ಮೂಲ್ಕಿ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಗ್ರಾಮಾಭಿವೃದ್ಧಿಗೆ ಸಮುದಾಯದ ನೆರವು ನಿರಂತರವಾಗಿ ಸಿಗುತ್ತಿದ್ದು ಇದರಿಂದ ಗ್ರಾಮದ ಅಭ್ಯುದಯಕ್ಕೆ ಸಹಕಾರ ಸಿಕ್ಕಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಸದಸ್ಯೆ ಆಶಾ ಸುವರ್ಣ ಹೇಳಿದರು.
ಅವರು ಹಳೆಯಂಗಡಿ ಹಿಂದೂ ರುದ್ರಭೂಮಿ ನಿರ್ವಹಣಾ ಸಮಿತಿಗೆ ಧರ್ಮಸ್ಥಳದ ಗ್ರಾಮಾಭಿವೃದ್ಧಿ ಯೋಜನೆಯಿಂದ ಮಂಜೂರಾದ ಸಿಲಿಕಾನ್ ಚೇಂಬರ್ ಹಾಗೂ ತಾಲ್ಲೂಕು ಪಂಚಾಯಿತಿಯ ಅನುದಾನದಿಂದ ಸೌರ ವಿದ್ಯುತ್ ದೀಪವನ್ನು ಉದ್ಘಾಟಿಸಿ ಮಾತನಾಡಿದರು.
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಮುದಾಯ ಅಭಿವೃದ್ಧಿ ವಿಭಾಗದ ನಿರ್ದೇಶಕ ಬಿ.ಜಯರಾಮ ನೆಲ್ಲಿತ್ತಾಯ, ತಾಲ್ಲೂಕು ಪಂಚಾಯಿತಿ ಸದಸ್ಯೆ ಸಾವಿತ್ರಿ .ಜಿ.ಸುವರ್ಣ, ಹಳೆಯಂಗಡಿ ಪಂಚಾಯಿತಿ ಅಧ್ಯಕ್ಷೆ ಪೂರ್ಣಿಮಾ ಮಧು, ಹಳೆಯಂಗಡಿ ಪಿ.ಸಿ.ಎ ಬ್ಯಾಂಕ್ ಅಧ್ಯಕ್ಷ ಸತೀಶ್ ಭಟ್, ಮಾಜಿ ತಾಲ್ಲೂಕು ಪಂಚಾಯಿತಿ ಸದಸ್ಯ ವಿನೋದ್ ಬೊಳ್ಳೂರು, ಹಿಂದೂ ರುದ್ರಭೂಮಿ ನಿರ್ವಹಣಾ ಸಮಿತಿಯ ಅಧ್ಯಕ್ಷ ಪ್ರಕಾಶ್ ಕಾಮೆರೊಟ್ಟು, ಹಳೆಯಂಗಡಿ ಸಾರ್ವಜನಿಕ ಗಣೆಶೋತ್ಸವ ಸಮಿತಿಯ ಅಧ್ಯಕ್ಷ ಜಯಶೀಲ ಕೋಟ್ಯಾನ್ ಇನ್ನಿತರರು ಹಾಜರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.