ADVERTISEMENT

ಮಕ್ಕಳ ಸಂರಕ್ಷಣೆ ಎಲ್ಲರ ಹೊಣೆ: ಸಚಿವ

​ಪ್ರಜಾವಾಣಿ ವಾರ್ತೆ
Published 2 ಜುಲೈ 2017, 8:45 IST
Last Updated 2 ಜುಲೈ 2017, 8:45 IST

ಉಡುಪಿ: ‘ಕಾನೂನುಬಾಹಿರ ಚಟುವಟಿಕೆಯಲ್ಲಿ ಮಕ್ಕಳು ತೊಡಗಿಕೊಳ್ಳುವುದನ್ನು ತಡೆಯುವುದು ಪ್ರತಿಯೊಬ್ಬರ ಜವಾಬ್ದಾರಿ’ ಎಂದು ಕ್ರೀಡೆ ಮತ್ತು ಯುವ ಸಬಲೀಕರಣ ಸಚಿವ ಪ್ರಮೋದ್‌ ಮದ್ವರಾಜ್ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನಗರದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ  ಸರ್ಕಾರಿ ವೀಕ್ಷಣಾಲಯ ಮತ್ತು ಬಾಲ ನ್ಯಾಯ ಮಂಡಳಿಯ ನೂತನ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದರು.

‘ಉತ್ತಮ ಗುಣ ನಡತೆಯ ಮಕ್ಕಳು ದೇಶದ ಭವಿಷ್ಯ ಹಾಗೂ ಆಸ್ತಿ. ಅವರು ಕ್ರಿಮಿನಲ್ ಚಟುವಟಿಕೆಗಳಲ್ಲಿ ತೊಡಗಿಕೊಳ್ಳದಂತೆ ಪೋಷಕರು ಎಚ್ಚರ ವಹಿಸಬೇಕು. ಇಂಟರ್‌ನೆಟ್ ಮತ್ತು ಸಾಮಾಜಿಕ ಮಾಧ್ಯಮಗಳನ್ನು ಮಿತಿ ಮೀರಿ ಬಳಸದಂತೆ ನೋಡಿಕೊಳ್ಳಬೇಕು’ ಎಂದರು.

ADVERTISEMENT

ಉಡುಪಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ದಿನಕರ ಬಾಬು, ಉಪಾಧ್ಯಕ್ಷೆ ಶೀಲಾ ಶೆಟ್ಟಿ, ಸದಸ್ಯರಾದ ಗೀತಾಂಜಲಿ ಸುವರ್ಣ, ಶಿಲ್ಪಾ ಸುವರ್ಣ, ನಗರಸಭೆಯ ಅಧ್ಯಕ್ಷೆ ಮೀನಾಕ್ಷಿ ಮಾಧವ, ಹಿರಿಯ ಸಿವಿಲ್ ನ್ಯಾಯಾಧೀಶೆ ಲತಾ, ಜಿಲ್ಲಾ ಬಾಲ ನ್ಯಾಯ ಮಂಡಳಿಯ ಅಧ್ಯಕ್ಷ ವಿವೇಕಾನಂದ ಎಸ್. ಪಂಡಿತ್, ಉಡುಪಿ ತಹಶೀಲ್ದಾರ್ ಮಹೇಶ್ಚಂದ್ರ, ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ಅಧಿಕಾರಿ ಹರೀಶ್ ಗಾಂವ್ಕರ್‌, ನಿರ್ಮಿತಿ ಕೇಂದ್ರದ ಯೋಜನಾ ನಿದೇರ್ಶಕ ಅರುಣ್ ಕುಮಾರ್, ಮಹಿಳಾ ಮತ್ತು ಮಕ್ಕಳ ಇಲಾಖೆಯ ಉಪ ನಿರ್ದೇಶಕರಿ ಗ್ರೇಸಿ ಗೋನ್ಸಾಲ್ವಿಸ್, ಪ್ರಶಾಂತ ಶೆಟ್ಟಿ ಹಾವಂಜೆ ಜಿಲ್ಲಾ ಪ್ರಭಾಕರ ಮಕ್ಕಳ ರಕ್ಷಣಾಧಿಕಾ ರಾಮಚಂದ್ರ  ರಾಜೇ ಅರಸ್  ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.