ADVERTISEMENT

‘ಉತ್ತಮ ಹವ್ಯಾಸದಿಂದ ಪರಿಪೂರ್ಣ ವ್ಯಕ್ತಿತ್ವ’

‘ವಿಕಾಸ–2015’ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪದಲ್ಲಿ ರಾಜೇಂದ್ರ ಭಟ್‌

​ಪ್ರಜಾವಾಣಿ ವಾರ್ತೆ
Published 29 ಮೇ 2015, 11:22 IST
Last Updated 29 ಮೇ 2015, 11:22 IST

ಉಡುಪಿ: ‘ಬಾಲ್ಯದಲ್ಲಿಯೇ ಉತ್ತಮ ಹವ್ಯಾಸಗಳನ್ನು ಬೆಳೆಸಿಕೊಂಡರೆ ಪರಿ ಪೂರ್ಣವಾದ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಬಹುದು’ ಎಂದು ಜೇಸಿಯ ಅಂತರರಾಷ್ಟ್ರೀಯ ತರಬೇತುದಾರ ರಾಜೇಂದ್ರ ಭಟ್‌ ಹೇಳಿದರು.

 ತೆಂಕನಿಡಿಯೂರು ಕಾಳಿಕಾಂಬಾ ಭಜನಾ ಸಂಘದ ಬಾಲ ಸಂಸ್ಕಾರ ಕೇಂದ್ರದಲ್ಲಿ ಭಾನುವಾರ ನಡೆದ ‘ವಿಕಾಸ –2015’ ಎಂಬ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್‌ನ ಅಧ್ಯಕ್ಷ ಯಶ್‌ ಪಾಲ್‌ ಸುವರ್ಣ ಶಿಬಿರಾರ್ಥಿಗಳಿಗೆ ಶುಭ ಹಾರೈಸಿದರು. ಪ್ರದೀಪ್‌ ಆಚಾರ್ಯ ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರವನ್ನು ವಿತರಿಸಿದರು. ಕಾಳಿಕಾಂಬಾ ಭಜನಾ ಸಂಘದ ಅಧ್ಯಕ್ಷ ಟಿ. ಕೃಷ್ಣ ಆಚಾರ್ಯ ಅಧ್ಯಕ್ಷತೆಯನ್ನು ವಹಿಸಿದ್ದರು.

ಭಜನಾ ಸಂಘದ ಗೌರವ ಅಧ್ಯಕ್ಷ ಟಿ. ವಾದಿರಾಜ ಆಚಾರ್ಯ, ದೇವಿ ಮಹಿಳಾ ಮಂಡಳಿಯ ಗೌರವ ಅಧ್ಯಕ್ಷೆ ಅಪ್ಪಿ ಶಿವಯ್ಯ ಆಚಾರ್ಯ, ಉಪಾಧ್ಯಕ್ಷೆ ಸುಮಿತ್ರ ಆಚಾರ್ಯ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಶಿಬಿರದ ನಿರ್ದೇಶಕ ಬಿ. ವಾಸುದೇವ ಆಚಾರ್ಯ ಪರ್ಕಳ ಅವರನ್ನು ಸನ್ಮಾನಿಸಲಾಯಿತು. ಬಿ. ವಾಸುದೇವ ಆಚಾರ್ಯ ಪ್ರಾಸ್ತಾ ವಿಕವಾಗಿ ಮಾತನಾಡಿದರು. ಸಹಾಯಕ ಶಿಬಿರಾಧಿಕಾರಿ ಸಂಪತ್‌ ಆಚಾರ್ಯ ವರದಿ ಮಂಡಿಸಿದರು. ಸೌಮ್ಯಾ ಸ್ವಾಗತಿಸಿ ದರು, ಬಾಲ ಸಂಸ್ಕಾರ ಕೇಂದ್ರದ ಅಧ್ಯಕ್ಷ ಉದಯ ಜೆ. ಆಚಾರ್ಯ ನಿರೂಪಿಸಿದರು, ಸುಷ್ಮಾ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT