ADVERTISEMENT

ರೈತರಿಗೆ ಪರಿಹಾರ ನೀಡುವಲ್ಲಿ ತಾರತಮ್ಯ

ಮುಷ್ಟಿಧಾನ್ಯ ಸಂಗ್ರಹ ಅಭಿಯಾನದಲ್ಲಿ ಉದಯ ಕುಮಾರ್‌ ಶೆಟ್ಟಿ

​ಪ್ರಜಾವಾಣಿ ವಾರ್ತೆ
Published 23 ಮಾರ್ಚ್ 2018, 12:55 IST
Last Updated 23 ಮಾರ್ಚ್ 2018, 12:55 IST

ಉಡುಪಿ: ‘ರೈತರನ್ನು ಸಾಲದಿಂದ ಹೊರತರುವ ಉದ್ದೇಶದಿಂದ ಮನೆ ಮನೆಯಿಂದ ಮುಷ್ಟಿಧಾನ್ಯ ಸಂಗ್ರಹ ಅಭಿಯಾನ ಆರಂಭಿಸಲಾಗಿದೆ’ ಎಂದು ಬಿಜೆಪಿ ಮಂಗಳೂರು ವಿಭಾಗದ ಪ್ರಭಾರಿ ಕೆ.ಉದಯ ಕುಮಾರ್‌ ಶೆಟ್ಟಿ ತಿಳಿಸಿದರು.

ಉಡುಪಿ ವಿಧಾನಸಭಾ ಕ್ಷೇತ್ರದ ಕಡೆಕಾರು ಗ್ರಾಮಪಂಚಾಯತ್ ವ್ಯಾಪ್ತಿ ಯಲ್ಲಿ ಗುರುವಾರ ಆಯೋಜಿಸಿದ್ದ ಮನೆ ಮನೆಯಿಂದ ಮುಷ್ಟಿಧಾನ್ಯ ಸಂಗ್ರಹ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.

ರೈತರ ಹಿತ ಕಾಯುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. ಸಿದ್ದರಾ ಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಪರಿಹಾರ ನೀಡುವಲ್ಲಿಯೂ ತಾರತಮ್ಯ ಮಾಡುತ್ತಿದೆ. ಕಳೆದ ನಾಲ್ಕೂವರೆ ವರ್ಷದಲ್ಲಿ ರಾಜ್ಯದಲ್ಲಿ ಸುಮಾರು 3,515 ರೈತರು ಕೃಷಿ ಸಾಲ ತೀರಿಸಲಾಗದೆ ಆತ್ಮಹತ್ಯೆ ಮಾಡಿಕೊಂ ಡಿದ್ದಾರೆ. ದುಡಿಯುವ ಕೈ ಕಳೆದುಕೊಂಡ ಕುಟುಂಬಗಳು ಅನಾಥವಾಗಿವೆ ಎಂದು ಬೇಸರ ವ್ಯಕ್ತಪಡಿಸಿದರು.

ADVERTISEMENT

ಜಿಲ್ಲಾ ಪಂಚಾಯಿತಿ ಅಧ್ಯಕ್ಷ ದಿನಕರ್‌ ಬಾಬು, ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷ ರಾಜೇಂದ್ರ ಪಂದುಬೆಟ್ಟು, ಸದಸ್ಯೆ ಶಿಲ್ಪ, ಕಡೆಕಾರ್ ಪಂಚಾಯಿತಿ ಉಪಾಧ್ಯಕ್ಷೆ ಮಾಲತಿ ಶೆಟ್ಟಿ, ಪಂಚಾಯತಿ ಸದಸ್ಯೆ ಸಬಿತ, ವಿನೋದಿನಿ, ಶಶಿಧರ್ ಕಿದಿಯೂರು, ಅರುಣ್ ಕುಮಾರ್ ಕಡೆ ಕಾರ್, ಹರೀಶ್ ಕಡೆಕಾರ್, ಗಿರೀಶ್ ಕಿದಿಯೂರು, ರೈತ ಮೋರ್ಚದಿಂದ ರಾಘವೇಂದ್ರ ಉಪ್ಪೂರು, ಕಡೆಕಾರು ಸ್ಥಾನೀಯ ಸಮಿತಿ ಅಧ್ಯಕ್ಷ ರಾಕೇಶ್ ಪಾಲನ್, ಕಿದಿಯೂರು ಸ್ಥಾನೀಯ ಸಮಿತಿ ಅಧ್ಯಕ್ಷ ರಾಮ್‌ರಾಜ್, ಪ್ರಧಾನ ಕಾರ್ಯದರ್ಶಿ ಜಗದೀಶ್ ಆಚಾರ್ಯ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.