ADVERTISEMENT

‘ಮೌಢ್ಯ ಕಳೆದರೆ ಅಧ್ಯಾತ್ಮ ಸಿದ್ಧಿ’

​ಪ್ರಜಾವಾಣಿ ವಾರ್ತೆ
Published 25 ಮೇ 2017, 5:34 IST
Last Updated 25 ಮೇ 2017, 5:34 IST

ಬೈಂದೂರು: ‘ ನಮ್ಮಲ್ಲಿರುವ ಮೌಢ್ಯ ದೂರಾದರೆ ಅಧ್ಯಾತ್ಮದ ಸರಿಯಾದ ಮಾರ್ಗ ಸಿದ್ಧಿಸುತ್ತದೆ’ ಎಂದು ಧಾರ್ಮಿಕ ಮುಖಂಡ ಬಸ್ರೂರು ಅಪ್ಪಣ್ಣ ಹೆಗ್ಡೆ ಹೇಳಿದರು.

ಬೈಂದೂರು- ಗ್ರಾಮದ ಕಳವಾಡಿಯಲ್ಲಿ ಮರುನಿರ್ಮಿಸುವ ಶ್ರೀ ಈಶ್ವರ ಮಾರಿಕಾಂಬಾ ದೇವಸ್ಥಾನದ ಈಶ್ವರ ಗುಡಿಯ ಶಿಲಾನ್ಯಾಸ ನೆರವೇರಿಸಿ ಮಾತನಾಡಿದರು.

ಶಾಸಕ ಕೆ. ಗೋಪಾಲ ಪೂಜಾರಿ ನೂತನ ಶಿಲಾಮಯ ಗರ್ಭಗುಡಿಯ ಶಿಲಾನ್ಯಾಸ ನೆರವೇರಿಸಿ, ‘ ಜನರು ಒಟ್ಟಾಗಿ ದುಡಿದು ದೇವಸ್ಥಾನದ ಮರುನಿರ್ಮಾಣ ಪೂರ್ಣಗೊಳಿಸಬೇಕು’ ಎಂದರು.

ಕುತ್ಯಾರು ಕೇಂಜ ಶ್ರೀಧರ ತಂತ್ರಿ ನೇತೃತ್ವದಲ್ಲಿ ಧಾರ್ಮಿಕ ವಿಧಿಗಳು ನಡೆದವು. ಧಾರವಾಡದ ಉದ್ಯಮಿ ಯು. ಬಿ. ಶೆಟ್ಟಿ ತಮ್ಮ ದಿವಂಗತ ಪತ್ನಿ ಸುಜಾತಾ ಸ್ಮರಣಾರ್ಥ ₹10ಲಕ್ಷ ಅನುದಾನ ನೀಡಿದರು.

ಕೊಲ್ಲೂರು ಮೂಕಾಂಬಿಕಾ ದೇವಳ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಕುಮಾರ್ ಎಂ. ಶೆಟ್ಟಿ, ಮಾಜಿ ಆಡಳಿತ ಧರ್ಮದರ್ಶಿ ಬಿ. ಎಂ. ಸುಕುಮಾರ ಶೆಟ್ಟಿ, ನಿವೃತ್ತ ಅರಣ್ಯ ಸಂರಕ್ಷಣಾಧಿಕಾರಿ ಬಿ. ಜಗನ್ನಾಥ ಶೆಟ್ಟಿ, ಜಿಲ್ಲಾ ಪಂಚಾಯಿತಿ ಸದಸ್ಯ ಶಂಕರ ಪೂಜಾರಿ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಎಸ್. ರಾಜು ಪೂಜಾರಿ, ತಾಲ್ಲೂಕು ಪಂಚಾಯಿತಿ ಸದಸ್ಯೆ ಮಾಲಿನಿ, ಗ್ರಾಮ ಪಂಚಾಯಿತಿ ಸದಸ್ಯ ವೆಂಕಟ ಪೂಜಾರಿ,

ಉದ್ಯಮಿಗಳಾದ ಟಿ. ನಾರಾಯಣ ಹೆಗ್ಡೆ, ಎನ್. ಜಗನ್ನಾಥ ಶೆಟ್ಟಿ, ಮುತ್ತಯ್ಯ ಪೂಜಾರಿ, ಹಿರಿಯ ನಾಗರಿಕರ ವೇದಿಕೆ ಅಧ್ಯಕ್ಷ ವಸಂತ್ ಹೆಗ್ಡೆ, ದೇವಸ್ಥಾನದ ಆಡಳಿತ ಮೊಕ್ತೇಸರ ಕೆ. ಕರುಣಾಕರ ಶೆಟ್ಟಿ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ದಿವಾಕರ ಹೆಗ್ಡೆ, ಕೆ. ರವೀಂದ್ರ ಶೆಟ್ಟಿ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು. ಸತೀಶ್‌ರಾಮ್‌ಕುಮಾರ್ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.