಸ್ಕಾಂ ಅಧಿಕಾರಿಗಳು, ಇದು ವಿದ್ಯುತ್ ಪ್ರಸರಣ ನಿಗಮಕ್ಕೆ ಸಂಬಂಧಿಸಿದ ವಿಷಯ ಎಂದರು. ಉಡುಪಿ ಉಷ್ಣ ವಿದ್ಯುತ್ ಸ್ಥಾವರದಿಂದ ಶಾಂತಿ ಗ್ರಾಮದಲ್ಲಿರುವ ವಿತರಣಾ ಸ್ಥಾವರಕ್ಕೆ ವಿದ್ಯುತ್ ಪೂರೈಕೆ ಮಾಡಲು ನಿರ್ಮಿಸಿರುವ ಹೈಟೆನ್ಷನ್ ಮಾರ್ಗ ಇದಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.