ADVERTISEMENT

‘ಮಕ್ಕಳನ್ನು ಇತರ ಮಕ್ಕಳೊಂದಿಗೆ ಹೋಲಿಸಬೇಡಿ’

​ಪ್ರಜಾವಾಣಿ ವಾರ್ತೆ
Published 3 ಜುಲೈ 2015, 5:07 IST
Last Updated 3 ಜುಲೈ 2015, 5:07 IST

ಕಾರ್ಕಳ:  ಹೆತ್ತವರು ತಮ್ಮ ಮಕ್ಕಳನ್ನು ಇತರ ಮಕ್ಕಳೊಂದಿಗೆ ಹೋಲಿಸುವುದು ಸರಿಯಲ್ಲ ಎಂದು ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಸಂಸ್ಥಾಪಕ-ನಿರ್ದೇ ಶಕ ಡಾ.ಸುಧಾಕರ ಶೆಟ್ಟಿ ತಿಳಿಸಿದರು.

ನಗರದ ಎಸ್.ವಿ.ಟಿ ವನಿತಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಂಘದ ಚಟುವಟಿಕೆಗಳನ್ನು ಉದ್ಘಾಟಿಸಿ ಮಾತನಾ ಡಿದ ಅವರು ಜೀವನದಲ್ಲಿ ಪ್ರಾಮಾಣಿಕ ತೆಯನ್ನು ಬೆಳೆಸಿಕೊಂಡು, ಶಿಸ್ತುಬದ್ಧ ಜೀವನವನ್ನು ನಡೆಸಿದಾಗ ಯಶಸ್ಸು ಸದಾ ನಮ್ಮದಾಗುತ್ತದೆ ಎಂದರು.

ವೆಂಕಟರಮಣ ಎಜುಕೇಶನ್ ಟ್ರಸ್ಟ್‌ನ ಕಾರ್ಯದರ್ಶಿ ಕೆ.ಪಿ.ಶೆಣೈ ಸಂಸ್ಥೆಯ ’ನೇಸರ’ ಭಿತ್ತಿಪತ್ರಿಕೆಯನ್ನು ಅನಾವರಣ ಗೊಳಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಕೇವಲ ಪಠ್ಯ ಅಭ್ಯಾಸಕ್ಕೆ ಮಾತ್ರ ಪ್ರಾಮುಖ್ಯತೆ ನೀಡದೆ ಪಠ್ಯೇತರ ಚಟುವಟಿಕೆಗಳಾದ ಕಲೆ, ಸಾಹಿತ್ಯ, ಸಂಗೀತಗಳಂತಹ ಅಭ್ಯಾಸಗಳಲ್ಲಿ ತೊಡಗಿ ಸಿಕೊಳ್ಳಬೇಕು. ಆಗ ವ್ಯಕ್ತಿತ್ವ ವಿಕಸನದ ಜತೆಗೆ ಜ್ಞಾನಾಭಿವೃದ್ಧಿಯಾಗಲಿದೆ ಎಂದು ಅವರು ಹೇಳಿದರು.

ವಿದ್ಯಾರ್ಥಿ ಸಂಘದ ನೂತನ ಪದಾಧಿಕಾರಿಗಳಿಗೆ ಪ್ರಮಾಣ ವಚನ ಬೋಧಿಸಲಾಯಿತು. ಪ್ರಾಂಶುಪಾಲ ರಾಮದಾಸ ಪ್ರಭು ಅಧ್ಯಕ್ಷತೆ ವಹಿಸಿದ್ದರು. ಪ್ರೌಢಶಾಲಾ ವಿಭಾಗದ ಹಿರಿಯ ಪದವೀಧರ ಶಿಕ್ಷಕಿ ಜೆ.ಕೃಷ್ಣವೇಣಿ ಉಪಸ್ಥಿತರಿದ್ದರು. ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಸುಖಲತಾ ಸ್ವಾಗತಿಸಿದರು. ಉಪಾಧ್ಯಕ್ಷೆ ಅಲ್ ಶಿಫಾ ವಂದಿಸಿದರು. ಮೇಧಿನಿ ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.