ADVERTISEMENT

‘ಸೊಳ್ಳೆ ನಿಯಂತ್ರಣದಿಂದ ಕಾಯಿಲೆ ದೂರ’

​ಪ್ರಜಾವಾಣಿ ವಾರ್ತೆ
Published 7 ಜುಲೈ 2017, 9:01 IST
Last Updated 7 ಜುಲೈ 2017, 9:01 IST

ಬೈಂದೂರು : ಮಲೇರಿಯಾ, ಪೈಲೇ ರಿಯಾ, ಡೆಂಗಿ, ಚಿಕೂನ್‌ ಗುನ್ಯ, ಮೆದುಳು ಜ್ವರ ಮತ್ತು ಕಾಲರಾ ರೋಗ ಸೊಳ್ಳೆಗ ಳಿಂದ ಹರಡುತ್ತವೆ. ಸೊಳ್ಳೆಗಳ ನಿಯಂತ್ರಣ ಅಗತ್ಯವಾಗಿದೆ ಎಂದು ರಾಷ್ಟ್ರೀಯ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ. ಪ್ರೇಮಾನಂದ ಹೇಳಿದರು.

ಉಡುಪಿ ಜಿಲ್ಲಾ ಪಂಚಾಯಿತಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಷ್ಟ್ರೀಯ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಯೋಜನೆ, ಪ್ರಾಥಮಿಕ ಆರೋಗ್ಯ ಕೇಂದ್ರದ ಆಶ್ರಯದಲ್ಲಿ ಶ್ರೀ ರಾಘವೇಂದ್ರ ಸ್ಪೋರ್ಟ್ಸ್ ಕ್ಲಬ್, ದೊಡ್ಡಹಿತ್ಲು ಸ್ಪೂರ್ತಿ ಮಹಿಳಾ ಘಟಕ ಇವರ ಸಹಯೋಗ ದೊಂದಿಗೆ ಮಲೇರಿಯಾ ನಿಯಂತ್ರಣ ಮಾಸಾಚರಣೆ ಅಂಗವಾಗಿ ಬುಧವಾರ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನಲ್ಲಿ ಆಯೋಜಿ ಸಲಾಗಿದ್ದ ಮಾಹಿತಿ ಮತ್ತು ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದರು.

ಮಲೇರಿಯಾ ರೋಗ ಹಾಗೂ ಡೆಂಗಿ ಜ್ವರವು ಒಬ್ಬರಿಂದ ಒಬ್ಬರಿಗೆ ಹರಡುತ್ತವೆ. ನೀರಿರುವ ಗದ್ದೆ, ಕೆರೆ, ಕೊಳಚೆ ನೀರು ಹೊಂಡ, ಉಪಯೋ ಗಿಸದ ಬಾವಿ, ಮನೆಯ ಸುತ್ತಮುತ್ತ ನಿಂತ ನೀರು ಇವೆಲ್ಲ ಸೊಳ್ಳೆ ಬೆಳೆಯುವ ತಾಣಗಳು. ಅವುಗಳಿಲ್ಲದಂತೆ ಮಾಡುವ ಅಥವಾ ಅವುಗಳಿಗೆ ಸೊಳ್ಳೆ ನಾಶಕ ಮದ್ದು ಸಿಂಪಡಿಸುವ ಮೂಲಕ ಸೊಳ್ಳೆಗಳನ್ನು ನಿವಾರಿಸಬಹುದು ಎಂದರು. 

ADVERTISEMENT

ಚಳಿ ಮತ್ತು ನಡುಕದ ಜತೆ ಜ್ವರ, ಅತಿಯಾದ ಜ್ವರ, ವಾಂತಿ, ತಲೆನೋವು, ಜ್ವರ ಕಡಿಮೆಯಾಗುವಾಗ  ಬೆವರುವಿಕೆ, ಜ್ವರ ಕಡಿಮೆಯಾದ ಬಳಿಕ ಸುಸ್ತು ಮತ್ತು ನಿಶ್ಯಕ್ತಿ, ಕೀಲುಗಳಲ್ಲಿ ವಿಪರೀತ ನೋವು ಕಾಣಿಸಿಕೊಳ್ಳುವುದು ಈ ರೋಗಗಳ ಪ್ರಮುಖ ಲಕ್ಷಣಗಳು.

ತೀವ್ರ ಸ್ಥಿತಿಯಲ್ಲಿ ಬಾಯಿ, ಮೂಗು ಮತ್ತು ಒಸಡುಗಳಿಂದ ರಕ್ತಸ್ರಾವ ಹಾಗೂ ಚರ್ಮದ ಮೇಲೆ ಅಲ್ಲಲ್ಲಿ ರಕ್ತಸ್ರಾವದ ಗುರುತುಗಳು ಕಾಣಿಸಿ ಕೊಳ್ಳುತ್ತವೆ. ಆರಂಭಿಕ ಲಕ್ಷಣಗಳು ಕಾಣಿ ಸಿಕೊಂಡ ತಕ್ಷಣ ಹತ್ತಿರದ ಆರೋಗ್ಯ ಕೇಂದ್ರ ಭೇಟಿ ನೀಡಿ. ಸ್ವಯಂ ರಕ್ಷಣಾ ವಿಧಾನಗಳಾದ ಸೊಳ್ಳೆ ನಿರೋಧಕ ಗಳನ್ನು ಹಾಗೂ ಸೊಳ್ಳೆ ಪರದೆಯನ್ನು ಬಳಸಿ ಸೊಳ್ಳೆಗಳು ಕಚ್ಚದಂತೆ ಎಚ್ಚರಿಕೆ ವಹಿಸಬೇಕು ಎಂದು ಅವರು ಹೇಳಿದರು.

ತಾಲ್ಲೂಕು ಪಂಚಾಯಿತಿ ಸದಸ್ಯ ಸುರೇಂದ್ರ ಖಾರ್ವಿ ಅಧ್ಯಕ್ಷತೆ ವಹಿಸಿದ್ದರು. ಶ್ರೀ ರಾಘವೇಂದ್ರ ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷ ಜಿ. ವಿಠಲ ಶೆಣೈ, ಸ್ಪೂರ್ತಿ ಮಹಿಳಾ ಘಟಕದ ಅಧ್ಯಕ್ಷೆ ರೇವತಿ, ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಂ. ಸಿ., ಪ್ರೌಢಶಾಲಾ ವಿಭಾಗದ ಉಪ ಪ್ರಾಂಶುಪಾಲ ಸದಾನಂದ ವೈದ್ಯ, ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯಶಿಕ್ಷಕ ರಾಘವೇಂದ್ರ ಶೇರುಗಾರ್ ಇದ್ದರು.

ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಶ್ವೇತಾ ಸ್ವಾಗತಿಸಿ, ನಿರೂಪಿಸಿದರು. ರಾಘವೇಂದ್ರ ಸ್ಪೋರ್ಟ್ಸ್ ಕ್ಲಬ್ ಮಾಜಿ ಅಧ್ಯಕ್ಷ ಬಿ.ರಾಘವೇಂದ್ರ ಪೈ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.