ADVERTISEMENT

‘ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುವೆ’

​ಪ್ರಜಾವಾಣಿ ವಾರ್ತೆ
Published 15 ಮೇ 2017, 5:08 IST
Last Updated 15 ಮೇ 2017, 5:08 IST

ಮಸಬಿನಾಳ (ಬಸವನಬಾಗೇವಾಡಿ): ಕುಡಿಯುವ ನೀರು, ರಸ್ತೆ ಸುಧಾರಣೆ ಸೇರಿದಂತೆ ಹಲವಾರು ಅಭಿವೃದ್ಧಿ ಕಾಮಗಾರಿ ಕೈಗೊಳ್ಳುವ ಮೂಲಕ ಮತಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಬದ್ಧನಾಗಿದ್ದೇನೆ ಎಂದು ಶಾಸಕ ಶಿವಾನಂದ ಪಾಟೀಲ ಹೇಳಿದರು.

ಗ್ರಾಮದಲ್ಲಿ ಶನಿವಾರ ಲೋಕೋಪ­ಯೋಗಿ ಇಲಾಖೆ ಅಡಿಯಲ್ಲಿ ₹ 2 ಕೋಟಿ ಅನುದಾನದಲ್ಲಿ 2 ಕಿ.ಮೀ ಅಂತರದ ರಸ್ತೆ ಅಗಲೀಕರಣ, ಸುಧಾರಣೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು. 

ಮತಕ್ಷೇತ್ರದಲ್ಲಿ ಕುಡಿ­ಯುವ ನೀರು ಪೂರೈಕೆಗಾಗಿ ಮನಗೂಳಿ, ಕೊಲ್ಹಾರ, ಅರೇಶಂಕರ, ಇಂಗಳೇಶ್ವರ ಬಹುಹಳ್ಳಿ ಕುಡಿಯುವ ನೀರು ಯೋಜನೆ ಅನುಷ್ಠಾನ ಮಾಡಲಾಗುತ್ತಿದೆ. ಕ್ಷೇತ್ರದಲ್ಲಿ ಬರ ಪರಿಸ್ಥಿತಿ ಇದ್ದರೂ ನೀರಿಗಾಗಿ ಟ್ಯಾಂಕರ್ ಹಚ್ಚುವ ಪ್ರಮೇಯ ಬಂದಿಲ್ಲ. ಜಿಲ್ಲೆಯ ಉಳಿದ ತಾಲ್ಲೂಕಿನಲ್ಲಿ ಟ್ಯಾಂಕರ್ ಮೂಲಕ ನೀರು ಪೂರೈಕೆಯಾಗುತ್ತಿದೆ ಎಂದರು.

ADVERTISEMENT

ಜಿಲ್ಲಾ ಪಂಚಾಯ್ತಿ ಮಾಜಿ ಸದಸ್ಯ ಚಂದ್ರಶೇಖರಗೌಡ ಪಾಟೀಲ, ಶಾಸಕ ಶಿವಾನಂದ ಪಾಟೀಲ ಅವರು ಮುತುವರ್ಜಿ ವಹಿಸಿ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ.  ಶಾಸಕರು ಕೈಗೊಂಡಿರುವ ಅಭಿವೃದ್ಧಿ ಕಾರ್ಯಕ್ಕೆ ಪ್ರೋತ್ಸಾಹ ನೀಡಬೇಕಿದೆ. ಎಂದರು.

ವೇದಿಕೆಯಲ್ಲಿ ಗ್ರಾಮ ಪಂಚಾಯ್ತಿ ಮಾಜಿ ಅಧ್ಯಕ್ಷ ರಾಜುಗೌಡ ಪಾಟೀಲ, ಶಾಂತಪ್ಪ ಬೈಚಬಾಳ, ಎಪಿಎಂಸಿ ಮಾಜಿ ನಿರ್ದೇಶಕ ಬಸವರಾಜ ಸೋಮಪೂರ, ತಾ.ಪಂ ಅಧಿಕಾರಿ ಬಿ.ಎಸ್.ರಾಠೋಡ, ಲೋಕೋಪಯೋಗಿ ಇಲಾಖೆಯ ಎಇಇ ಜಿ.ಎಸ್.ಪಾಟೀಲ, ಎಂಜಿನಿಯರ ಭೀಮನಗೌಡ ಪಾಟೀಲ ಇದ್ದರು. ಬಿ.ಎಸ್.ಹಾರಿವಾಳ ಮಾತನಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.