ADVERTISEMENT

ಕುಮಟಾದಲ್ಲಿ 24.4 ಮಿ.ಮೀ. ಮಳೆ

​ಪ್ರಜಾವಾಣಿ ವಾರ್ತೆ
Published 22 ಸೆಪ್ಟೆಂಬರ್ 2017, 5:08 IST
Last Updated 22 ಸೆಪ್ಟೆಂಬರ್ 2017, 5:08 IST

ಕುಮಟಾ: ಪಟ್ಟಣ ಸೇರಿದಂತೆ ವಿವಿಧೆಡೆ ಗುರುವಾರ ಧಾರಾಕಾರ ಮಳೆ ಸುರಿ ಯಿತು. ಮಳೆ ಮಾಪನದಲ್ಲಿ ಕುಮಟಾದಲ್ಲಿ ಗುರುವಾರ 24.4 ಮಿಲಿ ಮೀಟರ್ ಮಳೆಯಾಗಿರುವ ವರದಿಯಾಗಿದ್ದು, ಇಲ್ಲಿಯವರೆಗೆ ಒಟ್ಟು 2,952.6 ಮಿಲಿ ಮೀಟರ್ ಮಳೆಯಾಗಿದೆ.

ಕಳೆದ ವರ್ಷ ಈ ದಿನ 2,928.2 ಮಿಲಿ ಮೀಟರ್ ಮಳೆಯಾಗಿತ್ತು. ಈ ಮಳೆ ತಡವಾಗಿ ನಾಟಿ ಮಾಡಿದ ಭತ್ತದ ಗದ್ದೆಗಳಿಗೆ ಅನುಕೂಲಕರವಾಗಿ ಪರಿಣಮಿಸಿದೆ ಎಂದು ಸಹಾಯಕ ಕೃಷಿ ನಿರ್ದೇಶಕ ಶಂಕರ ಹೆಗಡೆ ಅವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT