ADVERTISEMENT

ಯುವಕರ ಸರ್ವಾಂಗೀಣ ಪ್ರಗತಿಗೆ ಎನ್‌ಎಸ್‌ಎಸ್ ಸಹಕಾರಿ: ಪ್ರಮೋದ್ ಮಧ್ವರಾಜ್

​ಪ್ರಜಾವಾಣಿ ವಾರ್ತೆ
Published 29 ನವೆಂಬರ್ 2017, 5:24 IST
Last Updated 29 ನವೆಂಬರ್ 2017, 5:24 IST

ಉಡುಪಿ: ವ್ಯಕ್ತಿತ್ವ ವಿಕಸನ, ನಾಯಕತ್ವ, ಸೇವಾ ಮನೋಭಾವ, ಹಾಗೂ ಮಾನವೀಯ ಸಂಬಂಧಗಳ ಸರ್ವಾಂಗೀಣ ಬೆಳವಣಿಗೆಗೆ ಎನ್‌.ಎಸ್‌.ಎಸ್‌ ಶಿಬಿರ ಪೂರಕವಾಗಲಿದೆ ಎಂದು ಕ್ರೀಡೆ ಮತ್ತು ಯುವ ಸಬಲೀಕರಣ ಸಚಿವ ಪ್ರಮೋದ್‌ ಮಧ್ವರಾಜ್ ತಿಳಿಸಿದರು.

ತೆಂಕನಿಡಿಯೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ಸಹಯೋಗದಲ್ಲಿ ಸೋಮವಾರ ಶೆಟ್ಟಿಬೆಟ್ಟು ಸಂಯುಕ್ತ ಪ್ರೌಢಶಾಲೆಯಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಸ್ವಯಂ ಸೇವ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.

ನಗರ ಸಭೆ ನಾಮನಿರ್ದೇಶಿತ ಸದಸ್ಯ ಸುಕೇಶ್‌ ಕುಂದರ್‌ ಮಾತನಾಡಿ, ಎನ್‌ಎಸ್‌ಎಸ್ ವಿದ್ಯಾರ್ಥಿಗಳ ಸುಪ್ತ ಪ್ರತಿಭೆಯನ್ನು ಆನಾವರಣಗೊಳ್ಳಿಸಲು ಸೂಕ್ತವಾದ ವೇದಿಕೆಯಾಗಿದೆ. ಸಮಾಜಕ್ಕೆ ತಮ್ಮಿಂದ ಸೇವೆಯನ್ನು ನಿರಂತವಾಗಿ ಮಾಡಬೇಕು ಎಂದರು.

ADVERTISEMENT

ಕಾಲೇಜಿನ ಪ್ರಾಂಶುಪಾಲ ಪ್ರೊ.ಎಸ್.ಬಾಲಕೃಷ್ಣ ಹೆಗ್ಡೆ ಮಾತನಾಡಿ, ಶಿಬಿರಾರ್ಥಿಗಳು ಒಂದು ವಾರಗಳ ಕಾಲ ಶಿಬಿರದಲ್ಲಿ ಶಿಸ್ತಿನಿಂದ ಪಾಲ್ಗೊಳ್ಳುವುದರ ಮೂಲಕ ತಮ್ಮ ವ್ಯಕ್ತಿತ್ವವನ್ನು ಬೆಳೆಸಿಕೊಂಡು ಕಾಲೇಜಿಗೆ ಹಾಗೂ ಸಮಾಜಕ್ಕೆ ಕಿರ್ತೀ ತರಬೇಕು ಎಂದರು.

ಶಾಲಾಭಿವೃದ್ಧಿ ಮೇಲುಸ್ತುವಾರಿ ಸಮಿತಿ ಉಪಾಧ್ಯಕ್ಷ ಪ್ರಕಾಶ್ ಶೆಣೈ, ಉದ್ಯಮಿ ಹಾಜಿ ಅಬ್ದುಲ್ಲಾ, ಚಂದ್ರನಾಯ್ಕ, ಶಿಕ್ಷಕಿ ಶರ್ಮಿಳಾ, ಕೆ.ವನಿತ ಉಪಸ್ಥಿತರಿದ್ದರು.
ಪ್ರೊ. ರವಿರಾಜ್ ಸ್ವಾಗತಿಸಿದರು, ಪ್ರೊ. ಮಂಜುನಾಥ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.