ADVERTISEMENT

‘ಸ್ಕೌಟ್ಸ್, ಗೈಡ್ಸ್‌ಗಳು ದೇಶದ ಆಸ್ತಿಯಾಗಲಿ’

ಜಿಲ್ಲಾ ಮಟ್ಟದ ಮೇಳದಲ್ಲಿ ಪಾಲ್ಗೊಂಡ ಸಾವಿರಕ್ಕೂ ಅಧಿಕ ಸ್ಕೌಟ್ಸ್ ಮತ್ತು ಗೈಡ್ಸ್‌

​ಪ್ರಜಾವಾಣಿ ವಾರ್ತೆ
Published 20 ಫೆಬ್ರುವರಿ 2017, 6:44 IST
Last Updated 20 ಫೆಬ್ರುವರಿ 2017, 6:44 IST

ಹೊನ್ನಾವರ: ‘ವಿದ್ಯಾರ್ಥಿಗಳು ರಾಷ್ಟ್ರಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕಿದ್ದು ಸ್ಕೌಟ್ಸ್‌ ಮತ್ತು ಗೈಡ್ಸ್‌ಗಳು ದೇಶದ ಆಸ್ತಿಯಾಗಿ ರೂಪುಗೊಳ್ಳಬೇಕು’ ಎಂದು ಭಾರತ ಸ್ಕೌಟ್ಸ್‌ ಮತ್ತು ಗೈಡ್ಸ್‌ನ ರಾಜ್ಯ ಸಂಸ್ಥೆಯ  ಮುಖ್ಯ ಆಯುಕ್ತ ಪಿ.ಜಿ.ಆರ್. ಸಿಂಧ್ಯ ಹೇಳಿದರು.

ವಿ.ಪಿ.ದೀನದಯಾಳು ಜನ್ಮ ಶತಮಾನೋತ್ಸವದ ಅಂಗವಾಗಿ ಹೊನ್ನಾವರದಲ್ಲಿ ಶನಿವಾರ ನಡೆದ  ಸ್ಕೌಟ್ಸ್ ಮತ್ತು ಗೈಡ್ಸ್‌ನ ಜಿಲ್ಲಾ ಮಟ್ಟದ ಮೇಳದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಶಾಸಕ ಮಂಕಾಳ ಎಸ್. ವೈದ್ಯ ಮಾತನಾಡಿ, ಸ್ಕೌಟ್ಸ್‌ ಮತ್ತು ಗೈಡ್ಸ್ ಶಿಸ್ತು ಇತರ ವಿದ್ಯಾರ್ಥಿಗಳಿಗೆ ಮಾದರಿಯಾಗಲಿ’ ಎಂದು ಆಶಿಸಿದರು.
ತಾಲ್ಲೂಕು  ಪಂಚಾಯ್ತಿ ಅಧ್ಯಕ್ಷ  ಅಣ್ಣಯ್ಯ ನಾಯ್ಕ, ಪಟ್ಟಣ ಪಂಚಾಯ್ತಿ ಅಧ್ಯಕ್ಷೆ  ಜೈನಾಬಿ ಸಾಬ್, ಜಿಲ್ಲಾ ಪಂಚಾಯ್ತಿ ಸದಸ್ಯರಾದ  ಶ್ರೀಕಲಾ ಶಾಸ್ತ್ರಿ, ಸವಿತಾ ಕೃಷ್ಣ ಗೌಡ, ತಹಶೀಲ್ದಾರ್‌ ವಿ.ಆರ್. ಗೌಡ, ಉಪನಿರ್ದೇಶಕ ರಾಮಕೃಷ್ಣ ನಾಯಕ, ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಎಸ್.ಭಟ್ಟ ಹಾಗೂ ರಾಜ್ಯಸಂಸ್ಥೆಯ ಸಾರ್ವಜನಿಕ ಸಂಪರ್ಕಾಧಿಕಾರಿ  ಚೆಲ್ಲಯ್ಯ ಇದ್ದರು.

ಸ್ಕೌಟ್ಸ್‌ ಮತ್ತು ಗೈಡ್ಸ್‌ನ ಜಿಲ್ಲಾ ಮುಖ್ಯ ಆಯುಕ್ತ ಡಾ.ಜಿ.ಜಿ. ಸಭಾಹಿತ ಸ್ವಾಗತಿಸಿದರು. ಜಿಲ್ಲಾ ಕಾರ್ಯದರ್ಶಿ  ಬಿ.ಡಿ.ಫರ್ನಾಂಡಿಸ್ ವರದಿ ವಾಚಿಸಿದರು. ಹೊನ್ನಾವರ ಸ್ಥಳೀಯ ಸಂಸ್ಥೆಯ ಅಧ್ಯಕ್ಷ ಕೃಷ್ಣಮೂರ್ತಿ ಭಟ್ಟ ಶಿವಾನಿ ವಂದಿಸಿದರು.

ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ ತಾಲ್ಲೂಕುಗಳಿಂದ 1350  ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ಪಟ್ಟಣದಲ್ಲಿ ನಡೆದ  ರ್‌್ಯಾಲಿಯಲ್ಲಿ ಭಾಗವಹಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.