ADVERTISEMENT

ಖಾಸಗಿ ಆಸ್ಪತ್ರೆಗಳಲ್ಲಿ ಒಪಿಡಿ ಸೇವೆ ಸ್ಥಗಿತ

​ಪ್ರಜಾವಾಣಿ ವಾರ್ತೆ
Published 17 ನವೆಂಬರ್ 2017, 8:34 IST
Last Updated 17 ನವೆಂಬರ್ 2017, 8:34 IST

ಕಾರವಾರ: ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ (ಕೆಪಿಎಂಇ) ತಿದ್ದುಪಡಿ ಮಸೂದೆ ಮಂಡನೆ ವಿರೋಧಿಸಿ ಜಿಲ್ಲೆಯಾದ್ಯಂತ ಖಾಸಗಿ ಆಸ್ಪತ್ರೆಗಳಲ್ಲಿ ಹೊರ ರೋಗಿಗಳ ಚಿಕಿತ್ಸಾ ಸೌಲಭ್ಯ ಗುರುವಾರ ಸ್ಥಗಿತವಾಗಿತ್ತು.

ಖಾಸಗಿ ಆಸ್ಪತ್ರೆಗಳ ವೈದ್ಯರ ಮುಷ್ಕರದಿಂದ ಜಿಲ್ಲೆಯಾದ್ಯಂತ ರೋಗಿಗಳು ಪರದಾಡಿದರು. ಅವರು ಚಿಕಿತ್ಸೆಗಾಗಿ ಸರ್ಕಾರಿ ಆಸ್ಪತ್ರೆಗಳತ್ತ ಮುಖ ಮಾಡಿದ್ದರು. ಹೀಗಾಗಿ ಸರ್ಕಾರಿ ಆಸ್ಪತ್ರೆಗಳಲ್ಲಿ ಎಂದಿಗಿಂತ ರೋಗಿಗಳ ಸಂಖ್ಯೆ ಅಧಿಕವಾಗಿತ್ತು. ಬೆಳಿಗ್ಗೆಯಿಂದಲೇ ಸರದಿ ಸಾಲಿನಲ್ಲಿ ನಿಂತು ಚಿಕಿತ್ಸೆಗಾಗಿ ಕಾರ್ಡ್‌ ಮಾಡಿಸಿದರು. ಅಲ್ಲದೇ ಎಲ್ಲ ವಿಭಾಗಗಳಲ್ಲಿಯೂ ರೋಗಿಗಳು ಸಾಲು ಸಾಲಾಗಿ ನಿಂತಿದ್ದರು.

ಕೆಪಿಎಂಇ ತಿದ್ದುಪಡಿ ಮಸೂದೆಗೆ ವಿರೋಧ: ‘ಸರ್ಕಾರ ಕೆಪಿಎಂಇ ತಿದ್ದುಪಡಿ ಮಾಡಿ ಅದನ್ನು ಮಂಡಿಸಲು ಮುಂದಾಗುತ್ತಿರುವುದು ತಪ್ಪು. ಹೀಗಾಗಿ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಕರೆ ಕೊಟ್ಟಂತೆ ಜಿಲ್ಲೆಯಾದ್ಯಂತ ಎಲ್ಲ ಖಾಸಗಿ ಆಸ್ಪತ್ರೆಗಳನ್ನು ಬಂದ್ ಮಾಡಿ ಮುಷ್ಕರ ಹೂಡಲಾಗಿದೆ. ಆದರೆ ಜನರಿಗೆ ಸಮಸ್ಯೆ ಉಂಟು ಮಾಡಲು ಈ ಪ್ರತಿಭಟನೆ ಕೈಗೊಂಡಿಲ್ಲ’ ಎಂದು ಇಲ್ಲಿನ ಪಿಕಳೆ ನರ್ಸಿಂಗ್ ಹೋಂನ ವೈದ್ಯ ಡಾ.ನಿತಿನ್ ಪಿಕಳೆ ‘ಪ್ರಜಾವಾಣಿ’ಗೆ ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.