ADVERTISEMENT

‘ಕಾಯಿಲೆ ನಿಯಂತ್ರಣಕ್ಕೆ ಯೋಗ ಸಹಕಾರಿ’

​ಪ್ರಜಾವಾಣಿ ವಾರ್ತೆ
Published 29 ಜೂನ್ 2016, 5:19 IST
Last Updated 29 ಜೂನ್ 2016, 5:19 IST

ಉಡುಪಿ: ಪ್ರತಿದಿನ ಯೋಗಾಭ್ಯಾಸ ಮಾಡುವುದರಿಂದ ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು ಎಂದು ಮಣಿಪಾಲ ವಿಶ್ವವಿದ್ಯಾಲಯದ ಆಯುರ್ವೇದ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಕೃಷ್ಣ ಹೆಬ್ಬಾರ್‌ ಹೇಳಿದರು.

ಕುತ್ಪಾಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆಯ ಸ್ವಸ್ಥವೃತ್ತ ವಿಭಾಗ ಕಾಲೇಜಿನ ಭಾವಪ್ರಕಾಶ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲ ಡಾ. ಯು. ಶ್ರೀಕಾಂತ್‌, ಯೋಗವು ಎಲ್ಲ ಕಾಯಿಲೆಗಳ ನಿಯಂತ್ರಣಕ್ಕೆ ಸಹಕಾರಿ. ಅಲ್ಲದೆ, ಔಷಧಿಗಳನ್ನು ತೆಗೆದುಕೊಳ್ಳು ವುದು ಹಾಗೂ ವೈದ್ಯರ ಭೇಟಿಯಾಗುವು ದನ್ನು ಕಡಿಮೆ ಮಾಡುತ್ತದೆ ಎಂದರು.

ನಿರಂತರ ಯೋಗದಿಂದ ದೈಹಿಕ ಮತ್ತು ಮಾನಸಿಕ ಆರೋಗ್ಯ ಲಭಿಸುತ್ತದೆ ಎಂದು ಕಾಲೇಜಿನ ಸ್ವಸ್ಥವೃತ್ತ ವಿಭಾಗದ ಮುಖ್ಯಸ್ಥ ಡಾ. ಬಿ.ಆರ್‌. ದೊಡಮನಿ ಹೇಳಿದರು.ವೈದ್ಯೆ ಡಾ. ನಾಗಶ್ರೀ ಪ್ರಾರ್ಥಿಸಿದರು, ಸಹ ಪ್ರಾಧ್ಯಾಪಕ ಡಾ. ವಿಜಯ್‌ ಬಿ. ನೆಗಳೂರು ಸ್ವಾಗತಿಸಿದರು, ಸಹಾಯಕ ಪ್ರಾಧ್ಯಾಪಕರಾದ ಡಾ. ಸಂದೇಶ್‌ ಕುಮಾರ್‌ ಶೆಟ್ಟಿ ನಿರೂಪಿಸಿದರು, ಡಾ. ಯೋಗೀಶ್‌ ಆಚಾರ್ಯ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.