ADVERTISEMENT

‘ಮಹಿಳೆಗೆ ಗೌರವ– ಮಾನ್ಯತೆ ಸಿಗಲಿ’

​ಪ್ರಜಾವಾಣಿ ವಾರ್ತೆ
Published 22 ಮಾರ್ಚ್ 2017, 7:00 IST
Last Updated 22 ಮಾರ್ಚ್ 2017, 7:00 IST

ಉಡುಪಿ: ವಿಶ್ವ ಮಹಿಳಾ ದಿನಾಚರಣೆ ಕೇವಲ ಒಂದು ದಿನಕ್ಕೆ ಮಾತ್ರ ಸೀಮಿತವಾಗದೆ, ಮಹಿಳೆಯರಿಗೆ ಸಮಾಜದಲ್ಲಿ ಎಂದೆಂದೂ ಗೌರವ– ಮಾನ್ಯತೆಗಳು ದೊರೆಯಲಿ ಎಂದು ಸಂತೆಕಟ್ಟೆ ಗೊರಟ್ಟಿ ಆಸ್ಪತ್ರೆಯ ಸ್ತ್ರೀರೋಗ ತಜ್ಞೆ ಡಾ. ರಾಜಲಕ್ಷ್ಮೀ ಹೇಳಿದರು.

ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ತೆಂಕನಿಡಿಯೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ, ಕಾಲೇಜಿನ ಸಮಾಜ ಕಾರ್ಯ ವಿಭಾಗ, ಲೈಂಗಿಕ ದೌರ್ಜನ್ಯ ತಡೆ ಸಮಿತಿ ಹಾಗೂ ಗೊರಟ್ಟಿ ಆಸ್ಪತ್ರೆಯ ಸಂಯುಕ್ತ ಆಶ್ರಯದಲ್ಲಿ ಕಾಲೇಜಿನಲ್ಲಿ ಇತ್ತೀಚೆಗೆ ನಡೆದ ಕಾರ್ಯಕ್ರಮದಲ್ಲಿ ಮಹಿಳೆ– ಮಾನಸಿಕ ಮತ್ತು ದೈಹಿಕ ಸ್ವಸ್ಥತೆ ವಿಷಯ ಕುರಿತು ಅವರು ಮಾತನಾಡಿದರು.

ಮಹಿಳೆಯರಲ್ಲಿ ಒತ್ತಡ, ಅದರಿಂದ ಉಂಟಾಗುವ ಸಮಸ್ಯೆಗಳು, ಅವುಗಳ ಪರಿಹಾರದ ಬಗ್ಗೆ ಅವರು ಮಾಹಿತಿ ನೀಡಿದರು. ನಂತರ ನಡೆದ ಸಂವಾದ ಕಾರ್ಯಕ್ರಮದಲ್ಲಿ ಪ್ರಶ್ನೆಗಳಿಗೆ ಉತ್ತರಿಸಿದರು. ಕಾಲೇಜಿನ ಲೈಂಗಿಕ ದೌರ್ಜನ್ಯ ತಡೆ ಸಮಿತಿಯ ಸಂಚಾಲಕಿ ಡಾ.ನಿಕೇತನ ಪ್ರಾಸ್ತಾವಿಕವಾಗಿ ಮಾತನಾಡಿದರು.

ಪ್ರಭಾರ ಪ್ರಾಂಶುಪಾಲ ಪ್ರೊ. ಮಹೇಶ್ ರಾವ್ ಅಧ್ಯಕ್ಷತೆ ವಹಿಸಿದ್ದರು. ಗೊರಟ್ಟಿ ಆಸ್ಪತ್ರೆಯ ಸಮಾಜಕಾರ್ಯ ವಿಭಾಗದ ಸಂಯೋಜಕ ರಾಕೇಶ್ ಉಪಸ್ಥಿತರಿದ್ದರು.

ರಶ್ಮಿಶ್ರೀ ಪ್ರಾರ್ಥಿಸಿದರು, ಉಪ ನ್ಯಾಸಕಿ ಸುಮಂಗಲ ಸ್ವಾಗತಿಸಿದರು, ಸಮಾಜಕಾರ್ಯ ವಿಭಾಗದ ವಿದ್ಯಾರ್ಥಿ ದೀಕ್ಷಿತ್ ಕಾರ್ಯಕ್ರಮ ನಿರೂಪಿಸಿದರು. ಸಮಾಜಕಾರ್ಯ ವಿಭಾಗದ ಮುಖ್ಯಸ್ಥ ಡಾ. ದುಗ್ಗಪ್ಪ ಕಜೆಕಾರ್ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.