ADVERTISEMENT

‘ಮಾದಕ ವಸ್ತುಗಳಿಂದ ಯುವಕರಿಗೆ ಆಪತ್ತು’

ಮಾದಕ ವಸ್ತುಗಳ ಸೇವನೆ ಮತ್ತು ಕಳ್ಳ ಸಾಗಾಣಿಕೆ ವಿರೋಧಿ ದಿನಾಚರಣೆ

​ಪ್ರಜಾವಾಣಿ ವಾರ್ತೆ
Published 6 ಜುಲೈ 2018, 14:08 IST
Last Updated 6 ಜುಲೈ 2018, 14:08 IST
ಕಾರವಾರದಲ್ಲಿ ಶುಕ್ರವಾರ ಆಯೋಜಿಸಲಾದ ಅಂತರರಾಷ್ಟ್ರೀಯ ಮಾದಕ ವಸ್ತುಗಳ ಸೇವನೆ ಮತ್ತು ಕಳ್ಳ ಸಾಗಾಣಿಕೆ ವಿರೋಧಿ ದಿನಾಚರಣೆಯಲ್ಲಿ ನಗರಸಭೆ ಉಪಾಧ್ಯಕ್ಷೆ ಲೀಲಾಬಾಯಿ ಠಾಣೇಕರ ಮಾತನಾಡಿದರು
ಕಾರವಾರದಲ್ಲಿ ಶುಕ್ರವಾರ ಆಯೋಜಿಸಲಾದ ಅಂತರರಾಷ್ಟ್ರೀಯ ಮಾದಕ ವಸ್ತುಗಳ ಸೇವನೆ ಮತ್ತು ಕಳ್ಳ ಸಾಗಾಣಿಕೆ ವಿರೋಧಿ ದಿನಾಚರಣೆಯಲ್ಲಿ ನಗರಸಭೆ ಉಪಾಧ್ಯಕ್ಷೆ ಲೀಲಾಬಾಯಿ ಠಾಣೇಕರ ಮಾತನಾಡಿದರು   

ಕಾರವಾರ: ಈಚಿನ ದಿನಗಳಲ್ಲಿ16ರಿಂದ 20 ವರ್ಷದ ಯುವಕರುಮಾದಕ ವಸ್ತುಗಳ ದಾಸರಾಗುತ್ತಿದ್ದಾರೆ. ಹೆಣ್ಣು– ಗಂಡು ಎಂಬ ಭೇದವಿಲ್ಲದೇ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳ ಭವಿಷ್ಯ ಇದರಿಂದ ಹಾಳಾಗುತ್ತಿದೆ ಎಂದುನಗರಸಭೆ ಉಪಾಧ್ಯಕ್ಷೆ ಲೀಲಾಬಾಯಿ ಠಾಣೇಕರವಿಷಾದಿಸಿದರು.

ನಗರದ ಸರ್ಕಾರಿ ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯದಲ್ಲಿ ಶುಕ್ರವಾರ ಆಯೋಜಿಸಲಾದಅಂತರರಾಷ್ಟ್ರೀಯ ಮಾದಕ ವಸ್ತುಗಳ ಸೇವನೆ ಮತ್ತು ಕಳ್ಳ ಸಾಗಾಣಿಕೆ ವಿರೋಧಿ ದಿನಾಚರಣೆಯ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮಕ್ಕಳನ್ನು ದಾರಿತಪ್ಪದಂತೆ ನೋಡಿಕೊಳ್ಳಲು ಪಾಲಕರು ಕುಟುಂಬದಲ್ಲಿ ಸೌಹಾರ್ದ ವಾತಾವರಣ ಮೂಡಿಸಬೇಕು. ಮನೆಯಲ್ಲಿ ಆರೋಗ್ಯಕರ ಪರಿಸರ ಇರಬೇಕು ಎಂದು ಅವರು ಸಲಹೆ ನೀಡಿದರು.

ADVERTISEMENT

ಕುಟುಂಬ ಪ್ರೀತಿಯಿಂದ ವಂಚಿತರಾದವರೇ ಹೆಚ್ಚಾಗಿಮಾದಕ ವಸ್ತುಗಳ ವ್ಯಸನಕ್ಕೆ ಒಳಗಾಗುತ್ತಿದ್ದಾರೆ. ಹಿರಿಯರ ಮಾರ್ಗದರ್ಶನ ದೊರೆತರೆ ಮಕ್ಕಳು ಪರಿಪೂರ್ಣ ವ್ಯಕ್ತಿಗಳಾಗಿ ರೂಪುಗೊಳ್ಳುತ್ತಾರೆ. ಇಲ್ಲದಿದ್ದರೆ ಸಮಾಜ ವಿರೋಧಿ ಶಕ್ತಿಗಳ ಜತೆ ಸೇರುವ ಸಾಧ್ಯತೆ ಇರುತ್ತದೆ ಎಂದು ಆತಂಕ ವ್ಯಕ್ತಪಡಿಸಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಜಿ.ಎನ್.ಅಶೋಕ ಕುಮಾರ ಪ್ರಾಸ್ತಾವಿಕವಾಗಿ ಮಾತನಾಡಿ, ‘ವಿಶ್ವದ ಶಾಂತಿ, ನೆಮ್ಮದಿಗೆ ಮಾದಕದ್ರವ್ಯಗಳ ತಡೆ ಅಗತ್ಯವಾಗಿದೆ. ನಮ್ಮ ದೇಶದಲ್ಲಿ ಪ್ರತಿವರ್ಷ ಸುಮಾರು8 ಕೋಟಿ ಜನರು ಈ ವ್ಯಸನಕ್ಕೆ ತುತ್ತಾಗುತ್ತಿದ್ದಾರೆ. ಇದರಲ್ಲಿ 6 ಕೋಟಿ ಜನ ಮದ್ಯವ್ಯಸನಿಗಳಾಗಿದ್ದಾರೆ.42 ಲಕ್ಷ ಜನ ಗಾಂಜಾ ಸೇವನೆಯ ಚಟಅಂಟಿಸಿಕೊಂಡಿದ್ದಾರೆ. ಇದನ್ನು ತಡೆಯುವ ನಿಟ್ಟನಲ್ಲಿ ಎಲ್ಲರೂ ಒಂದಾಗಿ ಕೆಲಸ ಮಾಡುವ ಅಗತ್ಯವಿದೆ’ ಎಂದು ಅವರು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸರ್ಕಾರಿ ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಕಲ್ಪನಾ ಕೆರವಡಿಕರ ಮಾತನಾಡಿ, ‘ಮಾದಕ ವಸ್ತುಗಳ ಸೇವನೆ ಹಲವಾರು ಹೇಯ ಕೃತ್ಯಗಳಿಗೆ ಪ್ರೇರೇಪಿಸುತ್ತದೆ. ಮಾದಕ ವಸ್ತುಗಳ ವಿರುದ್ಧ ಅರಿವು ಮೂಡಿಸಿ,ಹೋರಾಡಬೇಕು. ಜನರ ಚಳವಳಿಯಾಗಬೇಕು’ ಎಂದರು.

ಡಾ.ಸರ್ವೇಶಕುಮಾರ ಹಳಕಟ್ಟಿ ಉಪನ್ಯಾಸ ನೀಡಿದರು. ಡಾ.ಶಂಕರರಾವ್ ವಂದಿಸಿದರು.ಜಿಲ್ಲಾಡಳಿತ, ಜಿಲ್ಲಾಪಂಚಾಯ್ತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವಿವಿಧ ಸಂಘ– ಸಂಸ್ಥೆಗಳ ಸಹಯೋಗದೊಂದಿಗೆ ಈ ದಿನಾಚರಣೆ ಹಮ್ಮಿಕೊಳ್ಳಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.