ADVERTISEMENT

ಸತ್ಯಾಗ್ರಹ ಹಿಂದಕ್ಕೆ ಪಡೆದ ಹೋರಾಟಗಾರರು

ಉಡುಪಿ: ಮರಳು ಸಮಸ್ಯೆ ಬಗೆಹರಿಸುವ ಕುರಿತು ಅಧಿಕಾರಿಗಳಿಂದ ಭರವಸೆ

​ಪ್ರಜಾವಾಣಿ ವಾರ್ತೆ
Published 11 ಫೆಬ್ರುವರಿ 2017, 13:04 IST
Last Updated 11 ಫೆಬ್ರುವರಿ 2017, 13:04 IST
ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಉಪ ನಿರ್ದೇಶಕ ಕೋದಂಡರಾಮ ಅವರಿಗೆ ಕರ್ನಾಟಕ ಕಾರ್ಮಿಕರ ವೇದಿಕೆಯ ಅಧ್ಯಕ್ಷ ರವಿ ಶೆಟ್ಟಿ ಮನವಿ ಪತ್ರ ಸಲ್ಲಿಸಿದರು. ತಹಶೀಲ್ದಾರ್ ಮಹೇಶ್‌ಚಂದ್ರ ಇದ್ದಾರೆ
ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಉಪ ನಿರ್ದೇಶಕ ಕೋದಂಡರಾಮ ಅವರಿಗೆ ಕರ್ನಾಟಕ ಕಾರ್ಮಿಕರ ವೇದಿಕೆಯ ಅಧ್ಯಕ್ಷ ರವಿ ಶೆಟ್ಟಿ ಮನವಿ ಪತ್ರ ಸಲ್ಲಿಸಿದರು. ತಹಶೀಲ್ದಾರ್ ಮಹೇಶ್‌ಚಂದ್ರ ಇದ್ದಾರೆ   

ಉಡುಪಿ: ಬೇಡಿಕೆಗಳನ್ನು ಈಡೇರಿಸುವ ಭರವಸೆ ಸಿಕ್ಕ ಹಿನ್ನೆಲೆಯಲ್ಲಿ ಮರಳು ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ಕರ್ನಾಟಕ ಕಾರ್ಮಿಕರ ವೇದಿಕೆಯ ನೇತೃ ತ್ವದಲ್ಲಿ ವಿವಿಧ ಸಂಘಟನೆಗಳು ಕಳೆದ ಮೂರು ದಿನಗಳಿಂದ ನಡೆಸುತ್ತಿದ್ದ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ಶುಕ್ರವಾರ ಹಿಂದಕ್ಕೆ ಪಡೆದವು.

ಸತ್ಯಾಗ್ರಹ ನಡೆಯುತ್ತಿದ್ದ ಸ್ಥಳಕ್ಕೆ ಬಂದ ಗಣಿ ಮತ್ತು ಭೂ ವಿಜ್ಞಾನ ಇಲಾ ಖೆಯ ಉಪ ನಿರ್ದೇಶಕ ಕೋದಂಡ ರಾಮ ಅವರು ಹೋರಾಟಗಾರರಿಂದ ಮನವಿ ಸ್ವೀಕರಿಸಿದರು. ಕರಾವಳಿ ನಿಯಂ ತ್ರಣೇತರ ವಲಯದಲ್ಲರುವ ಮರಳು ಬ್ಲಾಕ್‌ಗಳಲ್ಲಿ ಮರಳುಗಾರಿಕೆ ಆರಂಭಿ ಸಲು ಆದಷ್ಟು ಬೇಗ ಕ್ರಮ ಕೈಗೊಳ್ಳಲಾ ಗುತ್ತದೆ. ಕಲ್ಲು ಗಣಿಗಾರಿಕೆಗೆ ಸಹ ಪರವಾ ನಗಿ ನೀಡಲಾಗುತ್ತದೆ ಎಂದು ಅವರು ಭರವಸೆ ನೀಡಿದರು. ತಹಶೀಲ್ದಾರ್‌ ಮಹೇಶ್‌ಚಂದ್ರ ಇದ್ದರು.

ಕಲ್ಲು ಗಣಿಗಾರಿಕೆ ಹಾಗೂ ಮರಳು ಗಾರಿಕೆಗೆ ಪರವಾನಗಿ ನೀಡುವವರೆಗೂ ಇವೆರಡನ್ನೂ ಸಾಗಿಸುವ ಯಾವುದೇ ವಾಹನಗಳಿಗೆ ದಂಡ ವಿಧಿಸಬಾರದು ಎಂಬ ಬೇಡಿಕೆ ಈಡೇರಿಸಬೇಕು ಹಾಗೂ ಲಿಖಿತವಾಗಿ ಬರೆದುಕೊಡಬೇಕು ಎಂಬ ಕಾರ್ಮಿಕರ ವೇದಿಕೆಯ ಅಧ್ಯಕ್ಷ ರವಿ ಶೆಟ್ಟಿ ಹಾಗೂ ಹೋರಾಟಗಾರರ ಬೇಡಿಕೆ ಈಡೇರಿಸಲು ಕೋದಂಡರಾಮ ಅವರು ಸ್ಪಷ್ಟವಾಗಿ ನಿರಾಕರಿಸಿದರು. ಆ ರೀತಿ ಬರೆದುಕೊಡಲು ಆಗದು. ಈ ಬಗ್ಗೆ ಸಂಬಂಧಿಸಿದ ಇಲಾಖೆಗಳೊಂದಿಗೆ ಚರ್ಚಿಸಲಾಗುವುದು ಎಂದರು.

ಈ ವಿಷಯಕ್ಕೆ ಸಂಬಂಧಿಸಿದಂತೆ ಸುಮಾರು ಅರ್ಧಗಂಟೆಗಳ ಕಾಲ ಮಾತಿನ ಜಟಾಪಟಿ ನಡೆಯಿತು.ಉಪವಾಸ ಕೂತಿದ್ದವರ ಪೈಕಿ ಕರ್ನಾಟಕ ರಕ್ಷಣಾ ವೇದಿಕೆಯ ಸುಧೀರ್‌ ಪೂಜಾರಿ ಎಂಬುದರು ಅಸ್ವಸ್ಥಗೊಂ ಡರು. ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತು.

ಅಧಿಕಾರಿಗಳು ಪ್ರತಿಭಟನಾ ಸ್ಥಳಕ್ಕೆ ಬರುವುದು ತಡವಾದ ಕಾರಣ ರಸ್ತೆ ತಡೆ ನಡೆಸಲು ಕೆಲ ವರು ನಿರ್ಧರಿಸಿದರು. ವಿಷಯ ತಿಳಿದ ಕೂಡಲೇ ಸ್ಥಳದಲ್ಲಿ ಹೆಚ್ಚಿನ ಪೊಲೀಸ್‌ ಬಂದೋಬಸ್ತ್‌ ಮಾಡಲಾಯಿತು. ಎಸ್‌ಐ ಅನಂತ ಪದ್ಮನಾಭ ಅವರು ಖುದ್ದಾಗಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT