ADVERTISEMENT

ರೂ 1 ಲಕ್ಷ ಪರಿಹಾರ ನೀಡಲು ಡಿ.ಸಿ.ಗೆ ಅಧಿಕಾರ

ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ

​ಪ್ರಜಾವಾಣಿ ವಾರ್ತೆ
Published 20 ಅಕ್ಟೋಬರ್ 2014, 5:45 IST
Last Updated 20 ಅಕ್ಟೋಬರ್ 2014, 5:45 IST

ಉಡುಪಿ: ‘ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಮಕ್ಕಳ ವೈದ್ಯಕೀಯ ವೆಚ್ಚಕ್ಕೆ ತುರ್ತಾಗಿ ಒಂದು ಲಕ್ಷ ರೂಪಾಯಿವರೆಗೆ ಪರಿಹಾರ ನೀಡುವ ಅಧಿಕಾರವನ್ನು ಜಿಲ್ಲಾಧಿಕಾರಿಗಳಿಗೆ ನೀಡಲಾಗಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಹತ್ತು ಸಾವಿರ ರೂಪಾಯಿ ಪರಿಹಾರ ನೀಡಲಾಗುವುದು’ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಅಂಗವಿಕಲರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಪ್ರಧಾನ ಕಾರ್ಯ ದರ್ಶಿ ಡಾ.ಅಮಿತಾ ಪ್ರಸಾದ್‌ ಹೇಳಿದರು. 

ಉಡುಪಿ ಜಿಲ್ಲಾ ಬಾಲಭವನ ಸಮಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬ್ರಹ್ಮಗಿರಿ ಬಾಲಭವನದಲ್ಲಿ ಭಾನುವಾರ ಏರ್ಪ­ಡಿಸಿದ್ದ ಕಾರ್ಯಕ್ರಮದಲ್ಲಿ ಇನ್ಫೊಸಿಸ್‌ ಫೌಂಡೇ­ಷನ್‌ ಬಾಲಭವನಕ್ಕೆ ಕೊಡುಗೆಯಾಗಿ ನೀಡಿದ ಬಸ್ ಹಸ್ತಾಂತರ ಸಮಾರಂಭವನ್ನು ಉದ್ಘಾ ಟಿಸಿ ಅವರು ಮಾತನಾಡಿದರು.

ಮಹಿಳೆ ಮತ್ತು ಮಕ್ಕಳ ಮೇಲಿನ ದೌರ್ಜನ್ಯ ತಡೆಗೆ ನ.1ರಿಂದ ಪ್ರತಿ ಜಿಲ್ಲಾಸ್ಪತ್ರೆಯಲ್ಲಿ ಏಕ ರೂಪ ಘಟಕ ಆರಂಭಿಸಲಾಗುವುದು. ಉಡುಪಿ ಜಿಲ್ಲೆಯಲ್ಲಿ ಮಕ್ಕಳ ರಕ್ಷಣಾ ಘಟಕ ಆರಂಭಿಸಲು ಒಂದು ಕೋಟಿ ರೂಪಾಯಿ ಅನುದಾನ ನೀಡಲು ಇಲಾಖೆ ಬದ್ಧವಾಗಿದೆ ಎಂದು ಹೇಳಿ ದರು. ಅಲ್ಲದೇ, ಪುಟಾಣಿ ರೈಲು ಆರಂಭಿಸಲು ಇಲಾಖೆಗೆ ಪ್ರಸ್ತಾವನೆ ಸಲ್ಲಿಸುವಂತೆ ಜಿಲ್ಲಾ ಪಂಚಾಯಿತಿ ಕಾರ್ಯನಿರ್ವಹಣಾ ಅಧಿಕಾರಿ ಯವರಿಗೆ ಸೂಚಿಸಿದರು.

‘ಮಕ್ಕಳ ಮೇಲಿನ ದೌರ್ಜನ್ಯ ತಡೆಯಲು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಉಡುಪಿ ಕ್ಷೇತ್ರದ ಶಾಲೆಗಳಲ್ಲಿ ಸಭೆ ನಡೆಸಲಾ ಗಿದೆ. ಉಡುಪಿ ಜಿಲ್ಲೆಯಲ್ಲಿ ಮಕ್ಕಳ ರಕ್ಷಣಾ ಘಟಕ ಹಾಗೂ ಪುಟಾಣಿ ರೈಲು ಆರಂಭಿಸ ಬೇಕು’ ಎಂದು ಬಸ್‌ ಹಸ್ತಾಂತರಿಸಿದ ಶಾಸಕ ಪ್ರಮೋದ್‌ ಮಧ್ವ­ರಾಜ್‌ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಮನವಿ ಮಾಡಿದರು.

ಸ್ತ್ರೀಶಕ್ತಿ ಗುಂಪುಗಳಿಗೆ ಸುತ್ತು ನಿಧಿ ಹಾಗೂ ಭಾಗ್ಯಲಕ್ಷ್ಮಿ ಫಲಾನುಭವಿಗಳಿಗೆ ಬಾಂಡ್‌ ವಿತ­ರಿಸ­ಲಾಯಿತು. ನಗರಸಭೆ ಅಧ್ಯಕ್ಷ ಪಿ.ಯುವ­ರಾಜ, ಜಿಲ್ಲಾಧಿಕಾರಿ ಎಸ್‌.ಎಸ್‌. ಪಟ್ಟಣಶೆಟ್ಟಿ, ಜಿಲ್ಲಾ ಪಂಚಾಯಿತಿ ಕಾರ್ಯನಿರ್ವಹಣಾ ಅಧಿ­ಕಾರಿ ಎಂ.ಕನಗವಲ್ಲಿ, ಇನ್ಫೊಸಿಸ್‌ ಸಂಸ್ಥೆಯ ಪ್ರಾದೇಶಿಕ ಮುಖ್ಯಸ್ಥ ಧೀರಜ್ ಹೆಜಮಾಡಿ , ಮಂಗಳೂರು ವಲಯ ಉಪಾ­ಧ್ಯಕ್ಷ ವಾಸು­ದೇವ ಕಾಮತ್, ರಾಜ್ಯ ಬಾಲಭವನ ಸಮಿತಿ ಸದಸ್ಯೆ ಪ್ರೇಮಕುಮಾರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ­ನಿರ್ದೇಶಕಿ ಗ್ರೇಸಿ ಎಲ್‌ ಗೊನ್ಸಾಲ್ವಿಸ್‌, ವೀಣಾ ವಿವೇಕಾ­ನಂದ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ರಾಜೇಂದ್ರ ಬೇಕಲ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.