ADVERTISEMENT

ಸಮಸ್ಯೆಗಳಿಗೆ ಸ್ಪಂದಿಸಲು ಶಿಲ್ಪಾನಾಗ್ ಸೂಚನೆ

​ಪ್ರಜಾವಾಣಿ ವಾರ್ತೆ
Published 23 ಮೇ 2017, 6:03 IST
Last Updated 23 ಮೇ 2017, 6:03 IST

ಉಪ್ಪುಂದ (ಬೈಂದೂರು) :  ಚತುಷ್ಪಥ ಹೆದ್ದಾರಿ ಕಾಮಗಾರಿ ಯದಲ್ಲಿ ಸ್ಥಳೀಯ ಜನರಿಗಾಗುವ ತೊಂದರೆಗಳಿಗೆ ಸಕಾ ರಾತ್ಮಕವಾಗಿ ಸ್ಪಂದಿಸಬೇಕು ಎಂದು ಕುಂದಾಪುರ ಉಪವಿಭಾಗಾಧಿಕಾರಿ ಶಿಲ್ಪಾ ನಾಗ್ ಹೆದ್ದಾರಿ ಕಾಮಗಾರಿ ಗುತ್ತಿಗೆದಾರರಿಗೆ ಸೂಚಿಸಿದರು.

ಉಪ್ಪುಂದದ ಸಾರ್ವಜನಿಕರು ಹೋರಾಟಕ್ಕೆ ಅಣಿಯಾಗುತ್ತಿರುವ  ಕಾರಣ ಶುಕ್ರವಾರ ಅಹವಾಲು ಆಲಿಸಿ, ಈ ಸೂಚನೆ ನೀಡಿದರು. ಗುತ್ತಿಗೆದಾರರ ನಿರ್ಲಕ್ಷ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಜನರು, ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಎಸ್. ಪ್ರಕಾಶ್ಚಂದ್ರ ಶೆಟ್ಟಿ ಗುತ್ತಿಗೆದಾರರು ಕಾಮಗಾರಿ ನಿರ್ವಹಣೆಯ ನಿಯಮಗಳನ್ನು ಉಲ್ಲಂಘಿಸುತ್ತಿದ್ದಾರೆ ಎಂದು ದೂರಿದರು.

ಗ್ರಾಮ ಪಂಚಾಯಿತಿ ಸದಸ್ಯ ಯು. ಸಂದೇಶ ಭಟ್ ಚರಂಡಿ, ಸರ್ವೀಸ್ ರಸ್ತೆ ಅಗತ್ಯ ಎಂದು ಒತ್ತಾಯಿಸಿದರು. ಶಿಲ್ಪಾ ಕೆಲವು ಸಮಸ್ಯೆಗಳನ್ನು ಜಿಲ್ಲಾಧಿಕಾರಿ ಮೂಲಕ ಪರಿಹರಿಸುವ ಭರವಸೆಯಿತ್ತರು.

ADVERTISEMENT

ಜಿಲ್ಲಾ ಪಂಚಾಯಿತಿ ಸದಸ್ಯೆ ಗೌರಿ ದೇವಾಡಿಗ, ತಾಲ್ಲೂಕು ಪಂಚಾಯಿತಿ ಸದಸ್ಯೆ ಪ್ರಮೀಳಾ ದೇವಾಡಿಗ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ದುರ್ಗಮ್ಮ, ಸದಸ್ಯರು, ವಿಶೇಷ ತಹಶೀಲ್ದಾರ್ ಕಿರಣ್ ಗೌರಯ್ಯ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.