ADVERTISEMENT

ದಾಖಲೆ ಇಲ್ಲದ ₹73.99 ಲಕ್ಷ ಮೌಲ್ಯದ ಆಭರಣ ವಶ

​ಪ್ರಜಾವಾಣಿ ವಾರ್ತೆ
Published 18 ಏಪ್ರಿಲ್ 2024, 14:23 IST
Last Updated 18 ಏಪ್ರಿಲ್ 2024, 14:23 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಕಾರವಾರ: ಸೂಕ್ತ ದಾಖಲೆ ಇಲ್ಲದೆ ಸಾಗಿಸಲಾಗುತ್ತಿದ್ದ ₹73.99 ಲಕ್ಷ ಮೌಲ್ಯದ ಬಂಗಾರ ಮತ್ತು ಬೆಳ್ಳಿ ಆಭರಣಗಳನ್ನು ತಾಲ್ಲೂಕಿನ ಅರ್ಗಾ ಚೆಕ್‍ಪೋಸ್ಟ್ ನಲ್ಲಿ ಕ್ಷಿಪ್ರ ಪಡೆ ಅಧಿಕಾರಿಗಳು ಬುಧವಾರ ರಾತ್ರಿ ವಶಕ್ಕೆ ಪಡೆದಿದ್ದಾರೆ.

‘ಚುನಾವಣೆ ಹಿನ್ನೆಲೆಯಲ್ಲಿ ಎರಡು ದಿನಗಳ ಹಿಂದೆ ತೆರೆಯಲಾಗಿರುವ ಚೆಕ್‍ಪೋಸ್ಟ್ ನಲ್ಲಿ ತಪಾಸಣೆ ಮಾಡುವಾಗ ಕಾರವಾರದ ಉದ್ಯಮಿಯೊಬ್ಬರ ಕಾರಿನಲ್ಲಿ ಸೂಕ್ತ ದಾಖಲೆ ಇಲ್ಲದೆ ಒಯ್ಯುತ್ತಿದ್ದ ಆಭರಣಗಳು ಪತ್ತೆಯಾದವು. ₹69.98 ಲಕ್ಷ ಮೌಲ್ಯದ 892.25 ಗ್ರಾಂ ಚಿನ್ನ, ₹4.01 ಲಕ್ಷ ಮೌಲ್ಯದ 4.75 ಕೆ.ಜಿ ಬೆಳ್ಳಿ ಆಭರಣ ವಾಹನದಲ್ಲಿತ್ತು. ದಾಖಲೆಗಳಿದ್ದರೂ ತೆರಿಗೆ ಪಾವತಿಗೆ ಸಂಬಂಧಿಸಿದ ದಾಖಲೆಗಳು ಇರಲಿಲ್ಲ. ಹೀಗಾಗಿ ವಶಕ್ಕೆ ಪಡೆಯಲಾಗಿದೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ADVERTISEMENT

ಕಳೆದ 24 ಗಂಟೆಯ ಅವಧಿಯಲ್ಲಿ ಜಿಲ್ಲೆಯ ವಿವಿಧೆಡೆ ಅಬಕಾರಿ ಇಲಾಖೆಯಿಂದ ₹23 ಸಾವಿರ ಮೌಲ್ಯದ 54 ಲೀ ಅಕ್ರಮ ಮದ್ಯ ವಶಕ್ಕೆ ಪಡೆಯಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.